News

ರಾಜ್ಯದಲ್ಲಿ 5 ವರ್ಷದಲ್ಲಿ ಸುಮಾರು 33 ಲಕ್ಷ ಉದ್ಯೋಗ ಸೃಷ್ಟಿ : ಸಿಎಂ

13 March, 2023 9:45 AM IST By: Kalmesh T
About 33 lakh job creation in the state in 5 years: CM

ರಾಜ್ಯದಲ್ಲಿ ಪ್ರತಿ ವರ್ಷ ಸರಾಸರಿ 13 ಲಕ್ಷ ಕೆಲಸಗಳಂತೆ  ಕಳೆದ ಐದು ವರ್ಷಗಳಲ್ಲಿ ಸುಮಾರು 33 ಲಕ್ಷ ಉದ್ಯೋಗ ಸೃಜನೆ  ಮಾಡಿರುವುದರ ಹಿಂದೆ ಕೇಂದ್ರ ಸರ್ಕಾರದ ಶಕ್ತಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಧಾರವಾಡ  ಐಐಟಿ ಉದ್ಘಾಟನೆ, ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳ ಶಿಲಾನ್ಯಾಸ ಸಮಾರಂಭದಲ್ಲಿ  ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಪಾಲ್ಗೊಂಡು ಅವರು ಮಾತನಾಡಿದರು.

ದೇಶದಲ್ಲಿ ಅತಿ ಕಡಿಮೆ ನಿರುದ್ಯೋಗ ಇರುವ ರಾಜ್ಯ ಕರ್ನಾಟಕ ಎಂದ ಅವರು,  ರಾಜಕಾರಣಿಗಳ ಕಣ್ಣು ಮುಂದಿನ ಚುನಾವಣೆಗಳ ಮೇಲಿದ್ದರೆ, ಒಬ್ಬ ಮುತ್ಸದ್ಧಿಯ ಕಣ್ಣು ಮುಂದಿನ ಪೀಳಿಗೆಯ ಭವಿಷ್ಯದ ಮೇಲಿರುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಂತಹ ಮುತ್ಸದ್ಧಿತನ ಹೊಂದಿರುವ ನೇತಾರ.  ತಾಂತ್ರಿಕವಾಗಿ ದೇಶವನ್ನು ಸಶಕ್ತಗೊಳಿಸಲು ಧಾರವಾಡ ಐಐಟಿ ಸ್ಥಾಪಿಸಿದ್ದಾರೆ.

ಹೊಸಪೇಟೆ -ಹುಬ್ಬಳ್ಳಿ- ತಿನೈಘಾಟ್ ರೈಲ್ವೇ ಮಾರ್ಗದ ವಿದ್ಯುದ್ದೀಕರಣ ಸೇರಿದಂತೆ ಅನೇಕ ಸುಧಾರಣೆಗಳನ್ನು ತಂದಿದ್ದಾರೆ ಎಂದರು.

ಭೂಸ್ವಾಧೀನ ಹಣ ಬಾಕಿ: ನೀರಾವರಿ ಇಲಾಖೆ ಭೂಸ್ವಾಧೀನ ಅಧಿಕಾರಿಯ ವಾಹನ ಜಫ್ತಿ

ರೈಲ್ವೇ ಸುಧಾರಣೆಗೆ 7651 ಕೋಟಿ ಮೀಸಲು

ಪ್ರಸಕ್ತ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕದ ರೈಲ್ವೇ ಸುಧಾರಣೆಗೆ 7651 ಕೋಟಿ ಮೀಸಲಿಟ್ಟಿರುವ ಡಬಲ್ ಇಂಜಿನ್ ಸರ್ಕಾರ ಇದಾಗಿದೆ.

ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಸಾಕಷ್ಟು ಪ್ರೋತ್ಸಾಹ ನೀಡಿದೆ.

ಶಿಕ್ಷಣ,ಮೂಲಭೂತ ಸೌಕರ್ಯ, ಕೈಗಾರೀಕರಣದಂತಹ ಮಹತ್ವದ ಕಾರ್ಯಗಳು  ರಾಜ್ಯ ಮತ್ತು ಕೇಂದ್ರದಲ್ಲಿ ಏಕಕಾಲದಲ್ಲಿ ನಡೆಯುತ್ತಿವೆ ಎಂದರು.

ಪೋರ್ಟ್ ನಿಂದ ಇನ್ ಲ್ಯಾಂಡ್ ವರೆಗೆ ಸಂಪರ್ಕ ಕಲ್ಪಿಸುವ ಕೆಲಸ ಮಾಡಿದ್ದಾರೆ‌. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ದಿಗೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ. ಉತ್ತರ ಕರ್ನಾಟಕ ಹಿಂದೆಂದೂ  ಇಲ್ಲದಷ್ಟು ಅಭಿವೃದಿಯಾಗುತ್ತಿದೆ ಎಂದರು.

7ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರ ವೇತನ ಭಾರೀ ಹೆಚ್ಚಳ.. ಶೀಘ್ರದಲ್ಲೇ ಶುಭ ಸುದ್ದಿ!

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಗೋವಿಂದ ಕಾರಜೋಳ,ಸಿ.ಸಿ.ಪಾಟೀಲ, ವಿ.ಸೋಮಣ್ಣ,ಬಿ.ಎ.ಬಸವರಾಜ, ಶಂಕರ ಪಾಟೀಲ ಮುನೇನಕೊಪ್ಪ,ಮಾಜಿಮುಖ್ಯಮಂತ್ರಿ-ಶಾಸಕ ಜಗದೀಶ್ ಶೆಟ್ಟರ್, ಶಾಸಕರಾದ ಸಿ.ಎಂ.ನಿಂಬಣ್ಣವರ,ಅರವಿಂದ ಬೆಲ್ಲದ,

ಅಮೃತ ದೇಸಾಯಿ,ವಿಧಾನಪರಿಷತ್ ಸದಸ್ಯರಾದ ಪ್ರದೀಪ ಶೆಟ್ಟರ್,ಎಸ್.ವಿ.ಸಂಕನೂರ,ಮಹಾನಗರಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ  ವೇದಿಕೆಯಲ್ಲಿ ಉಪಸ್ಥಿತರಿದ್ದರು.