News

ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಉಡುಗೊರೆ; ಈ ಯೋಜನೆಯಡಿ ದೊರೆಯಲಿದೆ ₹1.50 ಲಕ್ಷ! ಯಾರು ಅರ್ಹರು ಗೊತ್ತೆ?

02 August, 2022 11:12 AM IST By: Kalmesh T
A great gift from the state government to women

ಮಹಿಳೆಯರಿಗೆ ಇಲ್ಲಿದೆ ರಾಜ್ಯ ಸರ್ಕಾರದಿಂದ ಭರ್ಜರಿ ಉಡುಗೊರೆ. ರಾಜ್ಯ ಸರ್ಕಾರದ ನೂತನ ಯೋಜನೆ "ಸ್ತ್ರೀ ಸಾಮರ್ಥ್ಯ ಯೋಜನೆ"ಯಡಿ ಸರ್ಕಾರದಿಂದ 1.50 ಲಕ್ಷ ರೂಪಾಯಿ ದೊರೆಯಲಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ..

ಇದನ್ನೂ ಓದಿರಿ:  ಪಡಿತರದಾರರ ಗಮನಕ್ಕೆ: ಸೆಪ್ಟೆಂಬರ್‌ನಿಂದ ಸ್ಥಗಿತಗೊಳ್ಳಲಿದೆಯಾ ಉಚಿತ ರೇಷನ್‌ ವಿತರಣೆ?

ರಾಜ್ಯ ಸರ್ಕಾರದ ನೂತನ ಯೋಜನೆಯಾದ “ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಜಾರಿಗೆ ತರುವ ಸಲುವಾಗಿ ಯೋಜನೆಗೆ ಚಾಲನೆ ನೀಡಲಾಗಿದೆ.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ “ಸ್ತ್ರೀ ಸಾಮರ್ಥ್ಯ ಯೋಜನೆಗೆ ಚಾಲನೆ ನೀಡಿ ರಾಜ್ಯದ ಮಹಿಳೆಯರಿಗೆ ಸ್ವದ್ಯೋಗದ ಭರವಸೆಯನ್ನು ನೀಡಿದ್ದಾರೆ.

ಈ ಯೋಜನೆಯನ್ನು ಎಂಡ್-ಟು -ಎಂಡ್ (End to End) ಮಾರ್ಗದಲ್ಲಿ ಕೈಗೊಳ್ಳಲಾಗುವುದು.

ಗ್ರಾಮೀಣ ಮಹಿಳೆಯರ ಸಬಲೀಕರಣದ ಸರ್ಕಾರದ ಈ ಪ್ರಯತ್ನದಲ್ಲಿ ಕೆನರಾ ಬ್ಯಾಂಕ್ ಹಾಗೂ ಮೀಶೋ ಸಂಸ್ಥೆಗಳು ಕೈಜೋಡಿಸಿರುವುದು ಸ್ವಾಗತಾರ್ಹ ಎಂದು ಸಿಎಂ ಹರ್ಷ ವ್ಯಕ್ತಪಡಿಸಿದರು.

EPS ನೌಕರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಸುದ್ದಿ: ಕನಿಷ್ಠ ಪಿಂಚಣಿ-1995ರಲ್ಲಿ ಮಹತ್ವದ ಬದಲಾವಣೆ!

ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಭಾರತ ಸರ್ಕಾರದ ಜೀವನೋಪಾಯ ಕಾರ್ಯಕ್ರಮಗಳ ನೆರವಿನೊಂದಿಗೆ ಹಾಗೂ ಎಲಿವೇಟ್ ಯೋಜನೆ ಅಡಿಯಲ್ಲಿಯೂ ಸ್ತ್ರೀ ಸ್ವಸಹಾಯ ಸಂಘಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ನೆರವು ಒದಗಿಸುತ್ತಿದೆ.

ಈ ಕಾರ್ಯಕ್ರಮಗಳನ್ನು ವೃದ್ಧಿಸಿ ಸೂಕ್ಷ್ಮ ಮಟ್ಟದಲ್ಲಿ ನಿರ್ವಹಣೆ ಮಾಡುವ ಅಗತ್ಯವಿದೆ ಎಂದು ಬೊಮ್ಮಾಯಿ ಅಭಿಪ್ರಾಯಪಟ್ಟರು.

ದೇಶದಾದ್ಯಂತ ಗುಡುಗು-ಮಿಂಚಿನ ಸಮೇತ ಭಾರೀ ಮಳೆ ಸೂಚನೆ; ಹವಾಮಾನ ಇಲಾಖೆಯ ಎಚ್ಚರಿಕೆ ನೀವು ತಿಳಿದಿರಲೆಬೇಕು..

