News

ಸರ್ಕಾರಿ ನೌಕರರಿಗೆ ಬಂಪರ್‌: ಶೇ 17 ರಷ್ಟು ವೇತನ ಹೆಚ್ಚಳಕ್ಕೆ ಸಿಎಂ ಆದೇಶ

01 March, 2023 11:48 AM IST By: Maltesh
7th Pay Commision: Bumper for government employees: CM orders 17% salary hike

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಇಂದಿನಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆ ಸೇರಿದಂತೆ ರಾಜ್ಯಾದ್ಯಂತ ಎಲ್ಲ ಸರ್ಕಾರಿ ಕಚೇರಿಗಳ ಸೇವೆಗಳ ಮೇಲೆ ತೀವ್ರ ಪರಿಣಾಮ ಬೀರಿದೆ.

7ನೇ ವೇತನ ಆಯೋಗದ ವರದಿ ಮತ್ತು ನೌಕರರ ಹಿತಾಸಕ್ತಿಗಳಿಗೆ ಅನುಗುಣವಾಗಿ ಸರಕಾರ ಆದೇಶ ಹೊರಡಿಸದ ಹೊರತು ಮುಷ್ಕರ ಕರೆ ವಾಪಸ್‌ ಪಡೆಯುವದಿಲ್ಲ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ. 

ಇನ್ನು ಮಧ್ಯಾಹ್ನದೊತ್ತಿಗೆ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಿ ನೌಕರರ ಬೇಡಿಕೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.  ಬಳಿಕ ಮಾತನಾಡಿ "ಸರ್ಕಾರಿ ನೌಕರರಿಗೆ ಮಧ್ಯಂತರವಾಗಿ ಶೇ 17ರಷ್ಟು ವೇತನ ಹೆಚ್ಚಳ ಮಾಡುವ ತೀರ್ಮಾನ ಆಗಿದೆ.

ಈ ಕುರಿತು ಆದೇಶ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ." ಎಂದು ತಿಳಿಸಿದ್ದಾರೆ. ಇತ್ತ ಅಧಿಕೃತ ಆದೇಶ ಹೊರ ಬೀಳುವವರೆಗೂ ಮುಷ್ಕರ ವಾಪಸ್‌ ಪಡೆಯುವುದಿಲ್ಲ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದ್ದಾರೆ.

ಹವಾಯಿ ಚಪ್ಪಲಿ ಧರಿಸಿದ ಸಾಮಾನ್ಯರು ವಿಮಾನದಲ್ಲಿ ಪ್ರಯಾಣಿಸಲು ಶ್ರಮ: ಮೋದಿ!