1. ಸುದ್ದಿಗಳು

7th Pay Commission ಸರ್ಕಾರಿ ನೌಕರರ ಶೇ 17ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಅಸ್ತು: ಏನೆಲ್ಲ ಸೌಲಭ್ಯ, ಇಲ್ಲಿದೆ ಕಂಪ್ಲೀಟ್‌ ಡೀಟೆಲ್ಸ್‌!

Hitesh
Hitesh

ಏಳನೇ ವೇತನ ಆಯೋಗ| ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರಿ ನೌಕರರ ಶೇ 17ರಷ್ಟು ವೇತನ ಹೆಚ್ಚಳಕ್ಕೆ ಆದೇಶ ಮಾಡಿದ್ದಾರೆ.

7th Pay Commission ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸೋಮವಾರದಿಂದ  ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆ ಸೇರಿದಂತೆ ರಾಜ್ಯಾದ್ಯಂತ ಎಲ್ಲ ಸರ್ಕಾರಿ ಕಚೇರಿಗಳ ಸೇವೆಗಳ ಮೇಲೆ ತೀವ್ರ ಪರಿಣಾಮ ಬೀರಿದೆ.

7ನೇ ವೇತನ ಆಯೋಗದ ವರದಿ ಮತ್ತು ನೌಕರರ ಹಿತಾಸಕ್ತಿಗಳಿಗೆ ಅನುಗುಣವಾಗಿ ಸರಕಾರ ಆದೇಶ ಹೊರಡಿಸದ ಹೊರತು ಮುಷ್ಕರ ಕರೆ

ವಾಪಸ್‌ ಪಡೆಯುವದಿಲ್ಲ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ. 

ಸರ್ಕಾರಿ ನೌಕರರಿಗೆ ಮಧ್ಯಂತರವಾಗಿ ಶೇ 17ರಷ್ಟು ವೇತನ ಹೆಚ್ಚಳ ಮಾಡುವ ತೀರ್ಮಾನ ಆಗಿದೆ.

15,000 ಸಾವಿರ ರೂ. ಚುನಾವಣೆಯಲ್ಲಿ ಗೆದ್ದರೆ ಪ್ರತಿ ವರ್ಷ ರೈತರಿಗೆ: ಜನಾರ್ದನ ರೆಡ್ಡಿ ಭರವಸೆ!

ಆದೇಶದ ಡೀಟೆಲ್ಸ್‌ ಇಲ್ಲಿದೆ  

ದಿನಾಂಕ 19.11.2022ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾಗಿರುತ್ತದೆ.

ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ, ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸಿರುತ್ತದೆ.

ಅದರಂತೆ, ಈ ಕೆಳಕಂಡ ಆದೇಶವನ್ನು ಹೊರಡಿಸಿದೆ.

ರಾಜ್ಯದಲ್ಲಿ ಕೋಟ್ಯಾಂತರ ರೂಪಾಯಿ ಮೊತ್ತದ ಯೋಜನೆಗೆ: ಸೋಮವಾರ ಮೋದಿಯಿಂದ ಚಾಲನೆ

ಸರ್ಕಾರದ ಆದೇಶ ಸಂಖ್ಯೆ: ಆಇ 07 ಎಸ್‌ಆರ್‌ಪಿ 2023 ಬೆಂಗಳೂರು, ದಿನಾಂಕ: 01ನೇ ಮಾರ್ಚ್ 2023

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 01ನೇ ಏಪ್ರಿಲ್ 2023 ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ.

  1. ಮಧ್ಯಂತರ ಪರಿಹಾರದ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ,

(ಅ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ,

(ಆ) 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ,

(ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ.

  1. ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.
  2. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಏಪ್ರಿಲ್ 2023 ರಿಂದ ಜಾರಿಗೆ ಬರುವಂತೆ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.
  3. ಸರ್ಕಾರದ ಸ್ಥಳೀಯ ಸಂಸ್ಥೆಗಳ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶವು ಅನ್ವಯಿಸುತ್ತದೆ.
  4. ಸ್ಥಳೀಯ ಸಂಸ್ಥೆಗಳ (ನಗರ ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯ) ನೌಕರರಿಗೆ ಸೌಲಭ್ಯವನ್ನು ಮಂಜೂರು ಮಾಡುವುದರಿಂದ ಉಂಟಾಗುವ ವೆಚ್ಚವನ್ನು ಅನ್ವಯಿಸುವ ಸ್ಥಳೀಯ ಸಂಸ್ಥೆಗಳೇ ಭರಿಸತಕ್ಕದ್ದು.
  5. ಯುಜಿಸಿ/ಎಐಸಿಟಿಇ/ಐಸಿಎಆರ್/ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ಪಿಂಚಣಿದಾರರಿಗೆ ಈ ಆದೇಶವು ಅನ್ವಯಿಸುವುದಿಲ್ಲ.
  6. ತಾತ್ಕಾಲಿಕ ಪರಿಹಾರದ ಕಾರಣದಿಂದ ಸಂದಾಯ ಮಾಡಲು ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಶಗಳನ್ನು ಮುಂದಿನ ರೂಪಾಯಿಗೆ ಪೂರ್ಣಾಂಕಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.
  7. ಈ ಆದೇಶದ ಮೂಲಕ ಮಂಜೂರಾದ ತಾತ್ಕಾಲಿಕ ಪರಿಹಾರದ ಮೊತ್ತವು. ವಿಶಿಷ್ಟ ಸಂಭಾವನೆಯಾಗಿದ್ದು, ಇದು ನಿವೃತ್ತಿ ಸೌಲಭ್ಯ, ತುಟ್ಟಿ ಭತ್ಯೆಯನ್ನು ನಿರ್ಧರಿಸುವಾಗ ಅಥವಾ ಬೇರೆ ಯಾವುದೇ ಉದ್ದೇಶಗಳಿಗೆ ಪರಿಗಣಿಸತಕ್ಕದ್ದಲ್ಲ.
  8. ಈ ತಾತ್ಕಾಲಿಕ ಪರಿಹಾರದ ವೆಚ್ಚವನ್ನು ವೇತನ ವೆಚ್ಚವನ್ನು ಭರಿಸುವ ಶೀರ್ಷಿಕೆಯಿಂದಲೇ ಭರಿಸತಕ್ಕದ್ದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಜಯಶ್ರೀಎಂ ಅವರು ಆದೇಶ ಮಾಡಿದ್ದಾರೆ.

PF ಭವಿಷ್ಯ ನಿಧಿ ಪಿಂಚಣಿಯಲ್ಲಿ ಮಹತ್ವದ ಬದಲಾವಣೆ!

Published On: 01 March 2023, 01:58 PM English Summary: 7th Pay Commission Govt asks for 17% increase in salary of government employees

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.