News

ಏಪ್ರಿಲ್‌ 6ಕ್ಕೆ ಅದ್ಧೂರಿ ಕರಗ ಶಕ್ತ್ಯೋತ್ಸವ ಆಚರಣೆ, ಈ ಬಾರಿಯ ವಿಶೇಷತೆ ಏನು!

24 March, 2023 12:28 PM IST By: Hitesh
A Grand Karaga Shaktyotsava celebration on April 6

ಬೆಂಗಳೂರಿನಲ್ಲಿ ನಡೆಯುವ ವಿಶ್ವ ಪ್ರಸಿದ್ಧ ಧರ್ಮರಾಯಸ್ವಾಮಿ ಕರಗ ಶಕ್ತ್ಯೋತ್ಸವ  ಅದ್ಧೂರಿ ಆಚರಣೆಗೆ ಸಂಬಂಧಿಸಿದಂತೆ ಸಿದ್ಧತೆ ಪ್ರಾರಂಭವಾಗಿದೆ. 

ವಿಶ್ವ ವಿಖ್ಯಾತ ಶ್ರೀ ದ್ರೌಪದಿದೇವಿ ಕರಗ ಶಕ್ತ್ಯೋತ್ಸವ ಮತ್ತು ಶ್ರೀ ಧರ್ಮರಾಯ ಸ್ವಾಮಿ ರಥೋತ್ಸವ ಏಪ್ರಿಲ್‌ 6ರಂದು ಚೈತ್ರ ಪೂರ್ಣಿಮೆಯಂದು ನಡೆಯಲಿದೆ.

ಇದರ ಪೂರ್ವಭಾವಿಯಾಗಿ ಆಹ್ವಾನ ಪತ್ರಿಕೆಯನ್ನು ಚಿಕ್ಕಪೇಟೆ ಶಾಸಕ ಡಾ. ಉದಯ್ ಬಿ. ಗರುಡಾಚಾರ್ ಮತ್ತು ಮುಖ್ಯಆಯುಕ್ತ ತುಷಾರ್ ಗಿರಿನಾಥ್ ಅವರು ಬಿಡುಗಡೆ ಮಾಡಿದರು.

Gold Price Today ಚಿನ್ನ- ಬೆಳ್ಳಿ ಬೆಲೆಯಲ್ಲಿ ಏರಿಳಿತ, ಹೇಗಿದೆ ಇಂದಿನ ಚಿನ್ನದ ದರ?

ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳು

  • ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಾರ್ಯಕ್ರವನ್ನು ನಡೆಸಬೇಕು.
  • ಕರಗ ಶಕ್ತ್ಯೋತ್ಸವವು ಹೊರಡುವ ಮಾರ್ಗದ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳ ದುರಸ್ತಿ ಕಾರ್ಯವನ್ನು ಕೈಗೊಳ್ಳುವುದು.
  • ಕರಗ ಉತ್ಸವ ನಡೆಯುವ ಬೀದಿಗಳಲ್ಲಿ ದೀಪಗಳ ಅಳವಡಿಕೆ ವ್ಯವಸ್ಥೆಯನ್ನು ಕೈಗೊಳ್ಳುವುದು.
  • ಪಾಲಿಕೆಯ ಆರೋಗ್ಯ ಇಲಾಖೆ ವತಿಯಿಂದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯ ನಿಯೋಜನೆ ಮಾಡುವುದು.

Sarus Crane ಒಂದು ವರ್ಷ ಅಪರೂಪದ ಸಾರಸ್‌ ಕೊಕ್ಕರೆ ಸಾಕಿದ ರೈತ: ಈಗ ಫಜೀತಿ!

  • ಭಕ್ತಾದಿಗಳು ಹಾಗೂ ಸಾರ್ವಜನಿಕರ ಉಪಯೋಗಕ್ಕಾಗಿ ಇ-ಶೌಚಾಲಯಗಳ ವ್ಯವಸ್ಥೆ.
  • ಬಿಬಿಎಂಪಿ ವತಿಯಿಂದ ಸಂಪಂಗಿರಾಮನಗರ ಕಲ್ಯಾಣಿಯ ಸ್ವಚ್ಚತೆ ಮಾಡುವುದು ಹಾಗೂ ಜಲಮಂಡಳಿ ವತಿಯಿಂದ ಕಲ್ಯಾಣಿಗೆ ನೀರು ತುಂಬಿಸುವುದು.
  • ಜಲಮಂಡಳಿ ವತಿಯಿಂದ ಒಳಚರಂಡಿಗಳನ್ನು ಸ್ವಚ್ಛಗೊಳಿಸಿ, ಎಲ್ಲೂ ಕೊಳಚೆ ನೀರು ಹೊರಬಾರದಂತೆ ಅಗತ್ಯ ಕ್ರಮ ವಹಿಸುವುದು.  
  • ಸಂಚಾರ ದಟ್ಟಣೆಯಾಗದಂತೆ ಮಾರ್ಗ ಬದಾಲವಣೆ ಹಾಗೂ ವಾಹನಗಳ ನಿಲುಗಡೆಗೆ ಸ್ಥಳ ನಿಗದಿ.

Rain Fall ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ!

A Grand Karaga Shaktyotsava celebration on April 6
  • ಕರಗ ಮಹೋತ್ಸವ ನಡೆಯುವ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ.
  • ಭಕ್ತಾದಿಗಳು ಹಾಗೂ ಸಾರ್ವಜನಿಕರ ಭದ್ರತೆಯ ಹಿತದೃಷ್ಟಿಯಿಂದ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ.

ವಿದ್ಯಾರ್ಥಿಗಳಿಗೆ ಖುಷಿ ಸುದ್ದಿ: ನಿಮ್ಮ ಖಾತೆಗೆ ಇಂದು ಬೀಳಲಿದೆ ವಿದ್ಯಾನಿಧಿ ಹಣ 

ಗಣ್ಯರು ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು

ಸಭೆಯಲ್ಲಿ ವಿಶೇಷ ಆಯುಕ್ತ ಡಾ. ಹರೀಶ್ ಕುಮಾರ್, ಪಿ.ಎನ್. ರವೀಂದ್ರ, ಡಾ. ದೀಪಕ್.ಆರ್.ಎಲ್, ಧರ್ಮರಾಯ ಸ್ವಾಮಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸತೀಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.