ದೇಶದೆಲ್ಲೆಡೆ ರೈತರನ್ನು, ಪಶುಪಾಲಕರನ್ನ ಆತಂಕಕ್ಕೆ ತಳ್ಳಿದ್ದ ಲಂಪಿ ಚರ್ಮ ರೋಗದಿಂದಾಗಿ ಸಾವನ್ನಪ್ಪುವ ಜಾನುವಾರು ಮಾಲೀಕರಿಗೆ ನೆರವು ನೀಡಲು ಸರ್ಕಾರದಿಂದ 2 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಇದನ್ನೂ ಓದಿರಿ: ರೈತರೇ ಗಮನಿಸಿ: ಗಂಗಾ ಕಲ್ಯಾಣ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಕೆಗೆ ಅ.20 ಕೊನೆ ದಿನ..
lumpy skin disease: ಚರ್ಮಗಂಟು ರೋಗದಿಂದ ಜಾನುವಾರುಗಳು ಸಾವನ್ನಪ್ಪಿದ ಪ್ರಕರಣದಲ್ಲಿ ಮಾಲೀಕರುಗಳಿಗೆ ಪರಿಹಾರ ನೀಡಲು 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ (Prabhu Chauhan) ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಚರ್ಮಗಂಟು ರೋಗವು ನೇರವಾಗಿ ಜಾನುವಾರುಗಳ ಉತ್ಪಾದಕತೆಯನ್ನು ಕುಂಠಿತಗೊಳಿಸುವುದರಿಂದ ರೈತರು ಹಾಗೂ ಜಾನುವಾರು ಮಾಲೀಕರ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುವುದನ್ನು ತಡೆಗಟ್ಟಲು ಪರಿಹಾರ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಚರ್ಮಗಂಟು ರೋಗದಿಂದ ಉಂಟಾಗುವ ಜಾನುವಾರುಗಳ ಮರಣದಿಂದ ಮಾಲೀಕರಿಗೆ ನಷ್ಟವನ್ನು ಭರಿಸಲು 2022ರ ಆಗಸ್ಟ್ 1ನೇ ತಾರೀಖಿನಿಂದ ಅನ್ವಯ ಆಗುವಂತೆ ಪ್ರತಿ ಹೈನು ರಾಸುಗಳಿಗೆ ಗರಿಷ್ಠ 20,000 ರೂ. ಮತ್ತು ಎತ್ತುಗಳಿಗೆ 30,000 ರೂ. ಹಾಗೂ ಪ್ರತಿ ಕರುವಿಗೆ 5,000 ರೂ. ಪರಿಹಾರ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಇನ್ನೂ 2 ದಿನ ಮಳೆ ಸಾಧ್ಯತೆ! ಯಾವ ಜಿಲ್ಲೆಯಲ್ಲಿ ಏನೇನಾಗಲಿದೆ ಗೊತ್ತೆ?
ರಾಜ್ಯದಲ್ಲಿ ಜಾನುವಾರುಗಳ ಚರ್ಮಗಂಟು ರೋಗವನ್ನು ಹತೋಟಿಗೆ ತರಲಾಗುತ್ತಿದೆ. ರಾಜ್ಯಾದ್ಯಂತ 2,65,646 ರಾಸುಗಳಿಗೆ ಲಸಿಕೆ ನೀಡಲಾಗಿದೆ.
ಲಭ್ಯವಿರುವ 3,42,156 ಡೋಸ್ ಲಸಿಕೆಯನ್ನು ಜಾನುವಾರುಗಳಿಗೆ ನೀಡಲಾಗುತ್ತಿದೆ. ಈ ವಾರ 35,000 ಲಸಿಕೆ ಲಭ್ಯವಾಗಲಿದ್ದು, ಚರ್ಮಗಂಟು ರೋಗವನ್ನು ನಿಯಂತ್ರಣಕ್ಕೆ ತರಲು ಬೇಕಾದ ಔಷಧ, ಚಿಕಿತ್ಸೆ ನೀಡಲಾಗುತ್ತಿದೆ.
ರೈತರು ಆತಂಕಕ್ಕೆ ಒಳಗಾಗದೇ ಸರ್ಕಾರದೊಂದಿಗೆ ಸಹಕರಿಸುವಂತೆ ಪ್ರಭು ಚವ್ಹಾಣ್ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಈವರೆಗೆ 23,784 ರಾಸುಗಳು ಚರ್ಮಗಂಟು ರೋಗದಿಂದ ಬಳಲುತ್ತಿದ್ದು, ಈ ಪೈಕಿ 11,494 ರಾಸುಗಳು ಚೇತರಿಕೆಯಾಗಿವೆ. ಇನ್ನುಳಿದ ರಾಸುಗಳಿಗೆ ಸರ್ಕಾರದಿಂದ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ಈವರೆಗೆ 680 ಜಾನುವಾರುಗಳು ಮೃತಪಟ್ಟಿರುತ್ತವೆ. ಮೃತಪಟ್ಟ ಜಾನುವಾರುಗಳ ಮಾಲೀಕರಿಗೆ ಪರಿಹಾರ ಧನ ವಿತರಣೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಸಿಹಿಸುದ್ದಿ: ರೈತರಿಗೆ 5 ತಾಸಿನ ಬದಲು 7 ತಾಸು ವಿದ್ಯುತ್ ಪೂರೈಕೆ ಸಿಎಂ ಬೊಮ್ಮಾಯಿ!
ಚರ್ಮಗಂಟು ರೋಗವು ಜಾನುವಾರುಗಳಲ್ಲಿ ಕಂಡು ಬರುವ ಸಾಂಕ್ರಾಮಿಕ ವೈರಸ್ ಕಾಯಿಲೆಯಾಗಿದೆ. ರೋಗಗ್ರಸ್ತ ಪ್ರಾಣಿಗಳಲ್ಲಿ ಪ್ರಾರಂಭಿಕ ಹಂತದಲ್ಲಿ ಜ್ವರ, ತದನಂತರ ಚರ್ಮಗಂಟು ಗಂಟು ಕಾಣಿಸಿ ಕ್ರಮೇಣ ಚರ್ಮ ಗಂಟು, ಹಕ್ಕಳೆ, ತುರಿಗಳಾಗಿ ಜಾನುವಾರುಗಳಲ್ಲಿ ಕಂಡು ಬರುತ್ತದೆ.
ರೋಗಗ್ರಸ್ಥ ದನಗಳು ಜ್ವರದಿಂದ ಬಳಲಿ ಮಂಕಾಗಿ ಮೂಗು, ಕಣ್ಣುಗಳಲ್ಲಿ ಸೋರುವಿಕೆ, ಜೊಲ್ಲು ಸೋರುವುದು, ಮೇವು ತಿನ್ನದೇ ಬಡಕಲಾಗುತ್ತವೆ. ರಾಸುಗಳು ಶ್ವಾಸಕೋಶದ ಉರಿಯೂತದಿಂದ ಸಾವನ್ನಪ್ಪುವುದು ಸಾಮಾನ್ಯವಾಗಿದೆ.
ರಾಸುಗಳ ಕೊಟ್ಟಿಗೆಯನ್ನು ಸ್ವಚ್ಛವಾಗಿಡಬೇಕು. ರೋಗ ಕಾಣಿಸಿಕೊಂಡ ತಕ್ಷಣ ಸಮೀಪದ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ, ಲಸಿಕೆ ಪಡೆದು ಜಾನುವಾರು ಸಂರಕ್ಷಿಸಿ ಎಂದು ರೈತರಲ್ಲಿ ಮನವಿ ಮಾಡಿದ್ದಾರೆ.