News

ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ಓಕೆ ಎಂದ 38.37 ಲಕ್ಷ ಮಕ್ಕಳು!

30 January, 2023 5:52 PM IST By: Hitesh
38.37 lakh children said that eggs are ok in the afternoon heat!

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 38.37 ಲಕ್ಷ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ನೀಡುವಂತೆ ಕೇಳಿದ್ದಾರೆ. 

ರಾಜ್ಯದಲ್ಲಿ ಪೌಷ್ಟಿಕಾಂಶದ ಕೊರತೆ ನೀಗಿಸಲು ಶಿಕ್ಷಣ ಇಲಾಖೆಯು  1ರಿಂದ 8ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ವಾರಕ್ಕೆ ಎರಡು ದಿನ ಮೊಟ್ಟೆ, ಚಿಕ್ಕಿ ಅಥವಾ ಬಾಳೆ ಹಣ್ಣು ನೀಡುತ್ತಿದೆ. ಮಕ್ಕಳ ಬೇಡಿಕೆಗೆ ಅನುಗುಣವಾಗಿ ಮೂರು ಪದಾರ್ಥಗಳಲ್ಲಿ ಅವರು ಬಯಸಿದ್ದನ್ನು ನೀಡಲು ಎಲ್ಲ ಶಾಲೆಗಳಿಗೂ ಸೂಚಿಸಲಾಗಿದೆ. ವಿದ್ಯಾರ್ಥಿಗಳ ಬೇಡಿಕೆ ಕುರಿತು ಅಭಿಪ್ರಾಯ ಸಂಗ್ರಹಿಸಲಾಗಿದ್ದು, 47.97 ಲಕ್ಷ ಮಕ್ಕಳಲ್ಲಿ ಶೇ 79.98 ಮಕ್ಕಳು ಬೇಯಿಸಿದ ಮೊಟ್ಟೆಗೆ ಬೇಡಿಕೆ ಸಲ್ಲಿಸಿದ್ದಾರೆ. 2.27 ಲಕ್ಷ ಮಕ್ಕಳು ಚಿಕ್ಕಿ ಅಥವಾ ಬಾಳೆಹಣ್ಣು ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಬೆಳಗಾವಿ, ಬೆಂಗಳೂರು, ಕಲಬುರಗಿ ಹಾಗೂ ಮೈಸೂರು ವಿಭಾಗದಲ್ಲಿ ಮೊಟ್ಟೆಗೆ ಹೆಚ್ಚಿನ ಬೇಡಿಕೆ ಬಂದಿದೆ.  

ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಯ ಮಹಾಪೂರ, 5 ಕೋಟಿ ಬಹುಮಾನ!

ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳು ಮೊಟ್ಟೆಯನ್ನು ಕೇಳಿದರೆ ಮೊಟ್ಟೆಯನ್ನೇ ಕೊಡಬೇಕು. ಇದರ ಬದಲಾಗಿ ಬಾಳೆಹಣ್ಣು, ಚಿಕ್ಕಿ ನೀಡುವಂತಿಲ್ಲ ಎಂದು ಸರ್ಕಾರ ನಿರ್ದೇಶಿಸಿದೆ. ಸರ್ಕಾರಿ ಶಾಲೆಯ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಪರಿಚಯಿಸಲಾಗಿದ್ದು,  ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು, ಚಿಕ್ಕಿ ನೀಡುವಂತೆ ಸೂಚಿಸಿದೆ. ಆದರೆ, ಕೆಲವು ಶಾಲೆಗಳಲ್ಲಿ ಮಕ್ಕಳು ಮೊಟ್ಟೆ ಕೇಳಿದರೂ ಬಲವಂತವಾಗಿ ಬಾಳೆಹಣ್ಣು ಹಾಗೂ ಚಿಕ್ಕಿ ನೀಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಆರ್ ವಿಶಾಲ್ ಅವರು ಈ ಆದೇಶವನ್ನು ನೀಡಿದ್ದು, ಮಧ್ಯಾಹ್ನದ ಊಟದ ಕುರಿತು ವಿವಿಧ ಮೂಲಗಳಿಂದ ಪ್ರತಿಕ್ರಿಯೆಯನ್ನು ಸ್ವೀಕರಿಸಲಾಗಿದೆ. ಹೀಗಾಗಿ ಈ ಸಂಬಂಧ ಸುತ್ತೋಲೆಯನ್ನು ಹೊರಡಿಸಲಾಗಿದೆ. ಯೋಜನೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿದ್ದೇವೆ. ಶಾಲೆಗಳು ಎದುರಿಸುತ್ತಿರುವ ಕೆಲವು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ. ಕೆಲವು ನಿಯಮಗಳನ್ನು ಸ್ಪಷ್ಟಪಡಿಸಿದ್ದೇವೆಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೋಟಿ ವೃಕ್ಷ ಅಭಿಯಾನ, ಮತ್ತೆ ಗಾರ್ಡನ್‌ ಸಿಟಿಗೆ ಜೀವ

