News

47 ಲಕ್ಷ ಉದ್ಯೋಗಿಗಳು ಮತ್ತು 68 ಲಕ್ಷ ಪಿಂಚಣಿದಾರರಿಗೆ ಇನ್ನೂ 2 ದಿನದಲ್ಲಿ ದೊರೆಯಲಿದೆಯ ತುಟ್ಟಿಭತ್ಯೆಯ ಸಿಹಿಸುದ್ದಿ!

29 June, 2022 11:47 AM IST By: Kalmesh T
7th pay commission

ಇಷ್ಟು ದಿನಗಳಿಂದ ಸರ್ಕಾರಿ ನೌಕರರು ಕಾಯುತ್ತಿದ್ದ ದಿನ ಸಮೀಪಿಸುತ್ತಿದೆ. ಸರ್ಕಾರದ ಸೂಚನೆಯಂತೆ ಜುಲೈ 1ರಿಂದ ಸರ್ಕಾರಿ ನೌಕರರ ತುಟ್ಟಿಭತ್ಯೆಯಲ್ಲಿ ಶೇ.5ರಷ್ಟು ಏರಿಕೆಯಾಗುವ ನಿರೀಕ್ಷೆ ಇದೆ. ಇಲ್ಲಿದೆ ವಿವರ

Rain Update: ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ..!

ಕೇಂದ್ರ ಸರ್ಕಾರಿ ನೌಕರರ ಡಿಎನಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆ ಇದೆ. ಜುಲೈ 1, 2022ರಿಂದ ಸರ್ಕಾರಿ ನೌಕರರ ತುಟ್ಟಿಭತ್ಯೆಯಲ್ಲಿ ಶೇ.5ರಷ್ಟು ಏರಿಕೆಯಾಗುವ ನಿರೀಕ್ಷೆ ಇದೆ. 

ಕೇಂದ್ರ ಸರ್ಕಾರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯ ಹೆಚ್ಚಳವನ್ನು ಜುಲೈ 1, 2022 ರಿಂದ ಘೋಷಿಸುವ ನಿರೀಕ್ಷೆ ಇದೆ. ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ,  ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ಇಎಂಐಗಳ ಹಿನ್ನೆಲೆ ಮೋದಿ ಸರ್ಕಾರ ಕೇಂದ್ರ ನೌಕರರ ತುಟ್ಟಿ ಭತ್ಯೆಯಲ್ಲಿ ಭಾರಿ ಏರಿಕೆ ಮಾಡಲು ಹೊರಟಿದೆ.

ಈ ಮೊದಲು ತುಟ್ಟಿಭತ್ಯೆಯನ್ನು ಶೇಕಡಾ 4 ರಷ್ಟು ಹೆಚ್ಚಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ ಕೈಗಾರಿಕಾ ಕಾರ್ಮಿಕರಿಗೆ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ತುಟ್ಟಿಭತ್ಯೆಯನ್ನು ಶೇಕಡಾ 5 ರಷ್ಟು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಬ್ರೇಕಿಂಗ್‌: ರಾಜ್ಯದ ಜನತೆಗೆ ಕರೆಂಟ್‌ ಶಾಕ್‌: ಜುಲೈ 1ರಿಂದ ವಿದ್ಯುತ್‌ ದರ ಏರಿಕೆ!

ಕೇಂದ್ರ ನೌಕರರು ಪ್ರಸ್ತುತ ಶೇ. 34 ರಷ್ಟು ತುಟ್ಟಿಭತ್ಯೆಯನ್ನು ಪಡೆಯುತ್ತಿದ್ದಾರೆ ಮತ್ತು ಇದಕ್ಕೂ ಮೊದಲು ಅದು ಶೇ.38 ಕ್ಕೆ ಏರಿಕೆಯಾಗುವ ನಿರೀಕ್ಷೆ ವ್ಯಕ್ತಪಡಿಸಲಾಗಿತ್ತು. ಆದರೆ ಇದೀಗ ತುಟ್ಟಿಭತ್ಯೆ ಶೇ.5ರಷ್ಟು ಹೆಚ್ಚಾಗುವುದು ಬಹುತೇಕ ನಿಚ್ಚಳಗಾಗಿದೆ.

ಅದನ್ನು ಶೇ.39ಕ್ಕೆ ಹೆಚ್ಚಿಸಲಾಗುವುದು ಎಂದು ನಿರೀಕ್ಷೆ ವ್ಯಕ್ತಪಡಿಸಲಾಗುತ್ತಿದೆ. ಏಪ್ರಿಲ್ ತಿಂಗಳ ಅಖಿಲ-ಭಾರತದ ಗ್ರಾಹಕ ಬೆಲೆ ಸೂಚ್ಯಂಕದ ಅಂಕಿ-ಅಂಶಗಾನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಅಂದಾಜನ್ನು ವ್ಯಕ್ತಪಡಿಸಲಾಗುತ್ತಿದೆ.

