1. ಸುದ್ದಿಗಳು

ಬರದಿಂದ ಕರ್ನಾಟಕಕ್ಕೆ ಈ ಬಾರಿ ಬರೋಬ್ಬರಿ 33,770 ಕೋಟಿ ರೂ. ನಷ್ಟ!

Hitesh
Hitesh
33,770 crores to Karnataka due to drought this time. Loss!

ರಾಜ್ಯದಲ್ಲಿ ಈ ಬಾರಿ ಮಳೆಯಾಗದೆ ರೈತರು ಸಂಕಷ್ಟದಲ್ಲಿ ಇದ್ದಾರೆ. ಈ ನಡುವೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ವಾಕ್ಸಮರ ನಡೆದಿದೆ.

ಇನ್ನು ಈ ಬಾರಿಯ ಬರದಿಂದ ಕರ್ನಾಟಕಕ್ಕೆ ಬರೋಬ್ಬರಿ 33,770 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಕೇಂದ್ರ ಸರ್ಕಾರ ಕರ್ನಾಟಕವನ್ನು ನಿರ್ಲಕ್ಷಿಸುತ್ತಿದೆ. ಕರ್ನಾಟಕಕ್ಕೆ ಸಮರ್ಪಕವಾಗಿ ಬರ ಪರಿಹಾರವನ್ನು ನೀಡುತ್ತಿಲ್ಲ.

ಕೇಂದ್ರ ಬರ ಅಧ್ಯಯನ ತಂಡವು ರಾಜ್ಯಕ್ಕೆ ಬಂದು ಬರ ಅಧ್ಯಯನವನ್ನು ಮಾಡಿದೆ.

ಆದರೆ, ಇಲ್ಲಿಯ ವರೆಗೆ ಯಾವುದೇ ಅನುದಾನವನ್ನು ರಾಜ್ಯಕ್ಕೆ ನೀಡಿಲ್ಲ ಎಂದು ಅಸಮಾಧನ ವ್ಯಕ್ತಪಡಿಸಿದೆ.  

ಇದೀಗ ಬಿಜೆಪಿ ಅಭಿಯಾನದ ಬಗ್ಗೆ ಕಿಡಿಕಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೊರೆಯ ತನಕ ದೂರು ಕೊಂಡು ಹೋಗಲಾಗದವರು

ಹೊಳೆಯ ತನಕ ಓಡಿದರಂತೆ ಎಂಬ ಗಾದೆ ಮಾತಿನಂತಾಗಿದೆ ರಾಜ್ಯ ಬಿಜೆಪಿ ನಾಯಕರ ದಿಕ್ಕೆಟ್ಟ ಬರ ಅಧ್ಯಯನ ಯಾತ್ರೆ ಎಂದು ವ್ಯಂಗ್ಯವಾಡಿದ್ದಾರೆ.

ಬರಕ್ಕೆ ಪರಿಹಾರ ಕೊಡಬೇಕಾದವರು ದೆಹಲಿಯಲ್ಲಿ ಕೂತಿದ್ದಾರೆ. ಈ ಬಿಜೆಪಿ ನಾಯಕರು ಬರ ಅಧ್ಯಯನಕ್ಕೆ ರಾಜ್ಯದಲ್ಲಿ ಸುತ್ತಾಡಲು ಹೊರಟಿದ್ದಾರೆ.

ಬಿಜೆಪಿ ನಾಯಕರೇ, ನಿಮ್ಮದೇ ಪಕ್ಷದ ಸರ್ಕಾರ ಕಳುಹಿಸಿರುವ ತಜ್ಞರ ತಂಡವೇ ದೆಹಲಿಯಿಂದ ಬಂದು ಕರ್ನಾಟಕದಲ್ಲಿನ ಬರಪರಿಸ್ಥಿತಿಯನ್ನು ಅಧ್ಯಯನ ಮಾಡಿ ಹೋಗಿದೆ.

ಈಗ ನೀವು ಅದೇ ಉದ್ದೇಶದಿಂದ ಇನ್ನೊಂದು ಪ್ರವಾಸಕ್ಕೆ ಹೊರಟಿದ್ದೀರಿ. ಯಾಕೆ, ನಿಮ್ಮದೇ ಸರ್ಕಾರ ಕಳಿಸಿರುವ ಬರ ಅಧ್ಯಯನ ತಂಡದ ಮೇಲೆ ನಿಮಗೆ ನಂಬಿಕೆ ಇಲ್ಲವೇನ ಎಂದು ಪ್ರಶ್ನೆ ಮಾಡಿದೆ.

ಇನ್ನು ನಮ್ಮ ಸರ್ಕಾರದ ಅಧ್ಯಯನದ ಪ್ರಕಾರ ಬರಗಾಲದಿಂದಾಗಿ ಆಗಿರುವ ನಷ್ಟ ಅಂದಾಜು 33,770 ಕೋಟಿ ರೂಪಾಯಿ.

