1. ಸುದ್ದಿಗಳು

ಪ್ರಸಕ್ತ ವರ್ಷ 30 ಲಕ್ಷ ರೈತರಿಗೆ 20,810 ಕೋಟಿ ಬೆಳೆ ಸಾಲ ನೀಡುವ ಗುರಿ- ಸೋಮೇಶೇಖರ

Somshekhar

 ಕಳೆದ ಸಾಲಿನಲ್ಲಿ ಶೇ. 114.70 ರೈತರಿಗೆ ಬೆಳೆಸಾಲ ನೀಡುವ ಮೂಲಕ ಗುರಿ ಮೀರಿ ಸಾಧನೆ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಪ್ರಸಕ್ತ ಸಾಲಿನ ಅಂದರೆ, 2021-22ರಲ್ಲಿ 30 ಲಕ್ಷ ರೈತರಿಗೆ 20,810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿ ಹೊಂದಿದ್ದೇವೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತಾಪಿ ವರ್ಗಕ್ಕೆ ತೊಂದರೆಯಾಗಬಾರದೆಂಬ ಉದ್ದೇಶಕ್ಕೆ ಪ್ರಸಕ್ತ ಸಾಲಿನಲ್ಲಿ ಸಹಕಾರ ಬ್ಯಾಂಕುಗಳಿಂದ 30 ಲಕ್ಷ ರೈತರಿಗೆ 20,810 ಕೋಟಿ ರೂಪಾಯಿ ಬೆಳೆ ಸಾಲ ನೀಡುವ ಗುರಿ ಹೊಂದಿದ್ದೇವೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ ತಿಳಿಸಿದ್ದಾರೆ.

2020-21ರ ಆರ್ಥಿಕ ವರ್ಷದಲ್ಲಿ 24.50 ಲಕ್ಷ ರೈತರಿಗೆ 15400 ಕೋಟಿ ರೂಪಾಯಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ನೀಡಿಕೆಯ ಗುರಿಯನ್ನು ಹೊಂದಲಾಗಿತ್ತು. ಅಪೆಕ್ಸ್ ಬ್ಯಾಂಕ್ ಹಾಗೂ 21 ಡಿಸಿಸಿ ಬ್ಯಾಂಕ್ ಗಳು 25,93,982 ರೈತರಿಗೆ 17490 ಕೋಟಿ ರೂಪಾಯಿ ಸಾಲ ನೀಡಿವೆ ಎಂದು ವಿವರಿಸಿದರು.

ಹೆಚ್ಚಿನ ರೈತರಿಗೆ ಸಾಲ ತಲುಪಿಸುವಂತೆ ಸಿಎಂ ಸೂಚನೆ ನೀಡಿದ್ದು ಅಂತೆಯೇ ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ ಗಳ ಮೂಲಕ ರೈತರಿಗೆ ಅಗತ್ಯವಾದ ಸಾಲ ನೂರಕ್ಕೆ ನೂರರಷ್ಟು ದೊರಕಿಸಿಕೊಡಲು ಡಿಸಿಸಿ ಬ್ಯಾಂಕುಗಳು ಮುಂದಾಗಬೇಕು ಎಂದು ಹೇಳಿದ್ದಾರೆ.

ಡಿಸಿಸಿ ಬ್ಯಾಂಕ್ಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ 30 ಲಕ್ಷ ರೈತರನ್ನು ತಲುಪಬೇಕು.  20810 ಕೋಟಿ ರೂಪಾಯಿ ಬೆಳೆ  ನೀಡಬೇಕೆಂದು ಎಲ್ಲಾ ಬ್ಯಾಂಕುಗಳಿಗೆ ಸೂಚಿಸಿದ್ದೇನೆ. ಲಾಕ್ಡೌನ್ ಮುಗಿದ ಬಳಿಕ ಡಿಸಿಸಿ ಬ್ಯಾಂಕುಗಳಿಗೆ ಖುದ್ದು ನಾನೇ ಭೇಟಿ ನೀಡುತ್ತೇನೆ ಎಂದರು.

ಡಿಸಿಸಿ ಬ್ಯಾಂಕ್ ಗಳಿಗೆ ಆಪೆಕ್ಸ್ ಬ್ಯಾಂಕ್ ನಿಂದ ಆಗಬೇಕಾದ ಎಲ್ಲಾ ಸೌಲಭ್ಯಗಳನ್ನು ಮಾಡಿಕೊಡಲಾಗುವುದು ಎಂದು ಭರವಸೆ ನೀಡಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು, ಶಾಸಕ ಬೆಳ್ಳಿ ಪ್ರಕಾಶ್, ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಸಹಕಾರ ಸಂಘಗಳ ನಿಬಂಧಕರಾದ ಜಿಯಾವುಲ್ಲ, ಎಲ್ಲ ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಇದ್ದರು.

Published On: 01 June 2021, 05:28 PM English Summary: 20, 810 crore crop loans to 30 lakh farmers

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.