1. ಸುದ್ದಿಗಳು

ಸಾವಯವ ಕಾರ್ಯಪಡೆ ರಚನೆಗೆ ಸೂಚನೆ

ರಾಜ್ಯದಲ್ಲಿ ಸಾವಯವ ಕೃಷಿ ಉತ್ತೇಜನ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಾವಯವ ಕಾರ್ಯಪಡೆ (Taskforce) ರಚಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ (B.C. Patil) ಸೂಚಿಸಿದ್ದಾರೆ.

ನಗರದ ಕೃಷಿ ಆಯುಕ್ತರ ಕಚೇರಿಯಲ್ಲಿ ರಾಜ್ಯ ಮಟ್ಟದ ಸಾವಯವ ಕೃಷಿ (Organic agri) ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿ ಅಧ್ಯಕ್ಷ ಆನಂದ್ ಉಪ್ಪಳ್ಳಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾವಯವ ಕೃಷಿ ಉತ್ತೇಜನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ. . ಈಗಾಗಲೇ ಬೆಂಗಳೂರು ಸಾವಯಕ ಕೃಷಿ ರಾಜಧಾನಿ ಎಂದು ಗುರುತಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಕರ್ನಾಟಕವೇ ದೇಶದ ಸಾವಯವ ರಾಜಧಾನಿ ಎನ್ನುವಂತಾಗಬೇಕು. ಈ ನಿಟ್ಟಿನಲ್ಲಿ ಒಂದು ಕಾರ್ಯಪಡೆ ಸಮಿತಿ (organic action) ರಚಿಸುವಂತೆ ಸೂಚಿಸಿದರು.

2004 ರಲ್ಲಿ ದೇಶದಲ್ಲಿ ಪ್ರಥಮ ಬಾರಿಗೆ ಸಾವಯವ ಕೃಷಿ ನೀತಿಯನ್ನು ರಾಜ್ಯ ಸರ್ಕಾರ ಹೊರತಂದಿದ್ದು, ಇದರ ಪರಿಣಾಮವಾಗಿ ರಾಜ್ಯದಲ್ಲಿ ಹಲವಾರು ಸಾವಯವ ಕೃಷಿ ಉತ್ತೇಜನ ಕಾರ್ಯಕ್ರಮಗಳ ಅನುಷ್ಠಾನದಿಂದ ರೈತರಲ್ಲಿ ಹೆಚ್ಚಿನ ಅರಿವು ಮೂಡಿಸಿ ಸಾವಯವ ಕೃಷಿ ಪ್ರದೇಶವನ್ನು ಸುಮಾರು 1 ಲಕ್ಷ ಹೆಕ್ಟೆರಗಳಿಗೆ ವಿಸ್ತರಿಸಲಾಗಿದೆ. 2017 ರಲ್ಲಿ ಸಾವಯವ ಕೃಷಿ ನೀತಿಯನ್ನು ಪರಿಷ್ಕರಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.

ರಾಜ್ಯದಲ್ಲಿ ರೈತ ಸಿರಿಧಾನ್ಯ ಯೋಜನೆ ಯಶಸ್ವಿಯಾಗಿದ್ದು, ಸಿರಿಧಾನ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ.ದೇಶೀಯ ಸ್ಥಳೀಯ ಔಷಧಿಭರಿತ ಸಿರಿಧಾನ್ಯಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು. ಸಿರಿಧಾನ್ಯ ಪ್ರದೇಶವನ್ನು ವಿಸ್ತರಿಸುವ ಜೊತೆಗೆ ಸಿರಿಧಾನ್ಯಗಳ ಸಂಸ್ಕರಣೆಗೆ ಒತ್ತುಕೊಡುವ ಕಾರ್ಯಕ್ರಮ ರೂಪಿಸಬೇಕು.ಸಾವಯವ ಕೃಷಿ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಪ್ರಚಾರ ಒದಗಿಸುವ ಸಲುವಾಗಿ ಸಾವಯವ ಮಾತುಕತೆ ಎಂಬ ಪ್ರಾಯೋಜಿತ ಕಾರ್ಯಕ್ರಮವನ್ನು ಆಕಾಶವಾಣಿ ಮುಖಾಂತರ ರಾಜ್ಯ ವ್ಯಾಪಿ ಬಿತ್ತರಿಸುವ ನಿರ್ಣಯ ಕೈಗೊಳ್ಳಲಾಯಿತು.

Published On: 01 August 2020, 12:45 PM English Summary: Agri Minster orders for the formation of the organic action

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.