News

ಕೃಷಿ ಪರಿಕರಗಳಿಗೆ ತೊಂದರೆಯಾಗದಂತೆ ಕ್ರಮವಹಿಸಲು ಸೂಚನೆ

28 April, 2021 4:30 PM IST By:
Agriculture iquipment

ದೇಶದಾದ್ಯಂತ ವ್ಯಾಪಕವಾಗಿ ಕೋವಿಡ್-೧೯ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ೧೪ ದಿನಗಳ ಕಾಲ ಕೊರೋನಾ ಕರ್ಫ್ಯೂ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕೃಷಿ ಪರಿಕರವನ್ನು ಪೂರೈಸುವ ಅಂಗಡಿಗಳು ಹಾಗೂ ದಾಸ್ತಾನು ಮಳಿಗೆಗಳ ವಿತರಕರು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಕೃಷಿ ಪರಿಕರಗಳ ಲಭ್ಯತೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದAತೆ ಕ್ರಮ ವಹಿಸಬೇಕೆಂದು ಕಲಬುರಗಿ ಜಂಟಿ ಕೃಷಿ ನಿರ್ದೆಶಕರು ತಿಳಿಸಿದ್ದಾರೆ.

ಅಗತ್ಯ ವಸ್ತುಗಳ ಸೇವೆಯಡಿ ಕೃಷಿ ಪರಿಕರಗಳಾದ ಬಿತ್ತನೆ ಬೀಜ, ಗೊಬ್ಬರ, ಪೀಡೆನಾಶಕ ಹಾಗೂ ಕೃಷಿ ಯಂತ್ರೋಪಕರಣಗಳು ಸೇರಿರುವುದರಿಂದ ಕೃಷಿ ಪರಿಕರ ಪೂರೈಸುವ ಅಂಗಡಿಗಳು ಮತ್ತು ದಾಸ್ತಾನು  ಮಳಿಗೆಗಳ ವಿತರಕರು ರೈತರಿಗೆ ಕೃಷಿ ಪರಿಕರ ವಿತರಣೆ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೋವಿಡ್-19 ಸೋಂಕು ಹರಡುವಿಕೆಯಲ್ಲಿ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಸೂಚನೆಗಳನ್ನು ಮತ್ತು ಸುರಕ್ಷಿತ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಕೃಷಿ ಮಾರಾಟ ಮಳಿಗೆದಾರರು ರೈತರು ಕೃಷಿ ಪರಿಕರಗಳನ್ನು ಖರೀದಿಸುವ ಸಂದರ್ಭದಲ್ಲಿ ಯಾವುದೇ ಗೊಂದಲಗಳಿಗೆ ಎಡೆ ಮಾಡಿಕೊಡದೆ ರೈತರುಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವಂತೆ ಅಂಗಡಿ ಹಾಗೂ ಮಾರಾಟ ಮಳಿಗೆಯ ಮುಂಭಾಗದಲ್ಲಿ ಗುರುತುಗಳನ್ನು ಮಾಡಬೇಕು. ರೈತರಿಗೆ ಸ್ಯಾನಿಟೈಜರ್, ಸಾಬೂನು ಹಾಗೂ ನೀರಿನ ವ್ಯವಸ್ಥೆ ಮಾಡಬೇಕು. ರೈತರು ಕಡ್ಡಾಯವಾಗಿ (ಮಾಸ್ಕ್) ಮುಖಗವಸು ಧರಿಸಬೇಕು.

ಕೋವಿಡ್-19  ಸೋಂಕು ಹರಡುವಿಕೆಯಲ್ಲಿ ತಡೆಯಲು ಕೇಂದ್ರ  ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಸೂಚನೆಗಳನ್ನು ಮತ್ತು ಸುರಕ್ಷೀತ ಕ್ರಮಗಳನ್ನು ಉಲ್ಲಂಘಿಸಿದ್ದಲ್ಲಿ  ಮಾರಾಟ/ವಿತರಕರ ಪರವಾನಿಗೆಯನ್ನು  ಅಮಾನತ್ತು ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.