1. ಸುದ್ದಿಗಳು

Siddaramaiah ಕರ್ನಾಟಕ ರಫ್ತಿನಲ್ಲಿ ಪ್ರಥಮ ಸ್ಥಾನಕ್ಕೇರಲು ಕ್ರಮ: ಸಿದ್ದರಾಮಯ್ಯ!

Hitesh
Hitesh
Action to become first in Karnataka exports: Siddaramaiah!

ಮಹಾರಾಷ್ಟ್ರ ಮತ್ತು ತಮಿಳುನಾಡು ಒಂದು ಮತ್ತು 2ನೇ ಸ್ಥಾನದಲ್ಲಿವೆ. ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ

ಮುಖ್ಯಮಂತ್ರಿ Siddaramaiah ಅವರು ಮಾತನಾಡಿದರು.

ಕರ್ನಾಟಕ ರಫ್ತು ಮಾಡುವುದರಲ್ಲಿ ಮೊದಲಿನಿಂದಲೂ ಮುಂಚೂಣಿಯಲ್ಲಿದೆ. ಕೌಶಲ್ಯ ತರಬೇತಿಯುಳ್ಳ ಕಾರ್ಮಿಕರಿದ್ದರೆ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುತ್ತದೆ

ಎಂಬ ದೃಷ್ಟಿಯಿಂದ ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಾರಂಭಿಸಲಾಗಿತ್ತು. ಈಗ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು ಎಂದರು.

ಹೊಸ ಕೈಗಾರಿಕಾ ನೀತಿಯನ್ನು ಸರ್ಕಾರ ಘೋಷಣೆ ಮಾಡಿದಾಗ ಕೈಗಾರಿಕೋದ್ಯಮಿಗಳು ನೀತಿಯನ್ನು ಬೆಂಬಲಿಸಿ ಸ್ವಾಗತಿಸಿದರು.

ಈಗಲೂ ಎಲ್ಲರೊಂದಿಗೆ ಚರ್ಚೆ ಮಾಡಿ ರಫ್ತು ಬೆಳವಣಿಗೆಗೆ ಪೂರಕವಾದಂಥ ಕೈಗಾರಿಕಾ ನೀತಿಯನ್ನು ರೂಪಿಸಲು ಕ್ರಮ ವಹಿಸಲಾಗುವುದು.

ಎಂ.ಬಿ.ಪಾಟಲ್ ಅವರು ಕೈಗಾರಿಕಾ ಇಲಾಖೆಯ ನೇತೃತ್ವವನ್ನು ವಹಿಸಿದ್ದು, ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆ ಆಗಬೇಕು ಎನ್ನುವ ಆಶಯವನ್ನು ಹೊಂದಿದ್ದಾರೆ.

ಕರ್ನಾಟಕ ಸರ್ಕಾರ ಎಲ್ಲ ರೀತಿಯ ಬೆಂಬಲವನ್ನು ಉದ್ಯಮಿಗಳಿಗೆ ನೀಡಲಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

Rice Export Ban: ಅಮೆರಿಕಾದಲ್ಲಿ ಅಕ್ಕಿಗೆ ಹಾಹಾಕಾರ ಸೃಷ್ಟಿ: ಭಾರತದಲ್ಲಿನ ಈ ಬೆಳವಣಿಗೆಯೇ ಕಾರಣ!

ಕೈಗಾರಿಕೆ ಬೆಳೆದರೆ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿ ದೇಶದ ಆರ್ಥಿಕತೆ ಬೆಳೆಯಲು ನೆರವಾಗಲಿದೆ.

ಜಿಡಿಪಿ ಬೆಳೆದು ರಾಜ್ಯ ಬೆಳೆಯಲು ಸಾಧ್ಯವಾಗಿ ರಾಷ್ಟ್ರದ ಜಿಡಿಪಿಗೆ ದೊಡ್ಡ ಕೊಡುಗೆಯನ್ನು ಕೊಡಲು ಸಾಧ್ಯವಾಗುತ್ತದೆ.

ಇವೆಲ್ಲ ಒಂದಕ್ಕೊಂದು ಸಂಬಂಧ ಹೊಂದಿದೆ. ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ ಹೂಡಿಕೆಗಳು ಬರುತ್ತವೆ.

