ಕರ್ನಾಟಕ ರಾಜ್ಯದಲ್ಲಿ ಒಟ್ಟು 47.86 ಲಕ್ಷ ರೈತರಿಗೆ ಒಟ್ಟು ₹956.71 ಕೋಟಿ ರೂಪಾಯಿ ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಹಣ ರೈತರ ಖಾತೆಗೆ ಜಮಾ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿರಿ: PM Kisan 11 ನೇ ಕಂತಿನ ಹಣ ನಿಮ್ಮ ಖಾತೆಗೆ ಇನ್ನೂ ಬಂದಿಲ್ಲವೇ? ಹಾಗಿದ್ದರೆ ಈಗಲೇ ಚೆಕ್ ಮಾಡಿ...
ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai ) ಅವರು PM-KISAN ಕರ್ನಾಟಕ ಯೋಜನೆಯಡಿ (PM-KISAN Karnataka Scheme ) ರಾಜ್ಯದ 47.86 ಲಕ್ಷ ರೈತರ ಅಕೌಂಟಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ 11ನೇ ಕಂತು 2000 ರೂ. ಗಳನ್ನು ಬಿಡುಗಡೆ ಮಾಡಿದರು.
ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ 47.86 ಲಕ್ಷ ರೈತರಿಗೆ ಒಟ್ಟು 956.71 ಕೋಟಿ ರೂ. ಮೊತ್ತವನ್ನು ರಾಜ್ಯದ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ (DBT) ಮೂಲಕ ಬಿಡುಗಡೆ ಮಾಡಿದರು. ಇಲ್ಲಿಯವರೆಗೆ ರಾಜ್ಯ ಸರ್ಕಾರವು ಒಟ್ಟು 3861.66 ಕೋಟಿ ರೂ. ನೆರವನ್ನು ರೈತರಿಗೆ ಬಿಡುಗಡೆ ಮಾಡಿದೆ.
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 2019ರಿಂದ ಮಾರ್ಚ್ ವರೆಗೆ 53.83 ಲಕ್ಷ ರೈತರಿಗೆ 8702.29 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ. ಮೇ 31 ರಂದು ಮಾನ್ಯ ಪ್ರಧಾನ ಮಂತ್ರಿಗಳು ರಾಜ್ಯದ 49.30 ಲಕ್ಷ ರೈತರಿಗೆ 1279.86 ಕೋಟಿ ರೂ. ಬಿಡುಗಡೆ ಮಾಡಿದರು.
Asani Cyclone ನ ಕಾರಣ ಕರ್ನಾಟದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ!
PM Sinchayi: ರೈತರಿಗೆ ಇಲ್ಲಿದೆ ಭರ್ಜರಿ ಸಬ್ಸಿಡಿ: ನೀರಾವರಿ ಯೋಜನೆಗೆ ಶೇ.90ರಷ್ಟು ಸಹಾಯಧನ
ಕೃಷಿ ಸಚಿವ ಬಿ.ಸಿ. ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐಎಸ್ ಎನ್ ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾಧ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ರೀತಿ ಪರಿಶೀಲಿಸಿಕೊಳ್ಳಿ :
ಮೊದಲು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಧಿಕೃತ ವೆಬ್‌ಸೈಟ್ https://pmkisan.gov.in ಗೆ ಹೋಗಿ .
ಈಗ 'ಫಾರ್ಮರ್ ಕಾರ್ನರ್' ನಲ್ಲಿ ನೀಡಲಾದ Beneficiary List ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ಇಲ್ಲಿ ಕ್ಲಿಕ್ ಮಾಡಿದಾಗ ತೆರೆಯುವ ವೆಬ್‌ಪುಟದಲ್ಲಿ, ರಾಜ್ಯ, ಜಿಲ್ಲೆ, ಉಪ ಜಿಲ್ಲೆ, ಬ್ಲಾಕ್ ಮತ್ತು ಗ್ರಾಮದ ಮಾಹಿತಿಯನ್ನು ಕೇಳಲಾಗುತ್ತದೆ.
ಮಣ್ಣು ಪರೀಕ್ಷೆ ಮಾಡಿ ದುಪ್ಪಟ್ಟು ಲಾಭ ಪಡೆಯಿರಿ!
ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಭೂಮಿಯಲ್ಲಿ ಕೃಷಿ: ಕೃಷಿ ಆಕಾಂಕ್ಷಿಗಳಿಗೆ ವರದಾನ ಈ ಯೋಜನೆ
ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿದ ನಂತರ, Get Report ಮೇಲೆ ಕ್ಲಿಕ್ ಮಾಡಿ.
ಇಲ್ಲಿ ನಿಮ್ಮ ಮುಂದೆ ಒಂದು ಪಟ್ಟಿ ಇರುತ್ತದೆ, ಅದರಲ್ಲಿ ನಿಮ್ಮ ಹೆಸರನ್ನು ನೀವು ಕಾಣಬಹುದು.
ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ, ಪಿಎಂ ಕಿಸಾನ್ ನಿಧಿಯ 2000 ರೂ .ನಿಮ್ಮ ಖಾತೆಗೆ ಬರುತ್ತದೆ.
Share your comments