1. ಸುದ್ದಿಗಳು

Cauvery water ತಮಿಳುನಾಡಿಗೆ 5000 ಕ್ಯೂಸೆಕ್ಸ್ ಕಾವೇರಿ ನೀರು: ಸಿ.ಎಂ ಸಿದ್ದರಾಮಯ್ಯ ತುರ್ತು ಸಭೆ!

Hitesh
Hitesh
5000 cusecs of Cauvery water for Tamil Nadu: CM Siddaramaiah's emergency meeting!

ತಮಿಳುನಾಡಿಗೆ 5000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕೆಂದು ಸೂಚನೆ ಬಂದಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಅವರು ಬುಧವಾರ ಸರ್ವಪಕ್ಷ ಸಭೆ ನಡೆಸಿದರು.

ದಕ್ಷಿಣ ಭಾರತ ರಾಜ್ಯಗಳ ಡಿಜಿಪಿ ಸಮಾವೇಶದ ನಂತರ ಮಾಧ್ಯಮದವರೊಂದಿಗೆ ಸಿದ್ದರಾಮಯ್ಯ ಅವರು ಮಾತನಾಡಿದರು.

ತಮಿಳುನಾಡಿಗೆ 5000 ಕ್ಯೂಸೆಕ್ಸ್ ಕಾವೇರಿ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣಾ ಪ್ರಾಧಿಕಾರದವರು ಸೂಚಿಸಿರುತ್ತಾರೆ.

ಆದರೆ, ಕಾವೇರಿಯಲ್ಲಿ ನೀರಿಲ್ಲ. ಕುಡಿಯುವ ನೀರು ಹಾಗೂ ಬೆಳೆಗಳಿಗೆ ನೀರು ಒದಗಿಸಬೇಕಿದೆ.

ಇಂತಹ ಪರಿಸ್ಥಿತಿಯಲ್ಲಿ 5000 ಕ್ಯೂಸೆಕ್ಸ್ ನೀರನ್ನು 15 ದಿನ ಬಿಡಬೇಕೆಂದು ಸೂಚನೆ ನೀಡಿದ್ದಾರೆ.

ಕಾವೇರಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ಸಂಕಷ್ಟ ಸೂತ್ರವನ್ನು ಇನ್ನೂ ಸಿದ್ಧಪಡಿಸಿಲ್ಲ. 

ಆದ್ದರಿಂದ ಈ ಬಗ್ಗೆ ಚರ್ಚೆ ನಡೆಸಲು ಇಂದು ಸರ್ವಪಕ್ಷ ಸದಸ್ಯರ ವಿಶೇಷ ತುರ್ತು ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದರು.

ಸರ್ವ ಪಕ್ಷ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ ಸಂಗತಿಗಳು ಈ ರೀತಿ ಇವೆ. 

* ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಸರ್ವಪಕ್ಷಗಳ ಸಭೆ ಕರೆಯಲು ತೀರ್ಮಾನಿಸಲಾಯಿತು.

* ತುರ್ತಾಗಿ ಆಯೋಜನೆಯಾದ ಈ ಸಭೆಗೆ ಕೆಲವರು ಪೂರ್ವನಿರ್ಧಾರಿತ ಕಾರ್ಯಕ್ರಮಗಳ ಕಾರಣ ಬರಲು ಸಾಧ್ಯವಾಗಿಲ್ಲ.

* ಸುಪ್ರೀಂ ಕೋರ್ಟ್‌ ಆದೇಶ ಪ್ರಕಾರ ಸಾಮಾನ್ಯ ವರ್ಷಗಳಲ್ಲಿ 177.25 ಟಿಎಂಸಿ ನೀರು ಬಿಡಬೇಕು.

ಆದರೆ, ದುರದೃಷ್ಟವಶಾತ್‌ ಸಂಕಷ್ಟ ಹಂಚಿಕೆ ಸೂತ್ರವಿಲ್ಲದ ಕಾರಣ ಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದೇವೆ ಎಂದು ವಿವರಿಸಿದರು.

* 99 ಟಿಎಂಸಿ ನೀರು ಕೊಡಬೇಕಾಗಿತ್ತು. ಇವತ್ತಿನ ವರೆಗೆ 37.7 ಟಿಎಂಸಿ ನೀರು ಬಿಡಲಾಗಿದೆ.

ಈಗಲೂ ನೀರು ಬಿಡಲಾಗದೆ ಇರುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ನಮಗೆ 70 ಟಿಎಂಸಿ ನೀರು ಬೆಳೆ ಉಳಿಸಿಕೊಳ್ಳಲು ಬೇಕು. 33 ಟಿಎಂಸಿ ಕುಡಿಯುವ ನೀರಿಗಾಗಿ ಬೇಕು.

ಜೊತೆಗೆ 3 ಟಿಎಂಸಿ ಕೈಗಾರಿಕೆಗಳಿಗೆ ಬೇಕು.

ಇದೀಗ ಲಭ್ಯವಿರುವುದು ನಾಲ್ಕೂ ಜಲಾಶಯಗಳಿಂದ  53 ಟಿಎಂಸಿ ನೀರು ಮಾತ್ರ.

ಬೆಳೆಗಳಿಗೆ ಕಟ್ಟುನೀರು ಬಿಡಲಾಗುತ್ತಿದೆ.

ಇದರಲ್ಲಿ ನಾವು 33 ಟಿಎಂಸಿ ಕುಡಿಯುವ ನೀರಿಗೆ ಹಾಗೂ 3 ಟಿಎಂಸಿ ಕೈಗಾರಿಕೆಗಳಿಗೆ ಒದಗಿಸಬೇಕಾಗುತ್ತದೆ. ಬೆಳೆಗಳಿಗೆ ಸಾಕಾಗುವುದಿಲ್ಲ.