ಮಧ್ಯಾಹ್ನದ ಊಟದ ಯೋಜನೆಯಡಿ ಮಕ್ಕಳಿಗೆ ಮೊಟ್ಟೆ ವಿತರಿಸುವ ಕುರಿತು ಪ್ರತಿಕ್ರಿಯೆ ನೀಡಿ, ಮಕ್ಕಳು ಮೊಟ್ಟೆ ಕೇಳಿದರೆ, ಅವರಿಗೆ ಮೊಟ್ಟೆಯನ್ನೇ ನೀಡಬೇಕು. ಮೊಟ್ಟೆ ಕೇಳುವ ಮಕ್ಕಳಿಗೆ ಬಾಳೆಹಣ್ಣು ಹಾಗೂ ಚಿಕ್ಕಿ ನೀಡಬಾರದು. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಹಾಗೂ ಚಿಕ್ಕಿ ನೀಡಬೇಕೆಂದು ಹೇಳಿದ್ದಾರೆ.

ಮೊಟ್ಟೆ ವಿತರಣೆಗೆ ಆರ್ಥಿಕ ಕೊರತೆ ಕುರಿತು ಹಲವು ದೂರುಗಳು ಬಂದಿವೆ. ಮೊಟ್ಟೆಯ ಬೆಲೆ ಬದಲಾಗುತ್ತದೆ, ಮೊಟ್ಟೆ ದರ ಹೆಚ್ಚಳವಾಗಿದ್ದರೆ, ಸೂಕ್ತ ಕ್ರಮ ಕೈಗೊಂಡು ವಿತರಿಸಲು ಎಸ್‌ಡಿಎಂಸಿಗಳಿಗೆ ಸೂಚನೆ ನೀಡಲಾಗಿದೆ. ಆದರೆ ಮೊಟ್ಟೆ ವಿತರಣೆ ಯೋಜನೆಯನ್ನು ಸ್ಥಗಿತಗೊಳಿಸಬಾರದು. ಪ್ರಸ್ತುತ ಸನ್ನಿವೇಶದಲ್ಲಿ ದರ ಪರಿಷ್ಕರಣೆಗೆ ಅವಕಾಶವಿಲ್ಲದ ಕಾರಣ ಮೊಟ್ಟೆ ಖರೀದಿಯಲ್ಲಿ ದರ ಮೀರಿದ್ದರೆ, ತಗಲುವ ವೆಚ್ಚವನ್ನು ಹಿಂದಿನ ದಿನಗಳಲ್ಲಿ ದರ ಕಡಿಮೆ ಇದ್ದ ವೇಳೆ ಉಳಿದಿರುವ ಮೊತ್ತ ಅಥವಾ ಶಾಲಾ ಎಸ್‌ಡಿಎಂಸಿ ಸಮಿತಿಯ ಹಂತದಲ್ಲಿ ಲಭ್ಯವಿರುವ ಅನುದಾನದಿಂದ ಭರಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

weather update ರಾಜ್ಯದಲ್ಲಿ ಹವಾಮಾನ ಹೇಗಿದೆ, ಎಲ್ಲಿಲ್ಲಿ ಕನಿಷ್ಠ ತಾಪಮಾನ ಇಲ್ಲಿದೆ ವಿವರ