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು, ಜುಲೈ ತಿಂಗಳಲ್ಲಿ, ಸರ್ಕಾರವು ತುಟ್ಟಿಭತ್ಯೆ (ಡಿಎ) ಯಲ್ಲಿ ಭಾರಿ ಹೆಚ್ಚಳ ಮಾಡಬಹುದು ಎಂದು ಊಹಿಸಲಾಗಿದೆ.

ಇದು ಸಂಭವಿಸಿದಲ್ಲಿ, ಕೇಂದ್ರ ನೌಕರರ ವೇತನದಲ್ಲಿ ಭಾರಿ ಏರಿಕೆಯಾಗಲಿದೆ ಎನ್ನಲಾಗಿದೆ. ಕೇಂದ್ರ ನೌಕರರ ತುಟ್ಟಿಭತ್ಯೆಯನ್ನು ಶೇ.34ರಿಂದ ಶೇ.39ಕ್ಕೆ ಹೆಚ್ಚಿಸಿದರೆ, ಕೇಂದ್ರ ನೌಕರರ ವೇತನವನ್ನು 8,000 ರೂ.ನಿಂದ 27,000 ರೂ.ಹೆಚ್ಚಾಗಲಿದೆ.

ಗುಡ್‌ನ್ಯೂಸ್‌: 5 ಲಕ್ಷ ರೈತರಿಗೆ ₹749 ಕೋಟಿ ಬೆಳೆ ವಿಮೆ ಇತ್ಯರ್ಥ..!

ಅಂಕಿಅಂಶಗಳ ಪ್ರಕಾರ, ಕೇಂದ್ರ ಸರ್ಕಾರದ ಈ ನಿರ್ಧಾರದಿಂದ 47 ಲಕ್ಷ ಉದ್ಯೋಗಿಗಳು ಮತ್ತು 68 ಲಕ್ಷ ಪಿಂಚಣಿದಾರರಿಗೆ ಭಾರಿ ಲಾಭ ತರಲಿದೆ. ಸಾಮಾನ್ಯವಾಗಿ, ಜನವರಿ 1 ಮತ್ತು ಜುಲೈ 1 ರಿಂದ ತುಟ್ಟಿಭತ್ಯೆ ಹೆಚ್ಚಿಸುವ ಪ್ರವೃತ್ತಿ ಕಂಡುಬಂದಿದೆ, ಇಂತಹ ಪರಿಸ್ಥಿತಿಯಲ್ಲಿ ಜುಲೈ ತಿಂಗಳಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಈ ಭಾರಿ ಉಡುಗೊರೆ ಸಿಗಲಿದೆ.

ಚಿಲ್ಲರೆ ಹಣದುಬ್ಬರ ದತ್ತಾಂಶದ ಆಧಾರದ ಮೇಲೆ ಕೇಂದ್ರ ಸರ್ಕಾರವು ಜನವರಿ ಮತ್ತು ಜುಲೈ ತಿಂಗಳಲ್ಲಿ ವರ್ಷಕ್ಕೆ ಎರಡು ಬಾರಿ ಡಿಎ ಮತ್ತು ಡಿಆರ್ ಅನ್ನು ಪರಿಷ್ಕರಿಸುತ್ತದೆ. ದೇಶದಲ್ಲಿ ಹಣದುಬ್ಬರವು ಆರ್‌ಬಿಐ ಅಂದಾಜಿನ ಗಡಿಯನ್ನು ತಲುಪಿದೆ ಎಂಬುದು ಇಲ್ಲಿ ಉಲ್ಲೇಖನೀಯ .

ಚಿಲ್ಲರೆ ಹಣದುಬ್ಬರವು ಆರ್‌ಬಿಐನ ಸಹಿಷ್ಣುತೆಯ ಮಟ್ಟವಾದ ಶೇಕಡಾ 6 ಕ್ಕಿಂತ ಹೆಚ್ಚಾಗಿದೆ. ಚಿಲ್ಲರೆ ಹಣದುಬ್ಬರದ ದರವು ಮೇ ತಿಂಗಳಲ್ಲಿ ಶೇ. 7.04 ಪ್ರತಿಶತದಷ್ಟಿದೆ, ಇದು ಸಗಟು ಬೆಲೆ ಹಣದುಬ್ಬರದ ಆಧಾರದ ಮೇಲೆ ಇದೀಗ ಶೇ.1ಕ್ಕೆ ತಲುಪಿದೆ.