1. ಸುದ್ದಿಗಳು

18 ವರ್ಷದವರೂ ಇನ್ಮುಂದೆ ಮದ್ಯ ಖರೀದಿಸಬಹುದು: ಹೊಸ ಮದ್ಯದಂಗಡಿಗೂ ಅಸ್ತು!

Hitesh
Hitesh
18-year-olds can buy alcohol from now on: New liquor store too!

ಮುಂದಿನ ದಿನಗಳಲ್ಲಿ 18 ವರ್ಷದವರೂ ಸಹ ಮದ್ಯವನ್ನು ಖರೀದಿ ಮಾಡಬಹುದಾಗಿದೆ. ಹೌದು ಈಗ ಇರುವ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬ ನಿರ್ಬಂಧಕ್ಕೆ ತಿದ್ದುಪಡಿ ತರಲಾಗಿದೆ.  

Weather Updates| ಉತ್ತರ ಭಾರತದಲ್ಲಿ ತೀವ್ರ ಚಳಿ: ಕಾನ್ಪುರದಲ್ಲಿ 98 ಜನ ಸಾವು !

ಮದ್ಯ ಖರೀದಿ ವಯಸ್ಸಿನ ಮಿತಿಯನ್ನು 18 ವರ್ಷಗಳಿಗೆ ಇಳಿಸುವ ನಿಟ್ಟಿನಲ್ಲಿ  ಕರ್ನಾಟಕ ಅಬಕಾರಿ ಪರವಾನಿಗೆ (ಸಾಮಾನ್ಯ ಷರತ್ತುಗಳು) ನಿಯಮಗಳು–1967ಕ್ಕೆ ತಿದ್ದುಪಡಿ ಮಾಡಲು ಸರ್ಕಾರ ಮುಂದಾಗಿದೆ.

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬ  ಸೆಕ್ಷನ್‌ 10 (1) (ಇ) ಜಾರಿಯಲಿದ್ದು, ಅದನ್ನು ಬದಲಿಸಿ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಹೊಸದಾಗಿ ಪ್ರಸ್ತಾವನೆಯನ್ನು ಸೇರಿಸಲಾಗಿದೆ.  

pm kisan update| ಪಿ.ಎಂ ಕಿಸಾನ್‌ 13ನೇ ಕಂತಿಗೆ ಮೊದಲು ಈ ಅಪ್ಡೇಟ್‌ ಮಾಡಿ 

ಅಬಕಾರಿ ನಿಯಮಗಳಿಗೆ ತಿದ್ದುಪಡಿ ತರಲು ಇಲಾಖೆ ಸಿದ್ಧಪಡಿಸಿರುವ ಕರಡು ಪ್ರತಿಯನ್ನು ಸೋಮವಾರ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಅಬಕಾರಿ ಪರವಾನಗಿಗಳು (ಸಾಮಾನ್ಯ ಷರತ್ತುಗಳು) ನಿಯಮಗಳು–1967ರ ಸೆಕ್ಷನ್‌ 10 (1) (ಇ) ಅಡಿಯಲ್ಲಿ ಮದ್ಯ ಖರೀದಿದಾರನ ವಯಸ್ಸಿಗೆ ವಿಧಿಸಿದ್ದ ನಿರ್ಬಂಧವನ್ನು ಸಡಿಲ ಮಾಡುವುದಕ್ಕೆ ಸಂಬಂಧಿಸಿದಂತೆ ತಿದ್ದುಪಡಿಯಲ್ಲಿ ಉಲ್ಲೇಖವನ್ನೂ ಮಾಡಲಾಗಿದೆ.  

ಇನ್ನು ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು 5 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ಗ್ರಾಮ ಪಂಚಾಯಿತಿಗಳನ್ನು ಹೊರತುಪಡಿಸಿ, ಇನ್ನುಳಿದ ಪ್ರದೇಶಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳ ಅಂಚಿನಿಂದ 500 ಮೀಟರ್‌ವರೆಗಿನ ಪ್ರದೇಶದಲ್ಲಿ ಹೊಸ ಮದ್ಯದಂಗಡಿ ತೆರೆಯುವುದನ್ನು ನಿರ್ಬಂಧಿಸಿರುವುದನ್ನು ಅಬಕಾರಿ ನಿಯಮಗಳ ವ್ಯಾಪ್ತಿಗೆ ತರಲಾಗುತ್ತಿದೆ.

ಚಿನ್ನದ ದರದಲ್ಲಿ ಮತ್ತೆ ಏರಿಕೆ, ಎಷ್ಟಿದೆ ಇಂದಿನ ಚಿನ್ನದ ದರ ? 

