News

ಪ್ರವಾಹ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ 200 ಕೋಟಿ ಅನುದಾನ!

08 August, 2022 3:16 PM IST By: Kalmesh T
200 crore grant from the state government to the district collector for flood relief!

ಪ್ರವಾಹ ಪರಿಹಾರ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿರಿ: ಜನಸಾಮಾನ್ಯರಿಗೆ ಗುಡ್‌ನ್ಯೂಸ್‌: ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆ! ಎಷ್ಟು ಗೊತ್ತೆ?

ಪ್ರಕೃತಿ ವಿಕೋಪದ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಪರಿಹಾರ ವಿಚಾರವಾಗಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಶಾಸಕರ ಆರೋಪವನ್ನು ಅವರು ತಳ್ಳಿ ಹಾಕಿದ್ದಾರೆ.

ಪರಿಹಾರ ವಿಚಾರವಾಗಿ ಟ್ವೀಟ್ ಮಾಡಿದ್ದ ಮಾಜಿ ಸಚಿವ ಎಂಬಿ ಪಾಟೀಲ್, ವಿಜಯಪುರ ಜಿಲ್ಲೆಯ ಪಾಲಿಗೆ ಸರ್ಕಾರ ಇದ್ದೂ ಸತ್ತಂತಾಗಿದ್ದು ನಮ್ಮ ಜಿಲ್ಲೆ ಅನಾಥವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಅಭಿವೃದ್ಧಿಯ ವಿಷಯದಲ್ಲೂ ಶೂನ್ಯ ಕೊಡುಗೆ! ಜಿಲ್ಲೆಯ ಪಾಲಿಗೆ ಸರ್ಕಾರ ಜೀವಂತವಿದ್ದರೆ ಇದಕ್ಕೆ ಏನಾದರೂ ಉತ್ತರವಿದೆಯೇ? ಎಂದು ಪ್ರಶ್ನಿಸಿದ್ದರು.

ಅಲ್ಲದೆ, ಮುಖ್ಯಮಂತ್ರಿಗಳಿಗೆ ಈ ಭಾಗದ ಮಂತ್ರಿಗಳಿಗೆ ಕಿಂಚಿತ್ತು ಮಾನ, ಮರ್ಯಾದೆ ಇದ್ದರೆ, ತಕ್ಷಣ ಜಿಲ್ಲಾಧಿಕಾರಿಗಳಿಂದ ಮಳೆಯಿಂದ ಹಾನಿಯಾಗಿರುವ ಮಾಹಿತಿ ಪಡೆದು,

ವಿಜಯಪುರ ಜಿಲ್ಲೆಗೂ ತುರ್ತು ಪರಿಹಾರ ಬಿಡುಗಡೆ ಮಾಡಿ ತಮ್ಮ ಗೌರವ ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ ಸಂತ್ರಸ್ಥರೊಂದಿಗೆ ನಾನೇ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

ಈ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ದೊರೆಯಲಿದೆ ರೂ 20,000 ದಿಂದ 35,000 ಪ್ರೋತ್ಸಾಹಧನ! ಅರ್ಜಿ ಸಲ್ಲಿಕೆ ಹೇಗೆ ಗೊತ್ತೆ?

ಅದೇ ರೀತಿ ಶಾಸಕ ಈಶ್ವರ್ ಖಂಡ್ರೆ ಟ್ವೀಟ್ ಮಾಡಿ ಸರ್ಕಾರದಿಂದ ಬೀದರ್ ಜಿಲ್ಲೆಗೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪ ಮಾಡಿದ್ದರು.

ಪ್ರವಾಹ ಪರಿಹಾರ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ 200 ಕೋಟಿ ರೂ ಅನುದಾನ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಬೀದರ್ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಅನುದಾನ ಕೈ ತಪ್ಪಿರುವುದು ಬಿಜೆಪಿ ಸರ್ಕಾರಕ್ಕೆ ಕಲ್ಯಾಣ ಕರ್ನಾಟಕದ ಬಗ್ಗೆ ಇರುವ ಮಲತಾಯಿ ಧೋರಣೆ ಎತ್ತಿ ತೋರಿಸುತ್ತದೆ ಎಂದು ಆರೋಪ ಮಾಡಿದ್ದರು.

