1. ಸುದ್ದಿಗಳು

ಜಿರೋ ಬಡ್ಡಿ ದರದಲ್ಲಿ 2 ಲಕ್ಷ ಸಾಲ : ಸಿಎಂ ಬೊಮ್ಮಾಯಿ

Kalmesh T
Kalmesh T

ಮುಖ್ಯಾಂಶಗಳು

  1. ಗ್ರಾಮ ವಾಸ್ತವ್ಯ ಮಾಡುವ  ಗ್ರಾಮಗಳ ಅಭಿವೃದ್ಧಿಗೆ 1 ಕೋಟಿ ಮಂಜೂರು: ಸಿಎಂ ಬೊಮ್ಮಾಯಿ
  2. ಹೆಚ್ಚಿನ ಇಳುವರಿ ನೀಡುವ 61 ವೆರೈಟಿ ಬೀಜದ ತಳಿ ಅಭಿವೃದ್ಧಿ
  3. ಸ್ತ್ರೀ ಶಕ್ತಿ ಸಂಘಗಳಿಗೆ ಒಂದು ಲಕ್ಷ ನೀಡುವ ವ್ಯವಸ್ಥೆ: ಸಿಎಂ ಬೊಮ್ಮಾಯಿ
  4. ಜಿರೋ ಬಡ್ಡಿ ದರದಲ್ಲಿ ನೇಕಾರರಿಗೆ 2 ಲಕ್ಷ ಸಾಲ
  5. ವೃತ್ತಿಪರ ನೇಕಾರರಿಗೆ ನೀಡುವ ಸಹಾಯಧನ ಶೇ.50 ರಷ್ಟು ಹೆಚ್ಚಳ
  6. ಕೈಮಗ್ಗ ನಿಗಮದ ಮೂಲಕ ಸಮವಸ್ತ್ರ ಪೂರೈಕೆ
  7. 7 . ಭಾರತದ ಶೇ.46 ರಷ್ಟು ವಿದ್ಯುತ್ ಕರ್ನಾಟಕದಲ್ಲಿ ಉತ್ಪಾದನೆ
  8. ದೇಶದ ಅವಶ್ಯಕತೆಗಳನ್ನು ಪೂರೈಸಲು ಸಾಕಷ್ಟು ಆಹಾರ ಧಾನ್ಯ ದಾಸ್ತಾನು ಲಭ್ಯ
  9. ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಕಡೆ 2 ದಿನಗಳ ಕಾಲ ಮಳೆ ಸಾಧ್ಯತೆ
  10. ಆಯುಷ್ಮಾನ್‌ ಭಾರತ್ ಡಿಜಿಟಲ್ ಮಿಷನ್: 4 ಕೋಟಿ ಆರೋಗ್ಯ ಖಾತೆ ಲಿಂಕ್

1-One

ಗ್ರಾಮ ವಾಸ್ತವ್ಯ ಮಾಡುವ  ಗ್ರಾಮಗಳ ಅಭಿವೃದ್ಧಿಗೆ 1 ಕೋಟಿ ರೂಪಾಯಿ ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಶಿಗ್ಗಾಂವಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಿದ್ದುಹೋದ ಮನೆಗಳಿಗೆ 15 ದಿನಗಳೊಳಗೆ ಸಹಾಯಧನ ದೊರೆಯುವ ವ್ಯವಸ್ಥೆ ಮಾಡಲಾಗುವುದು.

ಈಗಾಗಲೇ ಆರು ಸಾವಿರ ಮನೆಗಳನ್ನು ನೀಡಿದ್ದರೂ, ಇನ್ನೂ ಕೆಲವು ಬಾಕಿ ಉಳಿದಿವೆ. ಇನ್ನೂ 15 ದಿನಗಳೊಳಗೆ ಧನಸಹಾಯವನ್ನ ಖುದ್ದಾಗಿ ಬಂದು  ನೀಡಲಾಗುವುದು ಎಂದು ಭರವಸೆ ನೀಡಿದರು.

 ಶಾಲಾ ಮಕ್ಕಳಿಗೆ ಬಸ್ಸುಗಳ ಕೊರತೆಯಿದ್ದು, ವಿಶೇಷ ಬಸ್ಸುಗಳನ್ನು ಒದಗಿಸಲು ಚಿಂತನೆ ನಡೆದಿದೆ. ಖಾಸಗಿ ಮತ್ತು ಸರ್ಕಾರಿ ಪ್ರಾಯೋಜಕತ್ವದಲ್ಲಿ  ಪ್ರಥಮ ಪ್ರಯೋಗ ಕರ್ನಾಟಕದಲ್ಲಿ ಮಾಡಲಾಗುವುದು ಎಂದರು.

