News

ಬರ ಪರಿಹಾರಕ್ಕೆ 900 ಕೋಟಿ ರೂ. ಮಂಜೂರು: ಮುಖ್ಯಮಂತ್ರಿ ಸಿದ್ದರಾಮಯ್ಯ

06 November, 2023 6:05 PM IST By: Hitesh
ಇಂದಿನ ಪ್ರಮುಖ ಸುದ್ದಿಗಳ ವಿವರ ಇಲ್ಲಿದೆ

ಇಂದಿನ ಪ್ರಮುಖ ಸುದ್ದಿಗಳ ವಿವರ ಇಲ್ಲಿದೆ.

ಈಶಾನ್ಯ ಮುಂಗಾರು ಈ ಬಾರಿ ತೀವ್ರವಾಗಿದ್ದು, ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಬರ ಪರಿಹಾರಕ್ಕೆ 900 ಕೋಟಿ ಮಂಜೂರು ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇನ್ನು ಹಲವು ಮಹತ್ವದ ಬೆಳವಣಿಗೆಗಳು ನಡೆದಿವೆ. ಆ ಸುದ್ದಿಗಳ ವಿವರ ಇಲ್ಲಿದೆ.  

  1. ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ: ಐಎಂಡಿ ವರದಿ
    2. ದೀಪಾವಳಿ ಹಬ್ಬ: 2000 ಸಾವಿರ ಬಸ್‌ಗಳ ಹೆಚ್ಚುವರಿ ಸೇವೆ !
    3. ಬರ ಪರಿಹಾರಕ್ಕೆ 900 ಕೋಟಿ ರೂ. ಮಂಜೂರು: ಮುಖ್ಯಮಂತ್ರಿ ಸಿದ್ದರಾಮಯ್ಯ
    4. ರಾಜ್ಯದ ಬರ ತಾಲ್ಲೂಕುಗಳ ಸಂಖ್ಯೆ 223ಕ್ಕೆ ಏರಿಕೆ!
    5. ದಕ್ಷಿಣ ಭಾರತ ಸೇರಿ ದೇಶದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ
    6. ರಾಜ್ಯದ 7 ಲಕ್ಷ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ
    7. ಚಿನ್ನದ ಬೆಲೆಯಲ್ಲಿ ಇನ್ನಷ್ಟು ಕುಸಿತ, ಎಷ್ಟಿದೆ ಇಂದಿನ ಚಿನ್ನದ ಬೆಲೆ ?
    ಸುದ್ದಿಗಳ ವಿವರ ಈ ರೀತಿ ಇದೆ.

1. ಸೋಮವಾರ ಹಾಗೂ ಮಂಗಳವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೋಮವಾರ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಕೋಲಾರ ಜಿಲ್ಲೆಯ ಒಂದೆರಡು ಕಡೆಗಳಲ್ಲಿ

ಭಾರೀ ಮಳೆಯಾಗಲಿದೆ. ಮಂಗಳವಾರ ಚಿಕ್ಕಬಳ್ಳಾಪುರ, ಚಿತ್ರದುರ್ಗ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ

ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು,

ಮಿಂಚು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. 

Farmers Pumpsets ಕೃಷಿ ಪಂಪ್‌ಸೆಟ್‌ಗಳಿಗೆ ಸೌರವಿದ್ಯುತ್ ಮೂಲಕ ವಿದ್ಯುತ್: ಸಿ.ಎಂ ಸೂಚನೆ!

----------------------
2. ನವೆಂಬರ್‌ 12ರ ನರಕ ಚತುರ್ದಶಿ, 14ರಂದು ಬಲಿಪಾಡ್ಯಮಿ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ನವೆಂಬರ್‌ 10ರಿಂದ

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ ಸೇರಿದಂತೆ ರಾಜ್ಯ ಹಾಗೂ ಹೊರ ರಾಜ್ಯಗಳಿಗೆ

2 ಸಾವಿರ ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
----------------------
3. 2023ನೇ ಸಾಲಿನಲ್ಲಿ ಎದುರಾಗಿರುವ ಬರವನ್ನು ಎದುರಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.

ಈ ಸಂಬಂಧ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬರ ಪರಿಹಾರಕ್ಕಾಗಿ 900 ಕೋಟಿ ರೂ.

ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ. ರಾಜ್ಯದ ಎಲ್ಲಾ ಸಚಿವರು ನವೆಂಬರ್ 15ರೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ

ನೀಡಿ, ಬರ ಪರಿಸ್ಥಿತಿಯ ಅಧ್ಯಯನ ಹಾಗೂ ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.  
----------------------
4. ರಾಜ್ಯದಲ್ಲಿ ಬರಪೀಡಿತ ತಾಲ್ಲೂಕುಗಳ ಸಂಖ್ಯೆ 223ಕ್ಕೆ ಏರಿಕೆ ಕಂಡಿದೆ. ಬೀದರ್, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ಏಳು

ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಮಾನ್ಸೂನ್‌ ಮುಂಗಾರು ಕೈಕೊಟ್ಟ

ಹಿನ್ನೆಲೆಯಲ್ಲಿ ಕರ್ನಾಟಕದ 195 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳು ಎಂದು ಮೊದಲ ಹಂತದಲ್ಲಿ ಘೋಷಿಸಲಾಗಿತ್ತು.

ಎರಡನೇ ಹಂತದಲ್ಲಿ 21 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಲಾಗಿತ್ತು.  

ಇದೀಗ ಮೂರನೇ ಹಂತದಲ್ಲಿ ಏಳು ತಾಲ್ಲೂಕುಗಳನ್ನು ಸೇರಿಸಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದಂತಾಗಿದೆ.
 ----------------------  

5. ಈಶಾನ್ಯ ಮುಂಗಾರು ಈ ಭಾರೀ ತೀವ್ರವಾಗಿದೆ. ಹೀಗಾಗಿ, ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣ ಸೇರಿದಂತೆ ಉತ್ತರ

ಭಾರತದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ.  ತಮಿಳುನಾಡು, ಪುದುಚೇರಿ, ಕೇರಳ ಹಾಗೂ ಕರ್ನಾಟಕದ ದಕ್ಷಿಣ

ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ತಮಿಳುನಾಡಿನ ಚೆನ್ನೈನಲ್ಲಿ ಧಾರಾಕಾರ ಮಳೆಯಾಗಿದ್ದು, ಕೇರಳದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಭೂಕುಸಿತವೂ ಸಂಭವಿಸಿದೆ.

ಕೇರಳದ ವಿವಿಧ ಜಿಲ್ಲೆಗಳಲ್ಲಿ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಒಡಿಶಾ, ಕೊಂಕಣ-ಗೋವಾ

ಮಹಾರಾಷ್ಟ್ರ, ಛತ್ತೀಸ್‌ಗಢ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆ ಮುಂದುವರಿದಿದೆ.
----------------------
6. ರಾಜ್ಯದ ಏಳು ಲಕ್ಷ ಕಾರ್ಮಿಕರ ಮಕ್ಕಳಿಗೆ ಶೀಘ್ರ ವಿದ್ಯಾರ್ಥಿ ವೇತನ ಲಭ್ಯವಾಗಲಿದೆ. ಈ ಸಂಬಂಧ ಮಾತನಾಡಿರುವ ಕಾರ್ಮಿಕ

ಸಚಿವ ಸಂತೋಷ್‌ ಲಾಡ್ ಅವರು, ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ವಿದ್ಯಾರ್ಥಿವೇತನಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವ

ರಾಜ್ಯದ 7 ಲಕ್ಷ ಕಾರ್ಮಿಕರ ಮಕ್ಕಳಿಗೆ ನವೆಂಬರ್‌ 9ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿರುವ

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿವೇತನ ನೀಡುವುದಕ್ಕೆ ಚಾಲನೆ ನೀಡಲಿದ್ದಾರೆ ಎಂದಿದ್ದಾರೆ.
----------------------  

7. ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ ಕಂಡು ಬಂದಿದೆ. ಸೋಮವಾರದ ಚಿಲ್ಲರೆ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ

ಗ್ರಾಂಗೆ 5,635 ರೂಪಾಯಿ ಆಗಿದೆ. ಇನ್ನು 24 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 6,147 ರೂಪಾಯಿ ಆಗಿದೆ.

ಇನ್ನು 24 ಕ್ಯಾರೆಟ್‌ ಚಿನ್ನದ ಬೆಲೆ ಪ್ರತಿ ಗ್ರಾಂಗೆ ಭಾನುವಾರಕ್ಕಿಂತ 17 ರೂಪಾಯಿ ಇಳಿದಿದೆ.

8 ಹಾಗೂ 10 ಗ್ರಾಂಗೆ ಅನುಕ್ರಮವಾಗಿ 136 ಹಾಗೂ 170 ರೂಪಾಯಿ ಇಳಿಕೆಯಾಗಿದೆ.