ಶಿವಮೊಗ್ಗದ ನವುಲೆಯ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಇಂದಿನಿಂದ 4 ದಿನಗಳ ಕಾಲ ಕೃಷಿ ಮತ್ತು ತೋಟಗಾರಿಕಾ ಮೇಳ ಆಯೋಜಿಸಲಾಗಿದೆ.
PM Kisan: ಪಿಎಂ ಕಿಸಾನ್ ಯೋಜನೆಯಡಿ 5.61 ಲಕ್ಷ ರೈತರಿಗೆ ಸುಮಾರು 1130 ಕೋಟಿ!
ಶಿವಮೊಗ್ಗದ ನವುಲೆಯ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಮಾರ್ಚ್ 17ರಿಂದ 20ರವರೆಗೆ ಕೃಷಿ ಮತ್ತು ತೋಟಗಾರಿಕಾ ಮೇಳ ಆಯೋಜಿಸಲಾಗಿದೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಗೆ ವಿಜ್ಞಾನ ವಿಶ್ವ ವಿದ್ಯಾಲಯದ ಕುಲಪತಿ ಡಾ.ಆರ್.ಸಿ. ಜಗದೀಶ್ ತಿಳಿಸಿದ್ದಾರೆ.
‘ಸುಸ್ಥಿರ ಆದಾಯಕ್ಕಾಗಿ - ಸೆಕೆಂಡರಿ ಕೃಷಿ ತಾಂತ್ರಿಕತೆಗಳು ಮತ್ತು ಮೌಲ್ಯವರ್ಧನೆ’ ಎನ್ನುವ ಧ್ಯೇಯದೊಂದಿಗೆ ಈ ವರ್ಷದ ಮೇಳ ಆಯೋಜಿಸಲಾಗಿದೆ.
ಮೇಳದಲ್ಲಿ ಕೃಷಿ ವಸ್ತು ಪ್ರದರ್ಶನ, ವಿವಿಧ ಬೆಳೆಗಳ ಪ್ರಾತ್ಯಕ್ಷಿಕೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ವಿವಿ ವ್ಯಾಪ್ತಿಗೆ ಬರುವ 7 ಜಿಲ್ಲೆಗಳಿಂದ ಕೃಷಿ ಮತ್ತು ತೋಟಗಾರಿಕೆಯಲ್ಲಿ ಸಾಧನೆಗೈದಂತಹ ರೈತರು ಮತ್ತು ರೈತ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ.
ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಬಸವಣ್ಣನವರ ಪ್ರತಿಮೆ ಸ್ಥಾಪನೆ – ಸಿಎಂ
ಮೇಳದಲ್ಲಿ ಬೆಳೆಗಳ ಹೊಸತಳಿ ಬಿಡುಗಡೆ, ರೈತರಿಗೆ ಮಾಹಿತಿ ನೀಡುವ ಸಲುವಾಗಿ ತಾಂತ್ರಿಕ ಕೈಪಿಡಿಗಳನ್ನು ಬಿಡುಗಡೆ ಮಾಡಲಾಗುತ್ತದೆ. ಕೃಷಿ ಪರಿಕರ ವಿತರಕರು, ವಿಜ್ಞಾನಿಗಳು ಹಾಗೂ ಪ್ರಗತಿಪರ ರೈತ ಸಂಪನ್ಮೂಲ ವ್ಯಕ್ತಿಗಳಿಂದ ರೈತರೊಂದಿಗೆ ಸಂವಾದ ನಡೆಯಲಿದೆ ಎಂದು ಕೂಡ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ 11ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಳ ಉದ್ಘಾಟಿಸಲಿದ್ದಾರೆ. ಡಾ. ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ‘ಶ್ರೇಷ್ಠ ರೈತ ಮತ್ತು ರೈತ ಮಹಿಳೆ’ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಬೆಳೆ ನಾಶಕ್ಕೆ ದುಪ್ಪಟ್ಟು ಪರಿಹಾರ: ಕೇವಲ 2 ತಿಂಗಳಲ್ಲಿ ಪರಿಹಾರ!
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ಎಸ್. ಈಶ್ವರಪ್ಪ ತಂತ್ರಜ್ಞಾನ ಉದ್ಯಾನ ಉದ್ಘಾಟಿಸಲಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ ತಾಂತ್ರಿಕತೆ ಮತ್ತು ತಳಿಗಳನ್ನು ಬಿಡುಗಡೆ ಮಾಡುವರು.
ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ ಅತಿಥಿಯಾಗಿ ಭಾಗವಹಿಸುವರು. ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 2.30ರಿಂದ ಅಡಿಕೆ ಕೃಷಿಯ ಸವಾಲುಗಳು ಕುರಿತು ತಾಂತ್ರಿಕ ಸಮಾವೇಶ ನಡೆಯಲಿದೆ. ಸಂಜೆ 6.30ರಿಂದ ಮನರಂಜನಾ ಕಾರ್ಯಕ್ರಮ ನಡೆಯಲಿದೆ ಎಂದರು.