ಮಹಿಳೆಯರಿಗಾಗಿ 'ಸಾಮರ್ಥ್ಯ' ಯೋಜನೆ ರಾಜ್ಯದ ಸ್ವಸಹಾಯ ಗುಂಪುಗಳನ್ನು ಕೆನರಾ ಬ್ಯಾಂಕ್ ಯೋಜನೆಗೆ ಆಯ್ದುಕೊಂಡಿರುವುದು ಶ್ಲಾಘನೀಯ. ಮಹಿಳೆಯರು ಆರ್ಥಿಕ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು.

ಆರ್ಥಿಕತೆ ಎಂದರೆ ಹಣವಲ್ಲ. ಬದಲಾಗಿ ಅದು ಜನರ ಆರ್ಥಿಕ ಚಟುವಟಿಕೆಗಳು. ಮಹಿಳೆಯರಲ್ಲಿ ಅಪಾರ ಶಕ್ತಿ ಇದ್ದು, ಸದಾ ಚಟುವಟಿಕೆಗಳಲ್ಲಿ ತೊಡಗಿರುತ್ತಾರೆ.

ಮಹಿಳಾ ಶಕ್ತಿಯಲ್ಲಿ ನನಗೆ ನಂಬಿಕೆ ಇದ್ದು, ಅದಕ್ಕಾಗಿಯೇ 'ಸಾಮರ್ಥ್ಯ' ಎಂಬ ಯೋಜನೆ ಜಾರಿಗೊಳಿಸಲು ತೀರ್ಮಾನಿಸಿದ್ದೇವೆ ಎಂದರು.

ಕೇಂದ್ರ ಸರ್ಕಾರದ ಈ ಯೋಜನೆಯಡಿ ಮಕ್ಕಳಿಗೆ ದೊರೆಯಲಿದೆ ರೂ.10 ಲಕ್ಷ! ಯಾರು ಅರ್ಹರು? ಅರ್ಜಿ ಸಲ್ಲಿಕೆ ಹೇಗೆ?

ಏನಿದು ಸ್ತ್ರೀ ಸಾಮರ್ಥ್ಯ ಯೋಜನೆ?

ಸ್ತ್ರೀಶಕ್ತಿ ಸಂಘಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಉತ್ತೇಜನ ನೀಡುವ ನಿಟ್ಟಿನಲ್ಲಿ 1.50 ಲಕ್ಷ ರು. ನೀಡುವ ಜತೆಗೆ

ಸುಲಭವಾಗಿ ಸಾಲಸೌಲಭ್ಯ ಒದಗಿಸಲು ಆ್ಯಂಕರ್‌ ಬ್ಯಾಂಕ್‌ ಜೋಡಣೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆಸೌಲಭ್ಯ ನೀಡುವ ಸ್ತ್ರೀ ಸಾಮರ್ಥ್ಯ ಯೋಜನೆಗೆ ಚಾಲನೆ ನೀಡಲಾಗಿದೆ.

5 ಲಕ್ಷ ಮಹಿಳೆಯರ ಸ್ವಾವಲಂಬನೆಗೆ ‘ಎಂಡ್‌ ಟು ಎಂಡ್‌ನೆರವು ನೀಡಲಾಗುತ್ತಿದೆ.

EPS ನೌಕರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಸುದ್ದಿ: ಕನಿಷ್ಠ ಪಿಂಚಣಿ-1995ರಲ್ಲಿ ಮಹತ್ವದ ಬದಲಾವಣೆ!

ಗ್ರಾಮ ಪಂಚಾಯಿತಿಯಲ್ಲಿ ಸ್ವದ್ಯೋಗಕ್ಕೆ ಡಿಪಿಆರ್‌ ಸಿದ್ದತೆ

ಮಹಿಳಾ ಸ್ವಯಂ ಉದ್ಯೋಗಕ್ಕೆ ಯೋಜನೆ ಗುರುತಿಸಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರ ಸ್ವಯಂ ಉದ್ಯೋಗಕ್ಕಾಗಿ ನಿರ್ದಿಷ್ಟ ಯೋಜನೆಗಳನ್ನು ಗುರುತಿಸಿ ಡಿಪಿಆರ್ (ಸಮಗ್ರ ಯೋಜನಾ ವರದಿ) ಸಿದ್ಧಪಡಿಸಿಕೊಳ್ಳಬೇಕು.

ಇದು ಸಾವಿರಾರು ಮಹಿಳೆಯರ ಬದುಕಿನಲ್ಲಿ ಬಹು ದೊಡ್ಡ ಬದಲಾವಣೆ ತರಲು ನೆರವಾಗುತ್ತದೆ. ಸ್ವಾಭಿಮಾನಿ ಮತ್ತು ಸ್ವಾವಲಂಬನೆ ಬದುಕು ಬದುಕಲು ಮಹಿಳೆಯರಿಗೆ ಸಹಕರಿಸಬೇಕಿದೆ.

ಈ ನಿಟ್ಟಿನಲ್ಲಿ ಸರ್ಕಾರ ಅಗತ್ಯವಿರುವ ನೆರವು ಹಾಗೂ ಸಹಾಯ ಮಾಡಲಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

A great gift from the state government to women