ಶಿಗ್ಗಾಂವಿ ಹಾಗೂ  ಸವಣೂರಿನಲ್ಲಿ ತಲಾ 300 ಜನ ಉಳಿಯುವ ಹಾಸ್ಟೆಲ್ ನಿರ್ಮಾಣ ಮಾಡಲು ಆದೇಶ ನೀಡಲಾಗಿದೆ. 

ಈ ಭಾಗಕ್ಕೆ ಮೂಲಭೂತ ಸೌಕರ್ಯಗಳನ್ನು ನಿರಂತರವಾಗಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

2-Two

ತೆಲಂಗಾಣದ ಪ್ರೊಫೆಸರ್ ಜಯಶಂಕರ್  ರಾಜ್ಯ ಕೃಷಿ ವಿಶ್ವವಿದ್ಯಾನಿಲಯವು ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಇಳುವರಿಯನ್ನು ಸಾಧಿಸಲು ವ್ಯಾಪಕವಾಗಿ ಕಾರ್ಯನಿರ್ವಹಿಸುತ್ತಿದೆ.

ಇದರ ಭಾಗವಾಗಿ 15 ಬೆಳೆಗಳ ಮೇಲೆ ವ್ಯಾಪಕ ಸಂಶೋಧನೆ ನಡೆಸಿದ ವಿಜ್ಞಾನಿಗಳು61 ಅಧಿಕ ಇಳುವರಿ ನೀಡುವ ಬೀಜದ ತಳಿಗಳನ್ನು ಅಭಿವೃದ್ಧಿಪಡಿಸಿದ್ದಾರೆ.

ಹೆಚ್ಚಿನ ಇಳುವರಿ, ಕೀಟಗಳಿಗೆ ಪ್ರತಿರೋಧ ಮತ್ತು ಮಣ್ಣಿನ ಲವಣಾಂಶಕ್ಕಾಗಿ ಈ ಪ್ರಭೇದಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದರೊಂದಿಗೆ ರೈತರ ಹೂಡಿಕೆ ವೆಚ್ಚ ಕಡಿಮೆ ಮಾಡಿ ಹೆಚ್ಚಿನ ಇಳುವರಿ ಪಡೆಯಲು ಅನುಕೂಲ ಕಲ್ಪಿಸಿದೆ.

 3-Three

ಸ್ತ್ರೀ ಶಕ್ತಿ ಸಂಘಗಳಿಗೆ ಒಂದು ಲಕ್ಷ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ.

ಸುಮಾರು 30 ಸಾವಿರ ಫಲಾನುಭವಿಗಳಿಗೆ ವಿವಿಧ ಯೋಜನೆಗಳಲ್ಲಿ ಅನುದಾನ ತಲುಪಿವೆ. ಬಡತನ ನಿರ್ಮೂಲನಾ ಇಲಾಖೆಯಿಂದ ಆರು ಸಾವಿರ ಮನೆಗಳಿಗೆ ಅನುದಾನ,

ರೈತ ವಿದ್ಯಾ ನಿಧಿ, ಕಿಸಾನ್ ಸಮ್ಮಾನ್, ಅಂಗವಿಕಲರ ಮಾಸಾಶನ, ಸಂಧ್ಯಾ ಸುರಕ್ಷಾ ಹಾಗೂ ವಿವಿಧ ಇಲಾಖೆಗಳು ಹಾಗೂ ನಿಗಮಗಳಿಂದ  ಒಟ್ಟು 30 ಸಾವಿರ ಫಲಾನುಭವಿಗಳಿಗೆ
ಸೌಲಭ್ಯ ತಲುಪಿರುವುದು ಒಂದು ದಾಖಲೆಯಾಗಿದೆ ಎಂದರು.

ಮುಂದಿನ ಮಾರ್ಚ್ - ಏಪ್ರಿಲ್‌ನೊಳಗೆ ಪ್ರತಿ ಗ್ರಾಮದ ಪ್ರತಿ ಮನೆಗೂ  ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು. ಮಹಿಳೆಯರಿಗೆ ಬೃಹತ್ ಜವಳಿ ಪಾರ್ಕ್ ನಿರ್ಮಾಣವಾಗಲಿದ್ದು, 10,000 ಉದ್ಯೋಗ ನೀಡಲಾಗುವುದು.

ಅದಕ್ಕೆ ಈಗಾಗಲೇ ತರಬೇತಿಯನ್ನು ಪ್ರಾರಂಭಿಸಲಾಗಿದೆ ಎಂದರು.

4 -Four

ನೇಕಾರರಿಗೆ 2 ಲಕ್ಷದವರಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ.