* ಅಂದು ಕೂಡ ಕಾವೇರಿ ನೀರು ನಿಯಂತ್ರಣ ಸಮಿತಿಯು 10 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ,

ನಂತರ 5000 ಸಾವಿರ ಮತ್ತೆ ನಿನ್ನೆ ಐದು ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ಮಾಡಿದೆ.

ಈ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆಯನ್ನು ಕರೆಯಲಾಯಿತು ಎಂದು ಹೇಳಿದರು.  

* ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಭೆ ಕರೆಯಲಾಯಿತು.

* ಕಾವೇರಿ ನೀರು ನಿಯಂತ್ರಣ ಸಮಿತಿಗೆ ಮತ್ತೊಂದು ಅರ್ಜಿ ಸಲ್ಲಿಸಲಾಗುವುದು.

ಸುಪ್ರೀಂ ಕೋರ್ಟಿನಲ್ಲಿಯೂ ಅರ್ಜಿ ಸಲ್ಲಿಸಲಾಗುವುದು.

ಅಲ್ಲಿಯೂ ವಾಸ್ತವಾಂಶ ತಿಳಿಸುವ ಕೆಲಸ ಮಾಡಲಾಗುವುದು. ಈಗ 5,000 ಕ್ಯೂಸೆಕ್ಸ್‌ ನೀರು ಬಿಡುಗಡೆ ಮಾಡುವ

ಬಗ್ಗೆ ಹಾಗೂ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ವಕೀಲರ ತಂಡದೊಂದಿಗೆ ಚರ್ಚಿಸಲಿದ್ದಾರೆ.

* ಸರ್ವಪಕ್ಷ ನಿಯೋಗ ತೆರಳಲು ಅನುವು ಮಾಡಿಕೊಡುವಂತೆ ಪ್ರಧಾನಮಂತ್ರಿಯವರ ಸಮಯ ಕೇಳಿ

ಮತ್ತೊಮ್ಮೆ ಪತ್ರ ಬರೆಯಲಾಗುವುದು. ಸಂಸದರೂ ಹೋರಾಟ ಮಾಡುವ ಭರವಸೆ ನೀಡಿದ್ದಾರೆ.

* 18 ರಿಂದ ಸಂಸತ್‌ ಅಧಿವೇಶನ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸಚಿವರು

ಹಾಗೂ ಸಂಸದರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿ ಚರ್ಚಿಸಿ, ದೇಶದ ಗಮನ ಸೆಳೆಯಲಾಗುವುದು.

ಇದಕ್ಕೆ ಎಲ್ಲರೂ ಸಹಮತಿ ಸೂಚಿಸಿದ್ದಾರೆ.

ನಮ್ಮ ಮುಂದೆ ಎರಡು ದಾರಿ ಇದೆ- ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮತ್ತೆ ಅರ್ಜಿ ಹಾಕುವುದು ಮೊದಲ ದಾರಿ. 

ಎರಡನೇ ಆಯ್ಕೆ ನೀರು ಇಲ್ಲ ನಮ್ಮ ಬಳಿ ಎಂದು ಸುಪ್ರೀಂ ಕೋರ್ಟಿನ ಮೊರೆ ಹೋಗಬೇಕು

*ಇಂದು ಜಲಸಂಪನ್ಮೂಲ ಸಚಿವರು ದೆಹಲಿಗೆ ತೆರಳಿ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದಾರೆ. ವಕೀಲರ ತಂಡದೊಂದಿಗೆ ಚರ್ಚಿಸಲಿದ್ದಾರೆ.

ನಾವು ರೈತರ ಹಿತಾಸಕ್ತಿಯನ್ನು ರಕ್ಷಿಸಬೇಕಾಗಿದೆ.

ರಾಜ್ಯದ ಮುಖ್ಯಮಂತ್ರಿಯಾಗಿ, ನೀರು ಕೊಡುವುದು ಕಷ್ಟವಿದೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ

*ರೈತರನ್ನು ಬಲಿಕೊಟ್ಟು ನೀರು ಕೊಡಲಾಗದು. ಈಗ ಸಂಕಷ್ಟದಲ್ಲಿದ್ದೇವೆ ನಾವು.

ನಾವೆಲ್ಲರೂ ಒಟ್ಟಿಗೆ ಹೋಗಬೇಕು.

ಈ ಸಂಕಷ್ಟಕ್ಕೆ ಮೇಕೆದಾಟು ಯೋಜನೆಯೇ ಪರಿಹಾರ ಎಂದರು. ಹೀಗಾಗಿ, ಎಲ್ಲ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.

ನಮ್ಮ ರಾಜಕೀಯ ಒಲವು, ನಿಲುವುಗಳನ್ನು ಬದಿಗಿಟ್ಟು, ರಾಜ್ಯದ ಹಿತಾಸಕ್ತಿಯ ದೃಷ್ಟಿಯಿಂದ ಒಟ್ಟಿಗೆ ಕೆಲಸ ಮಾಡೋಣ ಎಂದು ಹೇಳಿದರು. 

ಚಿತ್ರಕೃಪೆ: ಸಾಮಾಜಿಕ ಜಾಲತಾಣ

Published On: 13 September 2023, 04:58 PM English Summary: 5000 cusecs of Cauvery water for Tamil Nadu: CM Siddaramaiah's emergency meeting!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.