1. ಸುದ್ದಿಗಳು

Punyakoti Dattu Yojana: ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾಗಿ ನಟ ಕಿಚ್ಚ ಸುದೀಪ್‌ ನೇಮಕ!

Kalmesh T
Kalmesh T
Actor Kiccha Sudeep appointed as the ambassador of Punyakoti Dattu Yojana!

ಕರ್ನಾಟಕ ಸರಕಾರವು ‘ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ’ಯನ್ನಾಗಿ ನಟ ಕಿಚ್ಚ ಸುದೀಪ್‌ ಅವರನ್ನು ನೇಮಕ ಮಾಡಿದೆ.

ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ನೇಮಕಾತಿ ಪತ್ರವನ್ನು ಇಲಾಖೆ ಸಚಿವ ಪ್ರಭು ಚೌಹಾಣ್, ಇಂದು ಬೆಂಗಳೂರಿನ ಸುದೀಪ್ ಅವರ ನಿವಾಸದಲ್ಲಿ ರಾಯಭಾರಿ‌ ನೇಮಕಾತಿ ಪತ್ರ ನೀಡಿ ಸನ್ಮಾನಿಸಿದ್ದಾರೆ.

ನೇಮಕಾತಿ ಪತ್ರವನ್ನು ಸ್ವೀಕರಿಸಿದ ಸುದೀಪ್‌, 31 ಗೋವುಗಳನ್ನು ದತ್ತು ಪಡೆಯುವುದಾಗಿ ತಿಳಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಿಂದ ಗೋವುಗಳನ್ನು ದತ್ತು ಪಡೆಯಲು‌ ನಿರ್ಧಾರ ಮಾಡಿರುವುದಾಗಿ ಸುದೀಪ್ ತಿಳಿಸಿದ್ದಾರೆ.

ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ಅವರು ದತ್ತು ಪಡೆಯಲಿದ್ದಾರೆ. ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ಆಗುವ ಮೂಲಕ ಗೋವು ಸಂರಕ್ಷಣೆಗೆ ಸುದೀಪ್‌ ಮುಂದಾಗಿದ್ದಾರೆ.

PM ಫಸಲ್ ಬಿಮಾ ಯೋಜನೆಯಲ್ಲಿ ಬದಲಾವಣೆ- ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ

“ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ನನ್ನ ಜವಾಬ್ದಾರಿ ಹೆಚ್ಚಿಸಿದೆ. ನನ್ನನ್ನು ನೇಮಕ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಪ್ರಭು ಚವ್ಹಾಣ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ.

ಸಾರ್ವಜನಿಕರು, ಚಿತ್ರರಂಗದ ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು ಎಂದು ಸುದೀಪ್ ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಹುಟ್ಟುಹಬ್ಬದಂದು 11 ಗೋವು ದತ್ತು ಪಡೆದು, ತಮ್ಮ ಕನಸಿನ ಕೂಸಾದ ‘ಪುಣ್ಯಕೋಟಿ ದತ್ತು ಯೋಜನೆ’ ಜಾರಿಗೆ ತಂದರು.

ಗಮನಿಸಿ: ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿ 2022 ಪ್ರಕಟ, ನವೆಂಬರ್‌ 26ರಂದು ಪ್ರಶಸ್ತಿ ವಿತರಣೆ

ಚಿತ್ರನಟ ಸುದೀಪ್ ಅವರಿಗೆ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ನೇಮಕಾತಿ ಪತ್ರ ವಿತರಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.

‘ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದ ನಂತರ 100 ಸರ್ಕಾರಿ ಗೋಶಾಲೆ ಸ್ಥಾಪಿಸಲಾಗುತ್ತಿದೆ.‌

ರಾಷ್ಟ್ರದಲ್ಲಿಯೇ ‘ಪುಣ್ಯಕೋಟಿ ದತ್ತು ಯೋಜನೆ’ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ.

ಪ್ರಾಣಿ ಕಲ್ಯಾಣ ಮಂಡಳಿ, ಪ್ರಾಣಿ ಸಹಾಯವಾಣಿ ಕೇಂದ್ರ, ಪಶು ಸಂಜೀವಿನಿ ಆ್ಯಂಬುಲೆನ್ಸ್, ಗೋಮಾತಾ ಸಹಕಾರ ಸಂಘ, ಆತ್ಮ ನಿರ್ಭರ ಗೋಶಾಲೆ ಸ್ಥಾಪನೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ’ ಎಂದು ಸಚಿವರು ತಿಳಿಸಿದರು.

Published On: 24 November 2022, 05:31 PM English Summary: Actor Kiccha Sudeep appointed as the ambassador of Punyakoti Dattu Yojana!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.