1. ಸುದ್ದಿಗಳು

Good News : ಮೀನುಗಾರಿಕೆ ದೋಣಿಗಳನ್ನ ಪೆಟ್ರೋಲ್‌ ಇಂಜಿನ್‌ಗಳಾಗಿ ಬದಲಾಯಿಸಲು ₹50,000 ಸಹಾಯಧನ!

Kalmesh T
Kalmesh T
₹50,000 subsidy to convert fishing boats to petrol engines!

ಮೀನುಗಾರಿಕಾ ದೋಣಿಗಳಲ್ಲಿನ ಸೀಮೆ ಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್ ಇಂಜಿನ್‌ಗಳಾಗಿ ಬದಲಾಯಿಸಲು ತಲಾ ₹50,000 ರೂ. ಸಹಾಯಧನ ನೀಡುತ್ತಿದ್ದೇವೆ. ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ ಇಂಜಿನ್ ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು ಎಂದು ನಾವು ಆಯವ್ಯಯದಲ್ಲಿ ಘೋಷಿಸಿದ್ದೇವೆ, ಈ ಕಾರ್ಯಕ್ರಮ ಸರಿಯಾಗಿ ಜಾರಿಯಾಗುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಒಂದಷ್ಟು ಕಟ್ಟುನಿಟ್ಟಿನ ಸೂಚನೆಗಳನ್ನು ಮಾತನಾಡಿದ ಅವರು, “ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್ ನಿಂದ 2 ಲಕ್ಷ ಕಿಲೋ ಲೀಟರ್ ಗಳವರೆಗೆ ಹೆಚ್ಚಿಸಿದ್ದೇವೆ. ಇದರಿಂದ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳಷ್ಟು ನೆರವು ನೀಡಿದ್ದೇವೆ” ಎಂದರು.

ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಗೆ ಸೂಚನೆ

ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗಬಾರದು. ಒಮ್ಮೆ ಬೀಜ, ರಸಗೊಬ್ಬರ ಕೊಟ್ಟರೆ ಮುಗಿಯಿತು ಎಂದು ಅಧಿಕಾರಿಗಳು ವರ್ತಿಸಬಾರದು. ಬೆಳೆಹಾನಿಯಾಗಿ ಮತ್ತೆ ಬೀಜ, ರಸಗೊಬ್ಬರಕ್ಕೆ ರೈತರಿಂದ ಬೇಡಿಕೆ ಬಂದರೆ ತಕ್ಷಣ ಅದನ್ನು ಪೂರೈಸಬೇಕು.

ಅಡಿಕೆಗೆ ಎಲೆಚುಕ್ಕೆ ರೋಗ, ಹಳದಿ ರೋಗ, ಕೀಟಬಾಧೆ ಕಾಡುತ್ತಿದೆ. ಈ ಸಂಬಂಧ ಕೃಷಿ ವಿಜ್ಞಾನಿಗಳು ಹಾಗೂ ತಜ್ಞರನ್ನು ಕರೆದು ಸಭೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು.

ಅನೈತಿಕ ಪೊಲೀಸ್ ಗಿರಿ : ಕಠಿಣ ಕ್ರಮಕ್ಕೆ ಸೂಚನೆ

“ಮಾದಕ ವಸ್ತು ಹಾವಳಿ ಮಂಗಳೂರಿನಲ್ಲಿ ವಿಪರೀತ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಪೊಲೀಸ್ ಇಲಾಖೆ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು.

ಗೂಂಡಾಕಾಯ್ದೆ ಅಡಿಯಲ್ಲಿ ಇಂಥ ಸಮಾಜಘಾತುಕರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದರು.

ಅನೈತಿಕ ಪೊಲೀಸ್ ಗಿರಿ ವಿಚಾರದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಗುಂಪು, ಯಾವುದೇ ಸಿದ್ಧಾಂತದವರು ಕಾನೂನು ಕೈಗೆತ್ತಿಕೊಂಡು ಅನೈತಿಕ ಪೊಲೀಸ್ ಗಿರಿ ನಡೆಸಿದರೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕು.

ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಗಮನಕ್ಕೆ ಒತ್ತು

ಆರೋಗ್ಯ ಸೂಚ್ಯಂಕದಲ್ಲೂ ದಕ್ಷಿಣ ಕನ್ನಡ ಜಿಲ್ಲೆ ಕುಸಿದಿದೆ. ದಕ್ಷಿಣ ಕನ್ನಡ ಜಿಲ್ಲೆ 2015 ರಲ್ಲಿ 3ನೇ ಸ್ಥಾನದಲ್ಲಿತ್ತು. ಈಗ 23ನೇ ಸ್ಥಾನಕ್ಕೆ ಕುಸಿದಿದೆ.

ಎರಡು ವರ್ಷಗಳಿಂದ ಏನು ಪ್ರಗತಿ ಸಾಧಿಸದಿರುವುದು ಗಂಭೀರ ಸಮಸ್ಯೆ. ಕೂಡಲೇ ಈ ಬಗ್ಗೆ ಸಂಬಂಧಿತ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು.

ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಇನ್ನು ಮುಂದೆ ಅವರಿಗೆ ನೀಡಿದ ಕ್ವಾಟ್ರಸ್ ಗಳಲ್ಲೇ ನೆಲೆಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳು ಕ್ರಮ ವಹಿಸಬೇಕು ಎಂದರು. 

Most Expensive Cow : ಬರೋಬ್ಬರಿ ₹35 ಕೋಟಿಗೆ ಹರಾಜಾದ ನೆಲ್ಲೋರ್ ತಳಿ ಹಸು! ಇದು ವಿಶ್ವದ ದುಬಾರಿ ಹಸು ಗೊತ್ತೆ?

Published On: 02 August 2023, 02:14 PM English Summary: ₹50,000 subsidy to convert fishing boats to petrol engines!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.