5 HPವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ತಮಿಳುನಾಡು ಮಾದರಿಯಲ್ಲಿ ಉಚಿತ ವಿದ್ಯುತ್ ಒದಗಿಸಲು ಚಿಂತಿಸಲಾಗುತ್ತಿದೆ.

ವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುವ ನೇಕಾರರಿಗೆ "ನೇಕಾರ ಸಮ್ಮಾನ ಯೋಜನೆ" ವಿಸ್ತರಣೆ ಮಾಡಲಾಗುವುದು. ನೇಕಾರರ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯನ್ನು ಡಿಸೆಂಬರ್ ಅಂತ್ಯದೊಳಗೆ ಬಿಡುಗಡೆ ಮಾಡಲಾಗುವುದು. 

ಇದಕ್ಕೆ ಪೂರಕ ಮಾಹಿತಿಗಳನ್ನು ಸಂಗ್ರಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

 5-Five

ವೃತ್ತಿಪರ ನೇಕಾರರಿಗೆ ಇಲಾಖೆಯಿಂದ ಶೇ.30 ರಷ್ಟು ಸಹಾಯಧನ ನೀಡಲಾಗುತ್ತಿದ್ದು, ಅದನ್ನು ಶೇ.50 ರಷ್ಟು ಹೆಚ್ಚಿಸುವ ಬೇಡಿಕೆಯನ್ನು ಒಪ್ಪಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ನೇಕಾರ ಸಮ್ಮಾನ ಯೋಜನೆಯಡಿ 46,000 ಕೈಮಗ್ಗ ನೇಕಾರರಿಗೆ 5000 ರೂಪಾಯಿ DBT ಮಾಡಲಾಗಿದೆ.

ಮನೆಯಲ್ಲಿಯೇ ಉದ್ಯೋಗ ನಡೆಸುತ್ತಿರುವ ನೇಕಾರರಿಗೆ “ಗುಡಿ ಕೈಗಾರಿಕೆ”ಗಳೆಂದು ಪರಿಗಣಿಸಿ, ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿಯಿಂದ ವಿನಾಯಿತಿ ನೀಡಲು ಆದೇಶ ಹೊರಡಿಸಲು ತೀರ್ಮಾನಿಸಲಾಗಿದೆ ಎಂದರು.

6- Six

ಸರ್ಕಾರದ ನೇಕಾರ ನಿಗಮಗಳ ಉತ್ಪಾದನಾ ಸಾಮರ್ಥ್ಯದ ಅನುಗುಣವಾಗಿ ವಿದ್ಯಾವಿಕಾಸ ಯೋಜನೆಯಡಿ ಸಮವಸ್ತ್ರ ಪೂರೈಕೆ ಪ್ರಮಾಣ ನಿಗದಿಪಡಿಸಿ,

ಉಳಿದ ಪ್ರಮಾಣಕ್ಕೆ ಟೆಂಡರ್ ಕರೆಯಲು ತೀರ್ಮಾನಿಸಲಾಯಿತು.

ಇದನ್ನು ಡಿಸೆಂಬರ್ ತಿಂಗಳಿನಲ್ಲಿಯೇ ಕಾರ್ಯಾದೇಶ ನೀಡಿ, ಸಕಾಲದಲ್ಲಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ವಿವಿಧ ಇಲಾಖೆಗಳ ಸಮವಸ್ತ್ರದ ಅಗತ್ಯತೆಯ ಶೇ.25ರಷ್ಟನ್ನು ಕೈಮಗ್ಗ ನಿಗಮದ ಮೂಲಕ ಖರೀದಿಸಲು ತೀರ್ಮಾನಿಸಲಾಗಿದೆ.

 7 – Seven

ಕರ್ನಾಟಕ ಇಂಧನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಏಷ್ಯಾದಲ್ಲೇ ಮೊದಲ ಜಲವಿದ್ಯುತ್ ಶಕ್ತಿ ಘಟಕವನ್ನು ಪ್ರಾರಂಭಿಸಿದ ರಾಜ್ಯ ಕರ್ನಾಟಕ.

31 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ರಾಜ್ಯದಲ್ಲಾಗುತ್ತಿದ್ದು

ಅದರಲ್ಲಿ ಅರ್ಧದಷ್ಟು ನವೀಕರಿಸಬಹುದಾದ ಇಂಧನವಾಗಿದೆ. ಭಾರತದ ಶೇ.46 ರಷ್ಟು ವಿದ್ಯುತ್ ಕರ್ನಾಟಕ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿದೆ.

ನವೀಕರಿಸಬಹುದಾದ ಇಂಧನವನ್ನು ವಿದ್ಯುತ್ ಉತ್ಪಾದನೆ ಹಾಗೂ ಸಂಗ್ರಹಣೆ ಹೆಚ್ಚಿಸಲು ಬಳಸಲಾಗುತ್ತದೆ. ರಾಜ್ಯದ ಹೈಡ್ರೋಜನ್ ಸೈನ್ಸ್  ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಯೂ ಆಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.

