ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮತ್ತೆ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನ ಉತ್ತರ ಭಾಗ ಮತ್ತು ಆಂಧ್ರಪ್ರದೇಶದ ದಕ್ಷಿಣದಲ್ಲಿ ಮೈಲ್ಮೈ ಸುಳಿಗಾಳಿ ತೀವ್ರತೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಅಲ್ಲಲ್ಲಿ ನವೆಂಬರ್ 2 ರವರೆಗೆ ಸಾಧಾರಣ ಮಳೆಯಾಗಲಿದೆ.
ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ಟೋಬರ್ 30, 31 ರಂದು ಸಾಧಾರಣ ಮಳೆಯಾಗಲಿದೆ. ನವೆಂಬರ್ 1 ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ ಸೇರಿದಂತೆ ಸಾಧಾರಣ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.