1. ಸುದ್ದಿಗಳು

14 ಲಕ್ಷ ರೈತರಿಗೆ 1900 ಕೋಟಿ ಬೆಳೆಹಾನಿ ಪರಿಹಾರ: ಸಿಎಂ ಬೊಮ್ಮಾಯಿ

Kalmesh T
Kalmesh T
1900 crore crop loss compensation for 14 lakh farmers: CM Bommai

ಯಾವುದೇ ವರ್ಗದ ವಿದ್ಯಾರ್ಥಿ ವೇತನ ಪಡೆದಿದ್ದರೂ ರೈತ ಮಕ್ಕಳು, ರೈತ ವಿದ್ಯಾನಿಧಿಯನ್ನು ಪಡೆಯಬಹುದಾಗಿದೆ. ಇದು ಸರ್ಕಾರದ ರೈತಪರ ನಿಲುವಾಗಿದೆ.

ಕೇಂದ್ರ ಸರ್ಕಾರ ನೀಡುವ ಬೆಳೆಹಾನಿ ಪರಿಹಾರದ ಜೊತೆಗೆ ರಾಜ್ಯಸರ್ಕಾರದ ಪರಿಹಾರವನ್ನು ಸೇರಿಸಿ ದುಪ್ಪಟ್ಟು ಬೆಳೆಹಾನಿ ಪರಿಹಾರವನ್ನು ನೀಡಲಾಗುತ್ತಿದೆ.

14 ಲಕ್ಷ ರೈತರಿಗೆ 1900 ಕೋಟಿ ರೂ.ಗಳ ಬೆಳೆಹಾನಿ ಪರಿಹಾರವನ್ನು ಎರಡು ತಿಂಗಳ ಅವಧಿಯೊಳಗೆ ನೀಡಲಾಗಿದೆ. ರಾಜ್ಯ ಸರ್ಕಾರವು ಈ ಹಿಂದಿನ ಸರ್ಕಾರಗಳ ಪರಿಹಾರಕ್ಕಿಂತ ಹೆಚ್ಚಿನ ಮೊತ್ತವನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದರು.

ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಯಲ್ಲಿ ಕೃಷಿ ಸಾಲವನ್ನು ₹ 20 ಲಕ್ಷ ಕೋಟಿ ಹೆಚ್ಚಿಸುವ ಗುರಿ

ಕೃಷಿ ಪ್ರಶಸ್ತಿಗೆ ಭಾಜನರಾದವರ ಮಕ್ಕಳಿಗೆ ಕೃಷಿವಿಶ್ವವಿದ್ಯಾಲಯದಲ್ಲಿ  ಸ್ನಾತಕೋತ್ತರ ಸೇರಿದಂತೆ  ಉನ್ನತ ಶಿಕ್ಷಣದ ಶುಲ್ಕವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಅವರು ಇಂದು ಕೃಷಿ ಇಲಾಖೆ ಹಾಗೂ  ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ರೈತ ಶಕ್ತಿ, ಕೃಷಿ ಕಾರ್ಮಿಕರ ಮಕ್ಕಳಿಗೆ  ರೈತ ವಿದ್ಯಾ ನಿಧಿ, ಕೃಷಿ ಸಂಜೀವಿನಿ ವಾಹನಗಳ, ಡಾ: ಎಸ್.ವಿ.ಪಾಟೀಲ್, ಕೃಷಿ ಸಂಶೋಧನೆ, ತರಬೇತಿ ಹಾಗೂ ರೈತರ ಶ್ರೇಯೋಭಿವ್ರದ್ಧಿ  ಪೀಠದ  ಲೋಕಾರ್ಪಣೆ ನರವೇರಿಸಿ ಕೃಷಿ ಪಂಡಿತ ಮತ್ತು ಕೃಷಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ರೈತರ ಪರವಾಗಿ ವಿಶೇಷ ಬಜೆಟ್

