ಬೆಂಗಳೂರು ನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಪರಿಗಣಿಸಿ ಪ್ರಸ್ತುತ ನಡೆಯುತ್ತಿರುವ 6-9ನೇ ಭೌತಿಕ ತರಗತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಲ್ಲಿಸಲಾಗುತ್ತದೆ ಎಂದು ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 10 ನೇ ತರಗತಿಗಳು ಎಂದಿನಂತೆ ಮುಂದುವರೆಯಲಿದ್ದು, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ ಎಂದಿದ್ದಾರೆ.
ಇದು ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿದೆ.ಇನ್ನು 10ನೇ ತರಗತಿ ಮಕ್ಕಳಿಗೆ ಎಂದಿನಂತೆ ಭೌತಿಕ ತರಗತಿ ಮುಂದುವರೆಯಲಿವೆ. ಆದರೆ, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದ ಉಳಿದೆಡೆ ಪ್ರಸ್ತುತ ಇರುವ ವ್ಯವಸ್ಥೆ ಮುಂದುವರೆಯಲಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಪರೀಕ್ಷೆ: ಕಡ್ಡಾಯ ಶಿಕ್ಷಣ ಕಾಯಿದೆಯ ಅವಕಾಶಗಳಡಿಯಲ್ಲಿ 6-9ನೇ ತರಗತಿಗಳಿಗೆ ಸಂಬಂಧಿಸಿದಂತೆ ಶಾಲೆಗಳು ನಡೆಸಬೇಕಾದ ಮೌಲ್ಯಾಂಕನ ಪರೀಕ್ಷೆಗಳ ಕುರಿತಂತೆ ಮುಂದಿನ ದಿನಗಳಲ್ಲಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದೆಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.
ರಾಜ್ಯದ ಉಳಿದ ಕಡೆ ಹಾಲಿ ಇರುವಂತೆ 6 ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಭೌತಿಕ ತರಗತಿ ವರೆಗಿನ ಮಕ್ಕಳಿಗೆ ಭೌತಿಕ ತರಗತಿಗಳು ಮುಂದುವರೆಯಲಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅನುಗುಣವಾಗಿ ಇತರೆ ಜಿಲ್ಲೆಗಳಲ್ಲೂ ಭೌತಿಕ ತರಗತಿ ಸ್ಥಗಿತಗೊಳಿಸಬೇಕಾಗಿ ಬಂದರೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ಶಿಕ್ಷಣ ಕಾಯ್ದೆಯ ಅನುಸಾನ 6-9ನೇ ತರಗತಿಗೆ ಸಂಬಂಧಿಸಿದಂತೆ ಶಾಲೆಗಳು ನಡೆಸಬೇಕಾದ ಮೌಲ್ಯಾಂಕನ ಪರೀಕ್ಷೆಗಳ ಕುರಿತು ಮುಂದಿನ ದಿನಗಳಲ್ಲಿ ನಿರ್ದೇಶನಗಳನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಪರೀಕ್ಷೆ: ಕಡ್ಡಾಯ ಶಿಕ್ಷಣ ಕಾಯಿದೆಯ ಅವಕಾಶಗಳಡಿಯಲ್ಲಿ 6-9ನೇ ತರಗತಿಗಳಿಗೆ ಸಂಬಂಧಿಸಿದಂತೆ ಶಾಲೆಗಳು ನಡೆಸಬೇಕಾದ ಮೌಲ್ಯಾಂಕನ ಪರೀಕ್ಷೆಗಳ ಕುರಿತಂತೆ ಮುಂದಿನ ದಿನಗಳಲ್ಲಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದೆಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.
Share your comments