ಹೆದ್ದಾರಿಗಳ ಅಂಚಿನಿಂದ 500 ಮೀಟರ್‌ವರೆಗೆ ಮದ್ಯದಂಗಡಿಗಳನ್ನು ನಿಷೇಧಿಸಿ ಸುಪ್ರೀಂ ಕೋರ್ಟ್‌ 2016ರಲ್ಲಿ ತೀರ್ಪು ನೀಡಿತ್ತು. ನಗರ ಸ್ಥಳೀಯ ಸಂಸ್ಥೆಗಳು ಮತ್ತು 5 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ಪ್ರದೇಶಗಳಲ್ಲಿ ನಿರ್ಬಂಧಿತ ಪ್ರದೇಶದ ಮಿತಿಯನ್ನು 220 ಮೀಟರ್‌ಗೆ ಪರಿಷ್ಕರಿಸಿ 2017ರಲ್ಲಿ ಸುಪ್ರೀಂ ಕೋರ್ಟ್‌ ಮತ್ತೊಂದು ಆದೇಶ ಹೊರಡಿಸಿತ್ತು.

ಹೆದ್ದಾರಿ ಪಕ್ಕದ ಮದ್ಯದಂಗಡಿಗಳಿಗೆ ಸಂಬಂಧಿಸಿದಂತೆ 2017ರಿಂದಲೂ ಸುತ್ತೋಲೆ ಮೂಲಕ ಜಾರಿಯಲ್ಲಿದ್ದ ನಿರ್ಬಂಧವನ್ನು ನಿಯಮಗಳಲ್ಲಿ ಸೇರಿಸಲಾಗುತ್ತಿದೆ. ಇದಕ್ಕಾಗಿ ಕರ್ನಾಟಕ ಅಬಕಾರಿ (ಸನ್ನದುಗಳಿಗೆ ಸಾಮಾನ್ಯ ಷರತ್ತುಗಳು) ನಿಯಮ–1967ರ ಸೆಕ್ಷನ್‌ 5ಕ್ಕೆ ತಿದ್ದುಪಡಿ ತರಲಾಗುತ್ತಿದೆ.

 20 ಸಾವಿರ ಅಥವಾ ಅದಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹೆದ್ದಾರಿಯ ಅಂಚಿನಿಂದ 220 ಮೀಟರ್‌ ನಂತರದಲ್ಲಿ ಮದ್ಯದಂಗಡಿಗಳಿಗೆ ಪರವಾನಗಿಗೆ ಅರ್ಹವಾಗಿದೆ.

ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ 2011ರ ಜನಗಣತಿ ಪ್ರಕಾರ 5 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ಪ್ರದೇಶಗಳ ವ್ಯಾಪ್ತಿಗೆ 500 ಮೀಟರ್‌ ನಿರ್ಬಂಧ ಅನ್ವಯವಾಗುವುದಿಲ್ಲ ಎನ್ನುವ ಉದ್ದೇಶಿತ ತಿದ್ದುಪಡಿಯಲ್ಲಿ ಉಲ್ಲೇಖ ಮಾಡಲಾಗಿದೆ.  

Aadhaar Card| ಆಧಾರ್ ಕಾರ್ಡ್ ನವೀಕರಣ: UIDAI ಟೋಲ್ ಫ್ರೀ ಸಂಖ್ಯೆ ಪರಿಚಯ 

18-year-olds can buy alcohol from now on: New liquor store too!

ಕೇಂದ್ರ ಅಥವಾ ರಾಜ್ಯ ಸರ್ಕಾರಿ ಕಚೇರಿಗಳಿಂದ 100 ಮೀಟರ್‌ ಅಂತರದಲ್ಲಿ ಮದ್ಯದಂಗಡಿ ಪರವಾನಗಿ ನೀಡುವಂತಿಲ್ಲ ಎಂಬ ನಿಯಮವನ್ನು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಿಎಲ್‌–4 (ಕ್ಲಬ್‌) ಸಿಎಲ್‌–6ಎ (ತಾರಾ ಹೋಟೆಲ್‌) ಮತ್ತು ಸಿಎಲ್‌–7ಗಳಿಗೆ (ಪ್ರವಾಸಿ ಹೋಟೆಲ್‌ ಸನ್ನದು) ಸೀಮಿತವಾಗಿ ಕೈಬಿಡುವ ಪ್ರಸ್ತಾವವೂ ಇದರಲ್ಲಿ ಇರುವುದು ವಿಶೇಷವಾಗಿದೆ. 

ದೆಹಲಿಯ ಪೆರೇಡ್‌: ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ!     

Published On: 12 January 2023, 11:07 AM English Summary: 18-year-olds can buy alcohol from now on: New liquor store too!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.