ಈ ಬಾರ ರೈತರ ಪರವಾಗಿ ವಿಶೇಷವಾದ ಬಜೆಟ್ ಇರಲಿದೆ. ಗ್ರಾಮೀಣ ಬದುಕು ಹಸನಾಗಬೇಕು. ಅಲ್ಲಿ ಆರ್ಥಿಕತೆ ಬೆಳೆದು ಸಾಮಾಜಿಕವಾಗಿ ಸಮಾನತೆ ತರುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

ಸೂಕ್ಷ್ಮ ನೀರಾವರಿ ಯೋಜನೆ ಪ್ರೋತ್ಸಾಹಕ್ಕೆ ₹5,300 ಕೋಟಿ ಮೀಸಲು

ಅದಕ್ಕಾಗಿ ಧಾರವಾಡ ಕೃಷಿ ವಿವಿ  ಸ್ಥಾಪಕರಾದ ಡಾ: ಎಸ್.ವಿ ಪಾಟೀಲ್ ಅವರ ಹೆಸರಿನಲ್ಲಿ  ಪೀಠ ಸ್ಥಾಪಿಸಿ ಉದ್ಘಾಟಿಸಲಾಗಿದೆ. ಕೃಷಿಗೆ ಪೂರಕವಾಗಿರುವ ಇತರೆ ಕಸುಬುದಾರರಿಗೆ ಕಾಯಕ ಯೋಜನೆ ರೂಪಿಸಲಾಗಿದೆ.

ಸ್ವಾಮಿ ವಿವೇಕಾನಂದ ಯುವಶಕ್ತಿಯೋಜನೆಯನ್ನು ಮುಂದಿನ ವಾರ ಉದ್ಘಾಟಿಸಲಾಗುತ್ತಿದೆ. ಹಾಗೂ ಸ್ತ್ರೀ ಶಕ್ತಿ ಯೋಜನೆ ಜಾರಿಗೆ ತಂದು ಸ್ವಯಂ ಉದ್ಯೋಗಕ್ಕೆ ನೆರವು ನೀಡಲಾಗುತ್ತಿದೆ ಎಂದರು.

ರೈತಶಕ್ತಿ ಯೋಜನೆ ಸರ್ಕಾರದ ದಾಖಲೆಯ ನಿರ್ಣಯ

ಸುಮಾರು 51 ಲಕ್ಷ ರೈತರ ಖಾತೆಗೆ 390 ಕೋಟಿ ರೂ.ಗಳನ್ನು ವರ್ಗಾಯಿಸಲಾಗಿದೆ. ರೈತರ ಯಂತ್ರೋಪಕರಣಕ್ಕೆ ಡೀಸೆಲ್ ವೆಚ್ಚವನ್ನು ಸರ್ಕಾರವೇ ಭರಿಸುವ ದಾಖಲೆಯ ಕಾರ್ಯಕ್ರಮ.

ಸಿಹಿ ಸುದಿ: ಪಿಎಂ ಆವಾಸ್ ಯೋಜನೆ ವೆಚ್ಚ 79,000 ಕೋಟಿಗೆ ಹೆಚ್ಚಳ

ಇದೊಂದು ದಾಖಲೆಯ ನಿರ್ಣಯಕ್ಕೆ 500 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಕೃಷಿಯಲ್ಲಿ ಆದಾಯ ಹೆಚ್ಚಬೇಕಾದರೆ ಕೃಷಿ ಸೇರಿದಂತೆ ಕುಟುಂಬದ ಇತರ ಸದಸ್ಯರು ಬೇರೆ ಬೇರೆ ವೃತ್ತಿಯಲ್ಲಿದ್ದಾಗ ಮಾತ್ರ ಆ ಕುಟುಂಬ ಸಬಲವಾಗುತ್ತದೆ.

ಕೃಷಿ ಅಭಿವೃದ್ಧಿಕಂಡಿದ್ದು, ಹಸಿರು ಕ್ರಾಂತಿಯಾಗಿದೆ. ದೇಶದ 130 ಕೋಟಿ ಜನರಿಗೆ ಆಹಾರ ದೊರೆಯುತ್ತಿರುವುದರಲ್ಲಿ ರೈತರು ಮಹತ್ವದ ಪಾತ್ರ ವಹಿಸುತ್ತಾರೆ.

