1. ಸುದ್ದಿಗಳು

Rain ಬೆಂಗಳೂರು ಸೇರಿ ರಾಜ್ಯದಲ್ಲಿ 2 ದಿನ ಮಳೆ!

Hitesh
Hitesh
ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ

ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ಇನ್ನು ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ.

ಕರ್ನಾಟಕದ ವಿವಿಧ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಯ ಅವಧಿಯಲ್ಲಿ ದಕ್ಷಿಣ ಭಾಗದಲ್ಲಿ ಮಳೆಯಾಗಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು.

ಅತೀ ಕಡಿಮೆ ಉಷ್ಣಾಂಶ 15.5 ಡಿಗ್ರಿ ವಿಜಯಪುರದಲ್ಲಿ ದಾಖಲಾಗಿದೆ.

ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. 

ಮುಂದಿನ 24 ಗಂಟೆಯ ಅವಧಿ

ಮುಂದಿನ 24ಗಂಟೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  

ಮುಂದಿನ 48 ಗಂಟೆಯ ಅವಧಿ

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ಹವಾಮಾನ ಹೇಗಿರಲಿದೆ ?

ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗಲಿದೆ.

ಕೆಲವು ಕಡೆ ಬೆಳಗಿನ ಜಾವ ಮಂಜು ಮುಸುಕಿರಲಿದೆ.

ಗರಿಷ್ಠ ಉಷ್ಣಾಂಶವು 26 ಮತ್ತು ಕನಿಷ್ಠ 19 ಡಿಗ್ರಿ ಇರಲಿದೆ.

ಮುಂದಿನ 48 ಗಂಟೆಯ ಅವಧಿಯೂ ಇದೇ ವಾತಾವರಣವಿರಲಿದೆ.

ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ ?

ಎರಡು ದಿನ ದಕ್ಷಿಣ ಕನ್ನಡ, ಉಡುಪಿ ಹಾಗೂ  ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾವೇರಿ, ತುಮಕೂರು, ಚಾಮರಾಜನಗರ, ಚಿತ್ರದುರ್ಗ ಮಳೆಯಾಗಲಿದೆ.

ಇದರೊಂದಿಗೆ ಕೊಡಗು, ಕೋಲಾರ, ರಾಮನಗರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಭಾಗದಲ್ಲಿ.

ಮಂಡ್ಯ ಹಾಗೂ ಮೈಸೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಳೆಯೊಂದಿಗೆ ರಾಜ್ಯದಲ್ಲಿ ಚಳಿಯ ಪ್ರಮಾಣವೂ ಹೆಚ್ಚಳವಾಗುತ್ತಿದೆ. 

Published On: 18 December 2023, 09:41 AM English Summary: 2 days of rain in the state including Bangalore!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.