1. ಸುದ್ದಿಗಳು

7TH Pay Commission 10 ಲಕ್ಷ ಸರ್ಕಾರಿ ನೌಕರರಿಂದ ನಾಳೆ ಕೆಲಸಕ್ಕೆ ಗೈರು; ಜನ ಜೀವನದ ಮೇಲೆ ಪರಿಣಾಮ!

Hitesh
Hitesh

ರಾಜ್ಯ ಸರ್ಕಾರವು 7th Pay Commission ಏಳನೇ ವೇತನ ಆಯೋಗದ ರಚನೆಗೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟ ನಿರ್ಧಾರವನ್ನು ತೆಗೆದುಕೊಳ್ಳದೆ ಇರುವ ಹಿನ್ನೆಲೆಯಲ್ಲಿ ಮಾರ್ಚ್‌ 1ಕ್ಕೆ ಕೆಲಸಕ್ಕೆ ಗೈರಾಗಲು ಸರ್ಕಾರಿ ನೌಕರರು ಮುಂದಾಗಿದ್ದಾರೆ.

ರಾಜ್ಯದಲ್ಲಿ ಬರೋಬ್ಬರಿ 10 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರು ಇದ್ದಾರೆ ಎಂದು ಅಂದಾಜಿಸಲಾಗಿದ್ದು, ಎಲ್ಲರೂ ಏಕಕಾಲಕ್ಕೆ ಕೆಲಸಕ್ಕೆ ಗೈರಾಗುವ ಮೂಲಕ ಪ್ರತಿಭಟನೆ ನಡೆಸಿದರೆ, ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.  

ರಾಜ್ಯದಲ್ಲಿ ಏಳನೇ ವೇತನ ಆಯೋಗ ರಚನೆಗೆ ಸಂಬಂಧಿಸಿದಂತೆ ಸಮಿತಿ ರಚನೆ ಮಾಡಿ, ವರದಿಯ ಆಧಾರದ ಮೇಲೆ ಕ್ರಮ ವಹಿಸುವುದಾಗಿ ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದರು.

ಇದೀಗ ಸರ್ಕಾರಿ ನೌಕರರು 7ನೇ ವೇತನ ಆಯೋಗ ಹಾಗೂ ಹಳೆಯ​ ಪಿಂಚಿಣಿ ಯೋಜನೆಯನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಅನಿರ್ದಿಷ್ಟಾವಧಿಗೆ ಹೋರಾಟ  ಮಾಡುವುದಾಗಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

7ನೇ ವೇತನ ಆಯೋಗ ಮತ್ತು ಒಪಿಎಸ್​ ಪಿಂಚಣಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಫೆಬ್ರವರಿ 23ರಿಂದ 28ರವರೆಗೆ ಏಳು ದಿನಗಳ ಕಾಲ ಸರ್ಕಾರಕ್ಕೆ ಗಡುವು ನೀಡಲಾಗಿತ್ತು.

ಆದರೆ, 8 ದಿನಗಳಿಂದಲೂ ಸರ್ಕಾರ ಯಾವುದೇ ನಿರ್ಧಾರವನ್ನೂ ಕೈಗೊಂಡಿಲ್ಲ. ಹೀಗಾಗಿ, ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ.

ಕಳೆದ 9 ತಿಂಗಳಿನಿಂದಲೂ ಮನವಿ ಮಾಡುತ್ತಲ್ಲೇ ಇದ್ದೇವೆ. ಇದು ಏಕಾಏಕಿ ನಿರ್ಧಾರವಲ್ಲ ಎಂದು ಅವರು ಹೇಳಿದ್ದಾರೆ.  

ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಸಂಬಂಧಿಸಿದಂತೆ ಸರ್ಕಾರಿ ನೌಕರರ ಸಂಘದ ತುರ್ತು ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಬಿಬಿಎಂಪಿ ಸಂಘದಿಂದಲೂ ಬೆಂಬಲ
ಇನ್ನು ಪ್ರತಿಭಟನೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ    ನೌಕರರ ಸಂಘವು ಬೆಂಬಲ ನೀಡಿದ್ದು, ಕಸ ವಿಲೇವಾರಿ ಮಾಡುವುದಿಲ್ಲ ಎಂದು ಹೇಳಿದೆ.