ಬೀದರ್ ಮತ್ತು ಕಲಬುರ್ಗಿ ಜಿಲ್ಲಾದ್ಯಂತ ಸತತ ಮಳೆಯ ಪ್ರವಾಹದಿಂದ ತೊಗರಿ, ಸೋಯಾಬೀನ್, ಹೆಸರು, ಉದ್ದು ಹಾಗೂ ಇನ್ನಿತರೆ ಮುಂಗಾರು ಹಂಗಾಮಿನ ಬಹುತೇಕ ಬೆಳೆಗಳು ಸಂಪೂರ್ಣವಾಗಿ ನಷ್ಟವಾಗಿದ್ದು ಮುಖ್ಯಮಂತ್ರಿ ಅವರು ಈ ಕೂಡಲೇ ಕಲಬುರ್ಗಿ ಮತ್ತು ವಿಶೇಷವಾಗಿ ಬೀದರ್ ಜಿಲ್ಲೆಗಳ ರೈತರಿಗೆ ಪ್ರತಿ ಹೆಕ್ಟೇರ್ ಗೆ ತಲಾ 50,000 ರೂ ಪರಿಹಾರ ಬಿಡುಗಡೆ ಮಾಡಬೇಕೆಂದು ವಿನಂತಿ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಪ್ರಕೃತಿ ವಿಕೋಪದ ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನವನ್ನು ಆಧರಿಸಿ ಹಣ ಬಿಡುಗಡೆ ಮಾಡಲಾಗುತ್ತದೆ.

ಮೇಕೆದಾಟು ಬಹುಪಯೋಗಿ ಯೋಜನೆ: ಡಿಪಿಆರ್ ತಯಾರಿಸಲು ಅನುಮತಿಗಾಗಿ ಕೇಂದ್ರ ಜಲ ಆಯೋಗಕ್ಕೆ ಸಿಡಬ್ಲ್ಯೂಸಿ ಸಲ್ಲಿಕೆ..

ಇದೇ ಆಗಸ್ಟ್ 2 ರ ಮಾಹಿತಿಯಂತೆ ವಿಜಯಪುರ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ 28.5 ಕೋಟಿ ರೂ. ಅನುದಾನ ಲಭ್ಯವಿದೆ. ಇತರ 21 ಜಿಲ್ಲೆಗಳಲ್ಲಿ ವಿಜಯಪುರ ಜಿಲ್ಲೆಗಿಂತ ಕಡಿಮೆ ಮೊತ್ತ ಲಭ್ಯವಿದೆ ಎಂಬುದು ಗಮನಿಸಬೇಕಾದ ಅಂಶ.

ಪ್ರಕೃತಿ ವಿಕೋಪದ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಅಗತ್ಯಕ್ಕೆ ಅನುಗುಣವಾಗಿ ಕಾಲ ಕಾಲಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದಿದ್ದಾರೆ.

ಪ್ರಕೃತಿ ವಿಕೋಪದ ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನವನ್ನು ಆಧರಿಸಿ ಹಣ ಬಿಡುಗಡೆ ಮಾಡಲಾಗುತ್ತದೆ.

ಇದೇ ಆಗಸ್ಟ್ 2 ರ ಮಾಹಿತಿಯಂತೆ ಬೀದರ್ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ 20.45 ಕೋಟಿ ರೂ., ಕಲಬುರ್ಗಿ ಜಿಲ್ಲಾಧಿಕಾರಿಗಳ ಬಳಿ 42.07 ಕೋಟಿ ರೂ, ಯಾದಗಿರಿ ಜಿಲ್ಲಾಧಿಕಾರಿಗಳ ಬಳಿ 25.14 ಕೋಟಿ ರೂ. ಅನುದಾನ ಲಭ್ಯವಿದೆ.

ಪ್ರಕೃತಿ ವಿಕೋಪದ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಅಗತ್ಯಕ್ಕೆ ಅನುಗುಣವಾಗಿ ಕಾಲ ಕಾಲಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ವಿವರ ನೀಡಿದ್ದಾರೆ.