 8-Eight

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಹೆಚ್ಚುವರಿ ಹಂಚಿಕೆಗಾಗಿ ಕೇಂದ್ರ ಸಂಗ್ರಹದಡಿಯಲ್ಲಿ ಭಾರತ ಸರ್ಕಾರವು ಸಾಕಷ್ಟು ಆಹಾರ ಧಾನ್ಯ ದಾಸ್ತಾನುಗಳನ್ನು ಹೊಂದಿದೆ ಎಂದು ಸರ್ಕಾರ ತಿಳಿಸಿದೆ.

2023ರ ಜನವರಿ 1ರ ಹೊತ್ತಿಗೆ ಸುಮಾರು 159 ಮೆಟ್ರಿಕ್ ಟನ್ ಗೋಧಿ ಮತ್ತು 104 ಮೆಟ್ರಿಕ್ ಟನ್ ಅಕ್ಕಿ ಲಭ್ಯವಿರುತ್ತದೆ.

ಏಪ್ರಿಲ್ 1, ಜುಲೈ 1, ಅಕ್ಟೋಬರ್ 1 ಮತ್ತು ಜನವರಿ 1 ರಂತೆ ವರ್ಷದ ನಿರ್ದಿಷ್ಟ ದಿನಾಂಕಗಳಿಗೆ ದಾಸ್ತಾನು ಮಾನದಂಡಗಳ ಅವಶ್ಯಕತೆಗಳನ್ನು ಕಲ್ಪಿಸಲಾಗಿದೆ.

ಕೇಂದ್ರ ಸಂಗ್ರಹದಡಿಯಲ್ಲಿ  ಗೋಧಿ ಮತ್ತು ಅಕ್ಕಿಯ ಸಂಗ್ರಹ ಸ್ಥಾನವು ಯಾವಾಗಲೂ ದಾಸ್ತಾನು ಮಾನದಂಡಗಳಿಗಿಂತ ಉತ್ತಮವಾಗಿರುತ್ತದೆ ಎಂದು ತಿಳಿಸಿದೆ.

 9- Nine

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 21ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರದಲ್ಲಿ ಮಳೆಯಾಗಲಿದೆ.

ಬಾಗಲಕೋಟೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳ ಮಳೆ ಆಗಲಿದೆ. ಶುಕ್ರವಾರದಿಂದ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕಳೆದ ಒಂದು ವಾರದಿಂದ ಚಂಡಮಾರುತದ ಪ್ರಭಾವದಿಂದ ರಾಜ್ಯದೆಲ್ಲಡೆ ಮಳೆ ಹೆಚ್ಚಾಗಿತ್ತು.

 10- Ten

ಭಾರತ್ ಡಿಜಿಟಲ್ ಮಿಷನ್ ಯೋಜನೆಯಡಿಯಲ್ಲಿ 4 ಕೋಟಿಗೂ ಹೆಚ್ಚು ಆರೋಗ್ಯ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ ಮತ್ತು ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಗಳೊಂದಿಗೆ ಲಿಂಕ್ ಮಾಡಲಾಗಿದೆ.

ನಿಮ್ಮ ಆರೋಗ್ಯ ದಾಖಲೆಗಳನ್ನು ಆಯುಷ್ಮಾನ್ ಭಾರತ್ ಡಿಜಿಟಲ್ ಖಾತೆಗಳಿಗೆ ಲಿಂಕ್ ಮಾಡುವುದರಿಂದ  ನಿಮ್ಮ ಅನುಕೂಲಕ್ಕೆ ಅನುಗುಣವಾಗಿ ಈ ದಾಖಲೆಗಳನ್ನು ನಿರ್ವಹಿಸಲು ಸಾಧ್ಯವಾಗುತ್ತದೆ.

ಇದು ವಿವಿಧ ಆರೋಗ್ಯ ಸೌಲಭ್ಯಗಳನ್ನು ಪೂರೈಸುವ ಸಮಗ್ರ ವೈದ್ಯಕೀಯ ಮಾಹಿತಿಯನ್ನು ನೀಡಲು ನಾಗರಿಕರಿಗೆ ಅನುಕೂಲ ಮಾಡಿಕೊಡುತ್ತದೆ.

 

ಇವಿಷ್ಟು ಈ ಹೊತ್ತಿನ ಪ್ರಮುಖ ಕೃಷಿ ಸುದ್ದಿಗಳು

ಇನ್ನೂ ಹೆಚ್ಚಿನ ಕೃಷಿ ಸಂಬಂಧಿ ಮಾಹಿತಿಗಳಿಗಾಗಿ ನೋಡ್ತಾಯಿರಿ ಕೃಷಿ ಜಾಗರಣ ಕನ್ನಡ.  

ನಮಸ್ಕಾರ…

Published On: 18 December 2022, 05:20 PM English Summary: 2 lakh loan to weavers at zero interest rate: CM Bommai

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.