News

ಕರ್ನಾಟಕದಲ್ಲಿ ಇನ್ನೂ 2 ದಿನ ಮಳೆ ಸಾಧ್ಯತೆ! ಯಾವ ಜಿಲ್ಲೆಯಲ್ಲಿ ಏನೇನಾಗಲಿದೆ ಗೊತ್ತೆ?

01 October, 2022 2:33 PM IST By: Kalmesh T
2 more days of rain in Karnataka! Know what will happen in which district

ಭಾರತೀಯ ಹವಾಮಾನ ಇಲಾಖೆ ಸೂಚನೆಯ ಪ್ರಕಾರ ಇನ್ನೂ ಮುಂದಿನ 2 ದಿನ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

PM ಕಿಸಾನ್ 12 ನೇ ಕಂತು: ಅಕ್ಟೋಬರ್‌ 2ರಂದು ರೈತರ ಖಾತೆಗೆ ಬರಲಿದೆಯೇ ಹಣ?

ಬಂಗಾಳಕೊಲ್ಲಿಯಲ್ಲಿ ಉಂಟಾದ ಮೇಲ್ಳೈ ಸುಳಿಗಾಳಿಯಿಂದ ಕರ್ನಾಟಕದಲ್ಲಿ ಮಳೆಯಾಗುವ (Rain) ಸಾಧ್ಯತೆಗಳು ಹೆಚ್ಚಿವೆ ಎಂದು ತಿಳಿದು ಬಂದಿದೆ. ಉತ್ತರ ಭಾಗ ಮತ್ತು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ  ಬಿರುಸಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಕೂಡ ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಇವತ್ತು ಕೂಡ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಮಳೆಯ ಅಬ್ಬರ ಈಗಾಗಲೇ ಮತ್ತೆ ಆರಂಭವಾಗಿದೆ. 

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಹವಾಮಾನದಲ್ಲಿ ಉಂಟಾದ ಬದಲಾವಣೆಗಳಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವಾರು ಜಿಲ್ಲೆಯಗಳಲ್ಲೂ ಮತ್ತೆ ಮಳೆಯಾಗುತ್ತಿದೆ.

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಅ. 2ರವರೆಗೂ ಮಳೆಯಾಗಲಿದೆ. ಬೆಳಗಾವಿ, ಹಾವೇರಿ, ಬಾಗಲಕೋಟೆ, ಗದಗ, ಯಾದಗಿರಿ, ಕೊಪ್ಪಳದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ.

ಸಿಹಿಸುದ್ದಿ: ರೈತರಿಗೆ 5 ತಾಸಿನ ಬದಲು 7 ತಾಸು ವಿದ್ಯುತ್‌ ಪೂರೈಕೆ ಸಿಎಂ ಬೊಮ್ಮಾಯಿ!

ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಎಲ್ಲ ಕಡೆಗಳಲ್ಲಿ ಕಳೆದ 2 ವಾರದಿಂದ ಮಳೆ ಸಂಪೂರ್ಣವಾಗಿ ಕಡಿಮೆಯಾಗಿತ್ತು.

ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಮಳೆ, ಚಳಿ ವಾತಾವರಣ ಕಂಡು ಬರುತ್ತಿದೆ. ಈ ಸುಳಿಗಾಳಿಯು ಒಡಿಶಾ ಕರಾವಳಿ ಮಾರ್ಗವಾಗಿ ಸಾಗಲಿದೆ.

ಹೀಗಾಗಿ ಇಂದು ಕರ್ನಾಟಕದ ಹಲವೆಡೆ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಆಗಿದೆ. ಈ ಪ್ರದೇಶಗಳಲ್ಲಿ ಇಂದು ಕೂಡ ಮಳೆ ಆಗಲಿದೆ.

ಆದರೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಸುರಿಯಲಿದೆ. ಭಾಗದಲ್ಲಿ ಸಾಧಾರಣವಾಗಿ ಕೆಲವೊಮ್ಮೆ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ.

ಲಂಪಿ ರೋಗಕ್ಕೆ ಬಲಿಯಾದ ಜಾನುವಾರುಗಳಿಗೆ ಸಿಎಂ ಬೊಮ್ಮಾಯಿ ಪರಿಹಾರ ಘೋಷಣೆ: ! ಎಷ್ಟು ಗೊತ್ತೆ?

ಅದೇ ರೀತಿ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಸಹ ತುಂತುರು ಮಳೆಯಾಗಬಹುದು. ಬೆಳಗಾವಿ, ಹಾವೇರಿ, ಬಾಗಲಕೋಟೆ, ಹಾವೇರಿ, ಗದಗ, ಯಾದಗಿರಿ, ಕೊಪ್ಪಳದಲ್ಲೂ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದ ರಾಜ್ಯದಲ್ಲಿ ಮಳೆಯಾಗುವ ನಿರೀಕ್ಷೆಗಳು ದಟ್ಟವಾಗಿವೆ. ಉತ್ತರ ಮತ್ತು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಗಳಿವೆ.

ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕಲಬುರ್ಗಿ, ಬೀದರ್, ರಾಯಚೂರು, ಗದಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.