ರಾಜ್ಯದಲ್ಲಿ ಕೃಷಿ ಪದವಿಯ ದಾಖಲಾತಿಗೆ ನಡೆಸಲಾಗುವ ಪ್ರಾಯೋಗಿಕ ಪರೀಕ್ಷೆಗಳನ್ನು (practical test) ರದ್ದುಪಡಿಸಲಾಗಿದ್ದು, ಸಿಇಟಿ ರ್‍ಯಾಂಕಿಂಗ್ ಆಧಾರದಲ್ಲಿ ಕೃಷಿಕರ ಕೋಟಾದಡಿ ಅರ್ಹ ವಿದ್ಯಾರ್ಥಿಗಳಿಗೆ ಸೀಟು ಹಂಚಲಾಗುವುದು’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್) ನಿಯಮದಂತೆ ರಾಜ್ಯದಲ್ಲಿ ಕೃಷಿ ಪದವಿಯ ದಾಖಲಾತಿಗೆ ನಡೆಸಲಾಗುವ ಪರೀಕ್ಷೆಗಳನ್ನು ರದ್ದು (cancelled) ಪಡಿಸಲಾಗಿದೆ. ಕೃಷಿಕರ ಕೋಟಾದ ಅಡಿಯಲ್ಲಿ ಶೇ 40ರಷ್ಟು ಸೀಟುಗಳು ಕೃಷಿಕರ ಮಕ್ಕಳಿಗೇ ಮೀಸಲಿವೆ ಎಂದಿದ್ದಾರೆ.
ಕೊರೋನಾ ಪರಿಸ್ಥಿತಿಯಲ್ಲಿ ಸರ್ಕಾರವು ಆರೋಗ್ಯ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಿದ್ದು, ಸಾವಿರಾರು ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಗಳಿಗೆ ಸ್ವತಃ ಹಾಜರಾಗಬೇಕಾಗುತ್ತದೆ. ಈ ಸಂದರ್ಭದಲ್ಲಿ ಸರ್ಕಾರದ ನಿರ್ದೇಶನದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡಸಲು ಕಷ್ಟ ಸಾಧ್ಯ. ಆದ್ದರಿಂದ ಕೃಷಿ ಪದವಿಯ ದಾಖಲಾತಿಗೆ ನಡೆಸಲಾಗುವ ಪ್ರಾಯೋಗಿಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ನೈಜ ಕೃಷಿಕರ ಮಕ್ಕಳು ಮಾತ್ರ ಕೃಷಿಕರ ಕೋಟಾದಲ್ಲಿ ಸೀಟುಗಳನ್ನು ಪಡೆ ದುಕೊಳ್ಳುವಂತೆ ಮಾಡಲು ನಿಬಂಧನೆಗಳನ್ನು ಸಿದ್ಧಪಡಿಸಲಾಗಿದೆ. ಇದರಿಂದಾಗಿ ಕೃಷಿಕರ ಮಕ್ಕಳಿಗೆ ಯಾವುದೇ ರೀತಿಯ ಅನ್ಯಾಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.
Share your comments