News

ಚುರುಕುಗೊಂಡ ಮುಂಗಾರು-ಭರ್ಜರಿಯಾಗಿ ನಡೆಯುತ್ತಿದೆ ಬಿತ್ತನೆ ಕಾರ್ಯ

12 June, 2020 3:01 PM IST By:
ರಾಜ್ಯದಲ್ಲಿ ಮುಂಗಾರು ಆರಂಭಗೊಳ್ಳುತ್ತಿದ್ದಂತೆ ಬಿತ್ತನೆ ಕಾರ್ಯವೂ ಚುರುಕುಗೊಂಡಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ ಮುಂಗುರು ಸಹ ಸರಿಯದ ಸಮಯಕ್ಕೆ ಪ್ರಾರಂಭವಾಗಿದೆ. ಈಗಾಗಲೇ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂಗಾರು ಆರಂಭವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆ ಆರಂಭವಾಗಿದ್ದರಿಂದ ರೈತ ಬಾಂಧವರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ.

ರೈತರು ಕೊರೋನಾ ಸೋಂಕಿಗೆ ತಲೆಕೆಡಿಸಿಕೊಳ್ಳದೆ ತಮ್ಮ ಎಂದಿನ ಜೀವನಕ್ಕೆ ಮರಳುತ್ತಿದ್ದಾರೆ. ಮುಂಗಾರು ಆರಂಭಕ್ಕೆ ಕಾಯುತ್ದಿದ್ದ ರೈತರಿಗೆ ಜೂನ್ ಜುಲೈ ತಿಂಗಳ ಅವರಿಗೆ ಮಹತ್ವವಾದದ್ದು. ಕೆಲವು ರೈತರು ಬೀಜ ರಸಗೊಬ್ಬರ ಮೊದಲು ಖರೀದಿ ಮಾಡಿಕೊಂಡು ಸಂಗ್ರಹಿಸಿದ್ದಾರೆ. ಇನ್ನೂ ಕೆಲವು ರೈತರು ಕೃಷಿ ಇಲಾಖೆಯಿಂದ ಪೂರೈಸುವ ಬಿತ್ತನೆ ಬೀಜ ಖರೀದಿಯಲ್ಲಿ ತೊಡಗಿದ್ದಾರೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪಡೆಯಲು ರೈತರ ನುಗ್ಗಲು ತಪ್ಪಿಸಲು ಕೃಷಿ ಇಲಾಖೆಯು ತಾತ್ಕಾಲಿಕ ಕೇಂದ್ರಗಳನ್ನು ತೆರೆದು ರೈತರ ಬೇಡಿಕೆಗೆ ತಕ್ಕಂತೆ ಬೀಜ, ರಸಗೊಬ್ಬರ ಪೂರೈಸಲು ಕ್ರಮಕೈಗೊಂಡಿದೆ.

 ರಾಜ್ಯ ಕೃಷಿ ಇಲಾಖೆಯ ಪ್ರಕಾರ 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 73 ಲಕ್ಷ ಹೆಕ್ಟೆರ್ ಬಿತ್ತನೆ ಗುರಿ ಹೊಂದಲಾಗಿದೆ. ಅದಕ್ಕೆ ಅಗತ್ಯವಾದ 5.97 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳು ಹಾಗೂ 22.10 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಪೂರೈಕೆಗೆ ಕೃಷಿ ಇಲಾಖೆಗೆ ಯೋಜನೆ ರೂಪಿಸಿದೆ.

ರಾಜ್ಯದಲ್ಲಿ 742 ರೈತ ಸಂಪರ್ಕ ಕೇಂದ್ರಗಳಿವೆ. ಅದರ ಮೂಲಕ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಮಾಡಲಾಗುತ್ತಿದೆ. ಹೋಬಳಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ಪ್ರಾಥಮಿಕ ಕೃಷಿ ಸಹಕಾರ ಸಂಘಗಳಉ, ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾವಿರಕ್ಕೂ ಹೆಚ್ಚು ತಾತ್ಕಾಲಿನ ಕೇಂದ್ರಗಳನ್ನು ತೆರೆದು ಬಿತ್ತನ ಬೀಜ ಹಾಗೂ ರಸಗೊಬ್ಬರ ಪೂರೈಕೆ ಮಾಡಲಾಗುತ್ತಿದೆ.