ಈ ಸಂಬಂಧ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ನೌಕರರ ಸಂಘಅಧ್ಯಕ್ಷ‌ ಅಮೃತ್ ರಾಜ್  ಅವರು ಸಹ ಬೆಂಬಲ ಸೂಚಿಸಿದ್ದಾರೆ.

ಇನ್ನು ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಧ್ಯಂತರ ವರದಿಯನ್ನು ತರಿಸಿಕೊಂಡು ಚರ್ಚೆ ಮಾಡಲಾಗುವುದು.

ಸರ್ಕಾರಿ ನೌಕರರು ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ.

ಆದರೆ, ಸರ್ಕಾರ ಲಿಖಿತ ರೂಪದಲ್ಲಿ ಏಳನೇ ವೇತನ ಆಯೋಗದ ಬಗ್ಗೆ ಸ್ಪಷ್ಟಪಡಿಸುವ ವರೆಗೆ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.  

ರಾಜ್ಯ ಸರ್ಕಾರಿ ನೌಕರರ ಸಂಘದ ಸಭೆಯ ನಿರ್ಣಯದಂತೆ ಎಲ್ಲಾ ವೃಂದ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಒಮ್ಮತ ತೀರ್ಮಾನದಂತೆ ಈ ಬೇಡಿಕೆಗಳನ್ನು ಈಡೇರಿಸದಿದ್ದರೆ,

ಮಾರ್ಚ್‌ ಒಂದರಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಬೃಹತ್ ಬೆಂಗಳೂರು

ಮಹಾನಗರ ಪಾಲಿಕೆ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

7TH Pay Commission 1 Lakh Govt Employees Absent From Work Tomorrow!
  • ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ದಿನಾಂಕ: 01-07-2022 ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು,
  • 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿಯನ್ನು ಆದಷ್ಟು ಬೇಗನೆ ಪಡೆದು,
  • ಚುನಾವಣೆ ನೀತಿ ಸಂಹಿತೆಗಿಂತ ಮೊದಲು ಶೇ.40 ರಷ್ಟು ಫಿಟ್‌ಮೆಂಟ್‌ ಸೌಲಭ್ಯವನ್ನು ದಿನಾಂಕ:01- 07-2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು.
  • ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್ ನೌಕರರನ್ನು
  • ಓ.ಪಿ.ಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ.
  • ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ಬಂದಿದ್ದು ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್ ಯೋಜನೆಯನ್ನು
  • ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.
  • ಹಲವಾರು ವರ್ಷಗಳಿಂದ ಮೇಲ್ಕಂಡ ಸಂಘದ ವತಿಯಿಂದ ನೀಡಿರುವ ಮನವಿ ಪತ್ರ ನೀಡಲಾಗಿದೆ.
  • ನ್ಯಾಯಾಯುತ ಬೇಡಿಕೆ ಆಗ್ರಹಿಸಿ ಹೋರಾಟ ಹಮ್ಮಿಕೊಂಡ ಸಂದರ್ಭದಲ್ಲಿ ನೀಡಿರುವ ಆಶ್ವಾಸನೆಯು ಸಕರಾತ್ಮಕವಾಗಿ ಸ್ಪಂದಿಸಿಲ್ಲ. 
  • ನಮ್ಮ ಸಂಘದ ವತಿಯಿಂದ ನೀಡಿರುವ ಮನವಿ ಪತ್ರಗಳನ್ನು ಆದ್ಯತೆ ಮೇರೆಗೆ ಅತೀ ಜರೂರಾಗಿ ಪರಿಗಣಿಸಬೇಕು ಎಂದು ಎ.ಅಮೃತ್ ರಾಜ್  ಅವರು ಆಗ್ರಹಿಸಿದ್ದಾರೆ. 
Published On: 28 February 2023, 04:42 PM English Summary: 7TH Pay Commission 1 Lakh Govt Employees Absent From Work Tomorrow!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.