ಕೃಷಿ ಸಂಶೋಧನೆಗಳು, ಆವಿಷ್ಕಾರಗಳನ್ನು ರೈತರು, ಕೃಷಿ ವಿವಿಗಳು ಕೈಗೊಳ್ಳುತ್ತಿದ್ದು, ಕೃಷಿ ಕ್ಷೇತ್ರ ಅಭಿವೃದ್ಧಿಗೊಳಿಸುತ್ತಿದ್ದಾರೆ.

11 ಲಕ್ಷ ರೈತರ ಮಕ್ಕಳಿಗೆ 488 ಕೋಟಿ  ರೈತವಿದ್ಯಾನಿಧಿ :

ಕೃಷಿ ಕ್ಷೇತ್ರದ ಅಭಿವೃದ್ಧಿಯಾಗುತ್ತಿದ್ದರೂ ರೈತರ ಸ್ಥಿತಿ ಸುಧಾರಿಸಿಲ್ಲ. ಆದ್ದರಿಂದ ರೈತರು ಸ್ವಾವಲಂಬನೆಯ ಬದುಕು ಬದುಕಲು, ಆದಾಯ ಹೆಚ್ಚಿಸಲು, ರೈತ ಮಕ್ಕಳು ವಿವಿಧ ವೃತ್ತಿಯಲ್ಲಿ ತೊಡಗಿಕೊಳ್ಳಬೇಕೆಂಬ ಉದ್ದೇಶದಿಂದ ಸರ್ಕಾರ ರೈತ ವಿದ್ಯಾನಿಧಿ ಯೋಜನೆಯನ್ನು ಜಾರಿಗೆ ತಂದಿದೆ.

ಕೇವಲ  ನಗರಪ್ರದೇಶದ ಮಕ್ಕಳಿಗೆ ಶಿಕ್ಷಣ ಮೀಸಲಾಗಬಾರದು. ಗ್ರಾಮೀಣ ಮಕ್ಕಳಿಗೂ ಉತ್ತಮ ಶಿಕ್ಷಣ ನೀಡಿ ಅವಕಾಶಗಳನ್ನು ನೀಡುವ ಸಲುವಾಗಿ ರೈತ ವಿದ್ಯಾನಿಧಿಯನ್ನು ಜಾರಿಗೆ ತಂದಿದೆ. 11 ಲಕ್ಷ ರೈತರ ಮಕ್ಕಳಿಗೆ 488 ಕೋಟಿ ರೂ.ಗಳ ವಿದ್ಯಾನಿಧಿ ನೀಡಲಾಗಿದೆ.

ಇಂದು ನೀಡಲಾಗಿರುವ  ರೈತಶಕ್ತಿ ಯೋಜನೆ, ರೈತ ವಿದ್ಯಾನಿಧಿ ಯೋಜನೆಗಳಿಗೆ ಫಲಾನುಭವಿಗಳಿಂದ ಯಾವುದೇ ಅರ್ಜಿ ಪಡೆಯಲಾಗಿಲ್ಲ. ಒಮ್ಮೆ ದಲಿತ ರೈತರ ಮಗಳು ನನ್ನನ್ನು ಭೇಟಿಯಾದಳು.

ಆ ಹೆಣ್ಣುಮಗಳು ಎಸ್ ಸಿ ಎಸ್ ಟಿ ವಿದ್ಯಾರ್ಥಿ ವೇತನ ಹಾಗೂ ರೈತ ವಿದ್ಯಾನಿಧಿಗಳೆರಡೂ ಲಭಿಸಿದೆ ಎಂದು ಸಂತೋಷ ವ್ಯಕ್ತಪಡಿಸಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

Published On: 01 February 2023, 06:26 PM English Summary: 1900 crore crop loss compensation for 14 lakh farmers: CM Bommai

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.