ಹೂಡಿಕೆಗಳು ಬಂದಲ್ಲಿ ಕೈಗಾರಿಕೆಗಳು ಬಂದು ನಿರುದ್ಯೋಗ ನಿವಾರಣೆಯಾಗುತ್ತದೆ. ಕರ್ನಾಟಕದಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಲ್ಪಿಸಲಾಗುವುದು.

ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿರುವ ಉದ್ಯೋಗಿಗಳನ್ನು ಸೃಷ್ಟಿ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತದೆ ಎಂದರು.

ಸರ್ಕಾರ 5 ಗ್ಯಾರಂಟಿ ಗಳನ್ನು ಘೋಷಿಸಿದ್ದು, ಯುವನಿಧಿಯಡಿಯಲ್ಲಿ 2022-23 ರಲ್ಲಿ  ಪದವೀಧರರಾಗಿ

ನಿರುದ್ಯೋಗಿ ಆಗಿರುವವರಿಗೆ ಮೂರು ಸಾವಿರ ರೂ.ಗಳ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು.

ಡಿಪ್ಲೊಮಾ ಹೊಂದಿದವರಿಗೂ 1,500 ರೂ.ಗಳ ಭತ್ಯೆಯನ್ನು ನೀಡಲಾಗುವುದು.

ಬಹುತೇಕ ಡಿಸೆಂಬರ್ ತಿಂಗಳಿನಲ್ಲಿ ಈ ಯೋಜನೆ ಪ್ರಾರಂಭವಾಗಲಿದೆ.

ಕೌಶಲ್ಯ ಇಲಾಖೆಯಿಂದ ಕೈಗಾರಿಕೆಗಳಿಗೆ ಅಗತ್ಯವಿರುವ ಉದ್ಯೋಗಿಗಳನ್ನು ತಯಾರು ಮಾಡುವ ಸಲುವಾಗಿ ತರಬೇತಿಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.

ಮಾರುಕಟ್ಟೆಗೆ ಸೂಕ್ತವಾಗಿರುವ ಉದ್ಯೋಗಿಗಳನ್ನು ತಯಾರು ಮಾಡಿದರೆ ನಿರುದ್ಯೋಗ ಸಮಸ್ಯೆ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈಗ 68 ಉದ್ದಿಮೆಗಳಿಗೆ ಶ್ರೇಷ್ಠ ರಫ್ತು ಪ್ರಶಸ್ತಿಗಳನ್ನು  ಪ್ರದಾನ ಮಾಡಲಾಗಿದೆ.

ರಫ್ತಿನಲ್ಲಿ ಸಾಧನೆ ಮಾಡಿರುವ ಉದ್ದಿಮೆಗಳಿಗೆ 1992-93 ರಿಂದ ಶ್ರೇಷ್ಠ ರಫ್ತು ಪ್ರಶಸ್ತಿಗಳನ್ನು ನೀಡುವ ಪರಿಪಾಠ ಪ್ರಾರಂಭಿಸಲಾಗಿದೆ.

ರಾಜ್ಯ ಹಾಗೂ ಜಿಲ್ಲಾ ಮಟ್ಟದ ಉದ್ದಿಮೆಗಳನ್ನು ಆಯ್ಕೆ ಮಾಡಲಾಗಿದೆ.

ರಾಜ್ಯದಲ್ಲಿ ಉದ್ದಿಮೆಗಳ ಪ್ರಾರಂಭಕ್ಕೆ ಹಾಗೂ ಕೈಗಾರಿಕೆಗಳಿಗೆ ಪ್ರೋತ್ಸಾಹದಾಯಕ ವಾತಾವರಣ ಇದೆ.

ಪ್ರಶಸ್ತಿ ವಿಜೇತರು ಇತರ ಉದ್ದಿಮೆದಾರರಿಗೆ ಮಾದರಿ ಹಾಗೂ ಸ್ಪೂರ್ತಿಯಾಗಿದ್ದಾರೆ ಎಂದು ಅವರು ಹೇಳಿದರು.  

Rain Today ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದುವರಿದ ಧಾರಾಕಾರ ಮಳೆ!

Published On: 24 July 2023, 12:03 PM English Summary: Action to become first in Karnataka exports: Siddaramaiah!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.