News

ಕರ್ನಾಟಕ ಸೇರಿದಂತೆ ದೇಶದ ಕೆಲವು ಕಡೆ 3 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಹೆಚ್ಚಳ

28 August, 2023 11:53 AM IST By: Kalmesh T
3 degree Celsius temperature increase in Karnataka

Temperature increase in Karnataka : ಕರ್ನಾಟಕ ಸೇರಿದಂತೆ ದೇಶದ ಕೆಲವು ಭಾಗಗಳಲ್ಲಿ ಮುಂಗಾರು ಮಳೆಯ ಕೊರತೆ ಹಾಗೂ ವಾಯವ್ಯ ದಿಕ್ಕಿನಿಂದ ಗಾಳಿ ಬೀಸುತ್ತಿರುವ ಪರಿಣಾಮ ಗರಿಷ್ಠ ಉಷ್ಣಾಂಶದಲ್ಲಿ ಸಾಧಾರಣ ಮಟ್ಟಕ್ಕಿಂತ ಸರಾಸರಿ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Temperature increase in Karnataka : ಜೂನ್‌ನಿಂದ ಈವರೆಗೂ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ 666 ಮಿಲಿಮೀಟರ್ ಮಳೆಯಾಗುತ್ತಿತ್ತು. ಆದರೆ ಈ ವರ್ಷ ಕೇವಲ 490 ಮಿಲಿಮೀಟರ್ ಮಳೆಯಾಗಿದೆ. ಆಗಸ್ಟ್ ತಿಂಗಳಿನಲ್ಲಿಯೇ ಶೇಕಡ 23 ರಷ್ಟು ಮಳೆ ಕೊರತೆ ಉಂಟಾಗಿದೆ. ಹೀಗಾಗಿ ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿದೆ.

ನೈಋತ್ಯ ದಿಕ್ಕಿನಿಂದ ಬೀಸುವ ಗಾಳಿ ಕಡಿಮೆಯಾಗಿ ವಾಯವ್ಯ ಜೊತೆಗೆ ಗಾಳಿ ಬೀಸುತ್ತಿದ್ದು, ಇದರಿಂದ ಉಷ್ಣಾಂಶ ಹೆಚ್ಚಳವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ನಡುವೆ ಕರ್ನಾಟಕದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿದೆ. ಆದರೆ ಒಳನಾಡಿನಲ್ಲಿ ಕೆಲವೆಡೆ ಮಳೆಯಾಗಿದೆ.

ಸಿಂಧನೂರು 5, ಗುಬ್ಬಿ, ಚಿಕ್ಕನಹಳ್ಳಿ 3, ಯಲಬುರ್ಗಾ, ಹೊಸಕೋಟೆ, ಶೃಂಗೇರಿ, ದಾವಣಗೆರೆಯಲ್ಲಿ ತಲಾ 2 ಸೆಂಟಿಮೀಟರ್ ಮಳೆಯಾಗಿದೆ.

ಮುನ್ಸೂಚನೆಯಂತೆ ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಬೆಂಗಳೂರು ಸುತ್ತಮುತ್ತ ಮೋಡಕವಿದ ವಾತಾವರಣವಿರಲಿದೆ.

ಗರಿಷ್ಠ 32, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನದ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂನ್‌ನಿಂದ ಈವರೆಗೂ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ 666 ಮಿಲಿಮೀಟರ್ ಮಳೆಯಾಗುತ್ತಿತ್ತು. ಆದರೆ ಈ ವರ್ಷ ಕೇವಲ 490 ಮಿಲಿಮೀಟರ್ ಮಳೆಯಾಗಿದೆ. ಆಗಸ್ಟ್ ತಿಂಗಳಿನಲ್ಲಿಯೇ ಶೇಕಡ 23 ರಷ್ಟು ಮಳೆ ಕೊರತೆ ಉಂಟಾಗಿದೆ. ಹೀಗಾಗಿ ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿದೆ.

MGNREGA ದ ಆಸರೆ : ಪೇರಲ ಬೆಳೆದು 4 ಲಕ್ಷದವರೆಗೆ ಗಳಸುತ್ತಿರುವ ವಿಕಲಚೇತನ ರೈತ