350 ಕೋಟಿ ರೂ. ವೆಚ್ಚದಲ್ಲಿ ಕುರಿಗಾಹಿಗಳ ಸಂಘಕ್ಕೆ 20 ಕುರಿ 1 ಮೇಕೆ ನೀಡುವ ಜೊತೆಗೆ ಮನೆ ಮತ್ತು ಶೆಡ್‌ಗಳ ನಿರ್ಮಾಣಕ್ಕೆ ಸಹಾಯ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರೈತರಿಗೆ ಜೀವವಿಮೆ ಸೌಲಭ್ಯ ಜಾರಿ: ಸರ್ಕಾರವೇ ಭರಿಸಲಿದೆ ಬರೋಬ್ಬರಿ 180 ಕೋಟಿ ಪ್ರೀಮಿಯಂ!
350 ಕೋಟಿ ರೂ. ವೆಚ್ಚದಲ್ಲಿ ಕುರಿಗಾಹಿಗಳ ಸಂಘಕ್ಕೆ 20 ಕುರಿ 1 ಮೇಕೆ ನೀಡುವ ಜೊತೆಗೆ ಮನೆ ಮತ್ತು ಶೆಡ್‌ಗಳ ನಿರ್ಮಾಣಕ್ಕೆ ಸಹಾಯ ಮಾಡಲಾಗುತ್ತಿದೆ.
23 ಸಾವಿರ ಕುರಿಸಂಘಗಳಿಗೆ ಇನ್ನೊಂದು ವಾರದೊಳಗೆ ಹಣ ಬಿಡುಗಡೆ ಮಾಡಲಾಗುವುದು. ರೈತಕಿಸಾನ ಸಮ್ಮಾನ್ ನಿಧಿ ಯೋಜನೆಯ ಕೊನೆಯ ಕಂತಾದ 999 ಕೋಟಿ ರೂ.ಗಳನ್ನು ಸಧ್ಯದಲ್ಲಿಯೇ ಬಿಡುಗಡೆ ಮಾಡಲಾಗುವುದು.
ಸರ್ಕಾರ ಜನರ ಶ್ರೇಯೋಭಿವೃದ್ಧಿಗೆ ನಿರಂತರವಾಗಿ ಕೆಲಸ ಮಾಡಲಿದೆ ಎಂದರು.
ಕೃಷಿ ಜೊತೆಗೆ ಕುರಿ ಸಾಕಾಣಿಕೆ: 7ರಿಂದ 8 ಲಕ್ಷದವರೆಗೆ ಗಳಿಸುತ್ತಿರುವ ಮಹಿಳೆ!
ಕೊಪ್ಪಳ ಏತನೀರಾವರಿ ಯೋಜನೆಗೆ ಕಾಯಕಲ್ಪ :
ಕೊಪ್ಪಳ ಜಿಲ್ಲೆ ಏತನೀರಾವರಿಯನ್ನು ನಾರಾಯಣಪುರ ಯೋಜನೆಗೆ ಜೋಡಿಸಿ, ಗೋದಾವರಿಯ 1.8 ಟಿಎಂಸಿ ನೀರನ್ನು ಇಲ್ಲಿನ ಏತನೀರಾವರಿಗೆ ನೀಡಲಾಯಿತು.
ಸ್ಕೀಂ ಬಿ ಯೋಜನೆಯೆಂದು ಇದನ್ನು ವಿಲೇ ಇಡಲಾಗಿತ್ತು. ನಾನು ನೀರಾವರಿ ಸಚಿವನಾಗಿದ್ದಾಗ, ಸುಮಾರು 9 ನೀರಾವರಿ ಯೋಜನೆಗಳಿಗೆ ಚಾಲನೆ ನೀಡಲಾಯಿತು.
ಹಿಂದಿನ ಸರ್ಕಾರಗಳ ಅವಧಿಯಲ್ಲಿ ಸಾಕಾರಗೊಳ್ಳದಿದ್ದ ಕೊಪ್ಪಳ ಏತನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರದ ಅವಧಿಯಲ್ಲಿ ಕಾಯಕಲ್ಪ ಕಾಣುತ್ತಿದೆ.
ಗಂಗಾವತಿ ತಾಲ್ಲೂಕಿನಲ್ಲಿ 41 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮಂಜೂರಾತಿ ನೀಡಲಾಗಿದೆ. ಮುಳವಾಡಿ, ಚಿಮ್ಮಲಗಿ, ಗುತ್ತಿಬಸವಣ್ಣ ಏತನೀರಾವರಿ ಯೋಜನೆಗಳಿಗೆ ಕಾಯಕಲ್ಪ ನೀಡಲಾಗುತ್ತಿದೆ.
ತುಂಗಭದ್ರಾ ಯೋಜನೆ, ತುಂಗಾ ಮೇಲ್ದಂಡೆ ಯೋಜನೆ, ಸಿಂಗಟಾಲೂರು ಯೋಜನೆ, ಎನ್ ಎಲ್ ಬಿ ಸಿ ಯೋಜನೆಗಳಿಂದ ಸುಮಾರು 7 ಲಕ್ಷ ಎಕರೆ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದರು.
ಎಸ್ ಸಿ ಎಸ್ ಟಿ, ಹಿಂದುಳಿದ ವರ್ಗದವರ ಏಳಿಗೆಗೆ ಕ್ರಮ :
ಈ ಹಿಂದೆ ಸಾಮಾಜಿಕ ನ್ಯಾಯ ಕೇವಲ ಬಾಯಿ ಮಾತಿನಲ್ಲಿತ್ತು. ನಮ್ಮ ಸರ್ಕಾರ ಎಸ್ ಸಿ ಎಸ್ ಟಿ ಮೀಸಲಾತಿಯನ್ನು ಹೆಚ್ಚಿಸಲಾಯಿತು. ಎಸ್ ಸಿ ಎಸ್ ಟಿ, ಹಿಂದುಳಿದ ವರ್ಗದವರ ಏಳಿಗೆಗೆ ಹತ್ತು ಹಲವಾರು ಕ್ರಮಗಳನ್ನು ಸರ್ಕಾರ ಕೈಗೊಂಡಿದೆ.
ಪ್ರಧಾನಿ ಮೋದಿಯವರ ಸಬ್ ಕಾ ಸಾಥ್ , ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್ ಆಶಯದಂತೆ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದೆ.
ಹಿಂದುಳಿದ ವರ್ಗದವರು, ಕುಶಲಕರ್ಮಿಗಳು ಸೇರಿದಂತೆ ಕಾಯಕ ಸಮಾಜದವರಿಗೆ ‘ಕಾಯಕ’ ಯೋಜನೆಯಡಿ 50 ಸಾವಿರ ರೂ.ಗಳ ಧನಸಹಾಯ ನೀಡಲಾಗುತ್ತಿದೆ.