1. ಸುದ್ದಿಗಳು

ರಾಜ್ಯದಲ್ಲಿ ಮತ್ತೆ ಮೂರು ದಿನ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ  ರಾಜ್ಯದಲ್ಲಿ ಮತ್ತೆ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಉತ್ತರ ಭಾಗ ಮತ್ತು ಆಂಧ್ರಪ್ರದೇಶದ ದಕ್ಷಿಣದಲ್ಲಿ ಮೈಲ್ಮೈ ಸುಳಿಗಾಳಿ ತೀವ್ರತೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಅಲ್ಲಲ್ಲಿ ನವೆಂಬರ್ 2 ರವರೆಗೆ ಸಾಧಾರಣ ಮಳೆಯಾಗಲಿದೆ.

ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ಟೋಬರ್ 30, 31 ರಂದು ಸಾಧಾರಣ ಮಳೆಯಾಗಲಿದೆ. ನವೆಂಬರ್ 1 ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ  ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ,  ಹಾಸನ, ಚಿಕ್ಕಬಳ್ಳಾಪುರ ಸೇರಿದಂತೆ ಸಾಧಾರಣ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Published On: 30 October 2020, 12:37 PM English Summary: 3 days rain alert in karnataka

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.