News

ಶ್ರೀಗಂಧದ ಮರ ಕಳವು ತಡೆಗೆ ಸರ್ಕಾರದಿಂದ ಮಾಸ್ಟರ್‌ ಪ್ಲಾನ್‌!

04 January, 2023 11:45 AM IST By: Hitesh
A master plan by the government to prevent the theft of sandalwood trees!

ರಾಜ್ಯದಲ್ಲಿ ಶ್ರೀಗಂಧ ಮರಗಳ ಸಂರಕ್ಷಣೆಗೆ ಸರ್ಕಾರ ಮಾಸ್ಟರ್‌ ಪ್ಲಾನ್‌ ಮಾಡಿದೆ.  ಈ ಮರಗಳ ಮೇಲೆ ಕಣ್ಗಾವಲಿಡುವ ಉದ್ದೇಶದಿಂದ ಸಿಸಿಟಿವಿ ಅಳವಡಿಕೆ ಹಾಗೂ ಭದ್ರತಾ ಸಿಬ್ಬಂದಿ ನಿಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ.  

Weather Update: ರಾಜ್ಯದಲ್ಲಿ ಹೆಚ್ಚಾದ ಚಳಿ ವಾತಾವರಣ 

ಈಗಾಗಲೇ ಶ್ರೀಗಂಧದ ಮರಗಳ ರಕ್ಷಣೆಗೆ ಸರ್ಕಾರ ಹಲವು ಸುಧಾರಣ ಕ್ರಮಗಳನ್ನು ಅನುಸರಿಸಿದೆ. ಅಲ್ಲದೇ ಮರಗಳ ಸಂಖ್ಯೆಯನ್ನು ಹೆಚ್ಚಿಸಲು ಹಾಗೂ ಕಳ್ಳರಿಂದ ಮರಗಳ ರಕ್ಷಿಸಲು ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.   

ರಾಜ್ಯ ಸರ್ಕಾರವು 100 ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆಯುವ ಶ್ರೀಗಂಧದ ಮರಗಳಿಗೆ ರಕ್ಷಣೆ ಒದಗಿಸಲಾಗುತ್ತದೆ. ಈ ಪ್ರದೇಶಗಳು ಶೂನ್ಯ ಸಹಿಷ್ಣು ವಲಯಗಳಾಗಿ ಮಾರ್ಪಡಿಸಲಾಗುತ್ತದೆ.

Pm Kisan| ಪಿ.ಎಂ ಕಿಸಾನ್‌ ಅಪ್ಡೇಟ್‌: 13ನೇ ಕಂತಿಗಾಗಿ ಕಾಯುತ್ತಿರುವ ಕೋಟಿಗಟ್ಟಲೆ ರೈತರಿಗೆ ಮಹತ್ವದ ಮಾಹಿತಿ 

ವಿಶೇಷ ಭದ್ರತೆ, ಶ್ವಾನದಳ ಮತ್ತು ಸಿಸಿಟಿವಿಗಳೊಂದಿಗೆ 24 ಗಂಟೆಗಳ ಕಾಲ ಈ ಪ್ರದೇಶಗಳಲ್ಲಿ ನಿಗಾವಹಿಸಲಾಗುತ್ತದೆ. ಕೇರಳದ ಮರಯೂರಿನಲ್ಲಿರುವ ಶ್ರೀಗಂಧದ ಮರಗಳಿಗೆ  ಈ ಮಾದರಿಯ ರಕ್ಷಣೆ ನೀಡಲಾಗಿದೆ. ಇದೇ ರೀತಿಯ ರಕ್ಷಣೆಯನ್ನು ಇಲ್ಲಿಯ ಮರಗಳಿಗೂ ನೀಡುವ ಕುರಿತು ಚಿಂತನೆ ನಡೆದಿವೆ ಎಂದು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನು ಹೊಸ ನಿಯಮಗಳ ಪ್ರಕಾರ ಇಂತಹ ಪ್ರಕರಣಗಳಲ್ಲಿ ಸಿಕ್ಕಿ ಬಿದ್ದ ತಪ್ಪಿತಸ್ಥರಿಗೆ 7-10 ವರ್ಷಗಳ ಕಠಿಣ ಜೈಲು ಶಿಕ್ಷೆಗೆ ಗುರಿಪಡಿಸಲಾಗುತ್ತದೆ. ಪ್ರತಿ ಮರ ಮತ್ತು ಕ್ಲಸ್ಟರ್ ಅನ್ನು ಜಿಪಿಎಸ್ ಮೂಲಕ ಟ್ರ್ಯಾಕ್ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯದ ಮರ ಶ್ರೀಗಂಧದ ಮರವಾಗಿದೆ. ಆದರೆ, ಹಲವಾರು ಕಾರಣಗಳಿಂದ ಸಂಖ್ಯೆಯು ಕ್ಷೀಣಿಸುತ್ತಿದೆ. ಮರಗಳ ಕಡಿಯಲು ಅನುಮತಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಶ್ರೀಗಂಧವನ್ನು ರಾಜ್ಯ ವೃಕ್ಷವೆಂದು ಘೋಷಿಸಿದ್ದರೂ ಮರಗಳನ್ನು ಕಾಪಾಡುವುದು ಮತ್ತು ರಕ್ಷಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ.

ಇದೀಗ ರಾಜ್ಯ ಸರ್ಕಾರ ಕ್ಲಸ್ಟರ್ ಗುರುತಿಸುವಿಕೆ ಮತ್ತು ರಕ್ಷಣೆ ಮಾಡಲು ಮುಂದಾಗಿರುವುದರಿಂದ ಮರಗಳ ಸಂಖ್ಯೆ ಹೆಚ್ಚಾಗವ ಸಾಧ್ಯತೆಗಳಿವೆ. ಅಲ್ಲದೇ ರಾಜ್ಯದಲ್ಲಿ 20ರಿಂದ 30 ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಈ ಮರಗಳು ಸುಮಾರು 30 ವರ್ಷಗಳಷ್ಟು ಹಳೆಯವುಗಳಾಗಿವೆ. ಕೆಲವು 45 ಸೆಂ.ಮೀ ಸುತ್ತಳತೆ ಹೊಂದಿರುತ್ತವೆ ಎನ್ನಲಾಗಿದೆ.

Weather Update: ರಾಜ್ಯದಲ್ಲಿ ಹೆಚ್ಚಾದ ಚಳಿ ವಾತಾವರಣ