ಕೇಂದ್ರ ಸರ್ಕಾರದಿಂದ ನಾವು ಕೇಳಿರುವುದು 17,901 ಕೋಟಿ ರೂಪಾಯಿ ಪರಿಹಾರ.

ಕೇಂದ್ರ ಸರ್ಕಾರದಿಂದ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಂದಿಲ್ಲ. ಬಿಜೆಪಿ ನಾಯಕರೇ, ರಾಜ್ಯದ ರೈತರ ಬಗ್ಗೆ ನಿಮಗೆ ಪ್ರಾಮಾಣಿಕವಾದ

ಕಾಳಜಿ ಹೊಂದಿದ್ದರೆ ಮೊದಲು ಹೆಚ್ಚು ಪರಿಹಾರಕ್ಕಾಗಿ ಒತ್ತಾಯಿಸಿ ಎಂದು ಆಗ್ರಹಿಸಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಡಬಲ್ ಎಂಜಿನ್ ಸರ್ಕಾರ ಬಂದರೆ ರಾಜ್ಯದಲ್ಲಿ ಹಾಲು-ಜೇನಿನ ಹೊಳೆ ಹರಿಯತ್ತದೆ ಎಂದು ಅಮಾಯಕ ಕನ್ನಡಿಗರನ್ನು ನಂಬಿಸಿ ಕಳೆದ

ಲೋಕಸಭಾ ಚುನಾವಣೆಯಲ್ಲಿ 25 ಸಂಸದರನ್ನು ಗೆಲ್ಲಿಸಿಕೊಂಡರಲ್ಲಾ, ಅವರೇನು ಮಾಡುತ್ತಿದ್ದಾರೆ? ಕಳ್ಳೆಕಾಯಿ ತಿನ್ನುತ್ತಿದ್ದಾರಾ?

ಅವರೆಂದಾದರೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಬಾಯಿ ಬಿಟ್ಟಿದ್ದಾರಾ?

ಬಿಜೆಪಿ ನಾಯಕರೇ ನೀವು ಯಾತ್ರೆ ಮಾಡಬೇಕಾಗಿರುವುದು ರಾಜ್ಯದಲ್ಲಿ ಅಲ್ಲ, ನೀವು ಯಾತ್ರೆ ಹೊರಡಬೇಕಾಗಿರುವುದು ದೆಹಲಿಗೆ.

ನಿಮ್ಮ ಪಕ್ಷದ 25 ಲೋಕಸಭಾ ಸದಸ್ಯರನ್ನು ಕಟ್ಟಿಕೊಂಡು ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿಯವರ ಕಾಲಿಗಾದರೂ ಬಿದ್ದು ಬರಪರಿಹಾರಕ್ಕೆ ಹೆಚ್ಚು ಹಣ ಕೊಡುವಂತೆ ಕೇಳಿ.

ನಿಮಗೆ ಕೇಳುವ ಧೈರ್ಯ ಇಲ್ಲ ಎಂದಾದರೆ ಪ್ರಧಾನಿ ಜೊತೆ ಭೇಟಿಗಾಗಿ ನನಗಾದರೂ ಒಂದು ಅಪಾಯಿಂಟ್ ಮೆಂಟ್ ಕೊಡಿಸಿ ಬಿಡಿ.

ನೆಲ-ಜಲ-ಭಾಷೆಯ ವಿಚಾರದಲ್ಲಿ ಕರ್ನಾಟಕಕ್ಕೆ, ಕನ್ನಡಕ್ಕೆ ಮತ್ತು ಕನ್ನಡಿಗರಿಗೆ ಸಾಲು ಸಾಲು ಅನ್ಯಾಯ ಮಾಡಿ ಯಾವ

ಮುಖ ಹೊತ್ತು ರಾಜ್ಯ ಪ್ರವಾಸ ಹೊರಟಿದ್ದೀರಿ? ಬರಪೀಡಿತ ಜನರಿಗೆ ಬೇಕಾಗಿರುವುದು ನಿಮ್ಮ ಬಾಯಿ ಮಾತಿನ ಸಾಂತ್ವನ ಅಲ್ಲ, ಅವರಿಗೆ ಬೇಕಾಗಿರುವುದು ಪರಿಹಾರ.

ಬರಗಾಲದ ನಷ್ಟ - ನೋವನ್ನು ಬಳಸಿಕೊಂಡು ರಾಜಕೀಯ ಬೇಳೆ ಬೇಯಿಸಲು ಹೊರಟಿರುವ ನಿಮ್ಮನ್ನು ಜನ ಹೇಗೆ ಸ್ವೀಕರಿಸುತ್ತಾರೋ ಗೊತ್ತಿಲ್ಲ, ಜಾಗ್ರತೆಯಿಂದಿರಿ ಎಂದು ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿದ್ದಾರೆ. 

Published On: 02 November 2023, 02:23 PM English Summary: 33,770 crores to Karnataka due to drought this time. Loss!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.