ಬೆಳಗಾವಿ: ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್ ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದು ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ.
ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಅನ್ನು ನಸುಕಿನ ಜಾವ 3.30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್‌ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲನೆ ನಡೆಸಿದಾಗ ಅಕ್ರಮ ಹಣ ಪತ್ತೆಯಾಗಿರುತ್ತದೆ. ಕೆ.ಪಿ.ಆ್ಯಕ್ಟ್ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಸುದ್ದಿ ತಿಳಿದ ತಕ್ಷಣವೇ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಅವರು ಭೇಟಿ ಪ್ರಕರಣವನ್ನು ಪರಿಶೀಲಿಸಿದರು.
ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿರುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿರುತ್ತದೆ.
ಮಿಸ್ ಮಾಡ್ದೇ ನೋಡಿ: ಪ್ಲಾಸ್ಟಿಕ್ ತಂದುಕೊಟ್ಟವ್ರಿಗೆ ಬಂಗಾರ ಕೊಟ್ಟು ಗ್ರಾಮದ ಚಿತ್ರಣವನ್ನೆ ಬದಲಾಯಿಸಿದ ಸರಪಂಚ!
ಪೊಲೀಸ್ ಹಾಗೂ ಎಫ್.ಎಸ್.ಟಿ. ತಂಡದ ಕಾರ್ಯವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಶ್ಲಾಘಿಸಿದ್ದಾರೆ.
ನೀತಿಸಂಹಿತೆ ಉಲ್ಲಂಘಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ
ಕರ್ನಾಟಕ ವಿಧಾನಸಭಾ ಚುನಾವಣೆಯ ನೀತಿಸಂಹಿತೆ ರಿಗೆ ಬಂದಿರುವುದರಿಂದ ಸಾರ್ವಜನಿಕ ಸ್ಥಳದಲ್ಲಿರುವ ಎಲ್ಲ ಪೋಸ್ಟರ್, ಬ್ಯಾನರ್, ಗೋಡೆಬರಹಗಳನ್ನು ತೆರವುಗೊಳಿಸಬೇಕು. ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಎಲ್ಲ ತಂಡಗಳು ತಕ್ಷಣವೇ ಕಾರ್ಯಪ್ರವೃತ್ತಗೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದರು.
ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ವಿಮೆ ಜಾರಿ: ಸಿಎಂ ಬಸವರಾಜ ಬೊಮ್ಮಾಯಿ
ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಚುನಾವಣಾಧಿಕಾರಿಗಳ ಹಾಗೂ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಮತಗಟ್ಟೆಗಳಲ್ಲಿ ಕನಿಷ್ಠ ಮೂಲಸೌಕರ್ಯವನ್ನು ಒದಗಿಸಬೇಕು. ಸಂಬಂಧಿಸಿದ ಮತಗಟ್ಟೆಗಳ ವ್ಯಾಪ್ತಿಯ ಸೆಕ್ಟರ್ ಅಧಿಕಾರಿಗಳು ಕಡ್ಡಾಯವಾಗಿ ಮತಗಟ್ಟೆಗಳಿಗೆ ಭೇಟಿ ಮೂಲಸೌಕರ್ಯವನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮಾದರಿ ನೀತಿಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣಗಳು ವರದಿಯಾದಲ್ಲಿ ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸಂಬಂಧಿಸಿದ ವ್ಯಕ್ತಿ ಮೇಲೆ ಪ್ರಕರಣ ದಾಖಲಿಸಲು ಸೂಚನೆ:
ನಗದು, ಮದ್ಯ, ಉಡುಗೊರೆ ಮತ್ತಿತರ ವಸ್ತುಗಳ ಅಕ್ರಮ ಸಾಗಾಣಿಕೆ ಮೇಲೆ ತೀವ್ರ ನಿಗಾವಹಿಸಬೇಕು. ಈ ರೀತಿಯ ಅಕ್ರಮ ಸಾಗಾಣಿಕೆ ವೇಳೆ ವಶಪಡಿಸಿಕೊಂಡ ವಸ್ತುಗಳ ಮೇಲೆ ಯಾವುದೇ ಪಕ್ಷ ಅಥವಾ ವ್ಯಕ್ತಿಗಳ ಭಾವಚಿತ್ರಗಳಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಬೇಕು.
ಭಾವಚಿತ್ರವಿರುವ ಅಥವಾ ಪಕ್ಷದ ಚಿಹ್ನೆ ಕಂಡುಬಂದಾಗ ಸಂಬಂಧಿಸಿದವರನ್ನೇ ಮೊದಲ ಆರೋಪಿಯನ್ನಾಗಿಸಬೇಕು. ವಾಹನ ಚಾಲಕರು ಮತ್ತಿತರ ವ್ಯಕ್ತಿಗಳನ್ನು ಎರಡು, ಮೂರನೇ ಆರೋಪಿಗಳನ್ನಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
Share your comments