News

ಮತ್ತೆ ಪ್ಯಾನ್ ಕಾರ್ಡ್‌ ಜೊತೆ ಆಧಾರ್ ಕಾರ್ಡ್ ಲಿಂಕ್ ಗಡುವು ವಿಸ್ತರಣೆ

07 July, 2020 3:11 PM IST By:

ಕೊರೋನಾ ಆತಂಕದ ನಡುವೆ ಪ್ಯಾನ್ ಕಾರ್ಡನ್ನು ಆಧಾರ್ ಕಾರ್ಡ್ ದೊಂದಿಗೆ ಲಿಂಕ್ ಮಾಡಿಲ್ಲವೇ. ಯಾರು ಲಿಂಕ್ ಮಾಡಿಲ್ಲವೋ ಅವರಿ ಚಿಂತೆ ಮಾಡುವ ಅವಶ್ಯಕತೆಯಿಲ್ಲ.

ಪ್ಯಾನ್ ಕಾರ್ಡ್‌ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಲಾಗಿದೆ. ಮಾರ್ಚ್ 31, 2021 ರ ತನಕ ಲಿಂಕ್ ಮಾಡಲು ಅವಕಾಶ ಇರಲಿದೆ.

ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಜೊತೆಗೆ ಜೋಡಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.

ಹೀಗಾಗಿ ಇಲಾಖೆಯ ಪ್ರಕಾರ ಇನ್ಮುಂದೆ ಮಾರ್ಚ್ 31, 2021ರವರೆಗೆ ನೀವು ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಮಾಡಬಹುದು. ಇದಕ್ಕೂ ಮೊದಲು ಕೂಡ ಹಲವು ಬಾರಿ ಈ ಗಡುವನ್ನು ವಿಸ್ತರಿಸಲಾಗಿದೆ. 

ಈ ಮುನ್ನ 2020ರ ಮಾರ್ಚ್ 31ರ ಗಡುವು ನೀಡಲಾಗಿತ್ತು. ಬಳಿಕ ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ್ದರಿಂದ ಅವಧಿಯನ್ನು ಜೂನ್ 30ರ ತನಕ ವಿಸ್ತರಣೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ಅವಧಿ ವಿಸ್ತರಿಸಲಾಗಿದೆ. 2020ರ ಜನವರಿ ವರೆಗಿನ ಅಂಕಿ ಅಂಶಗಳಂತೆ 30.75 ಕೋಟಿಗೂ ಹೆಚ್ಚು ಜನರು ಪ್ಯಾನ್ ಮತ್ತು ಆಧಾರ್ ಕಾರ್ಡ್‌ ಜೋಡಣೆ ಮಾಡಿದ್ದಾರೆ.
ಆಧಾರ್ ಗೆ ಲಿಂಕ್ ಆಗಿದೆಯೇ ಅಥವಾ ಇಲ್ಲವೇ ಆಧಾರ್ ಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯೇ ಅಥವಾ ಇಲ್ಲವೇ ಎಂದು ಚೆಕ್

 ಮಾಡುವುದು ಹೇಗೆ?:

 -ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ವೆಬ್‌ಸೈಟ್‌ಗೆ ಹೋಗಿ.

 -ಮೇಲ್ಭಾಗದ 'ಕ್ವಿಕ್ ಲಿಂಕ್ಸ್' ಮೇಲೆ 'ಲಿಂಕ್ ಆಧಾರ್' ಕ್ಲಿಕ್ ಮಾಡಿ.

 -ನಂತರ ಸ್ಕ್ರೀನ್ ಮೇಲೆ ಹೊಸ ಪೇಜ್ ತೆರೆಯುತ್ತದೆ.

 -ಈ ಪುಟದ ಮೇಲ್ಭಾಗದಲ್ಲಿ ಹೈಪರ್ಲಿಂಕ್ ಇರುತ್ತದೆ, ಅದನ್ನು ಇಂಗ್ಲಿಷ್‌ನಲ್ಲಿ ಬರೆಯಲಾಗಿರುತ್ತದೆ, ನೀವು ಈಗಾಗಲೇ ಆಧಾರ್ ಲಿಂಕ್ ಮಾಡಲು ವಿನಂತಿಸಿದ್ದರೆ ಸ್ಟೇಟಸ್ ಪರಿಶೀಲಿಸಿ ಮೇಲೆ ಕ್ಲಿಕ್ ಮಾಡಿ.

- ಈ ಹೈಪರ್ ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ ನಿಮ್ಮ ಪ್ಯಾನ್ ಮತ್ತು ಆಧಾರ್ ವಿವರಗಳನ್ನು ನೀವು ನಮೂದಿಸಬೇಕಾಗುತ್ತದೆ.

-ವ್ಯೂ ಲಿಂಕ್ ಆಧಾರ್ ಸ್ಥಿತಿ' ಕ್ಲಿಕ್ ಮಾಡಿ. ಅದರ ಫಲಿತಾಂಶದಲ್ಲಿ ಪ್ಯಾನ್ ನಿಮ್ಮ ಆಧಾರ್ ಗೆ ಲಿಂಕ್ ಆಗಿದೆಯೇ ಅಥವಾ ಇಲ್ಲವೇ ಎಂಬುದು ನಿಮಗೆ ತಿಳಿಯುತ್ತದೆ.