News

ಗ್ರಾಮ ವಾಸ್ತವ್ಯ ಮಾದರಿಯಲ್ಲಿ ರೈತರ ಮನೆಯಲ್ಲಿ ವಾಸ್ತವ್ಯಕ್ಕೆ ಬಿ.ಸಿ.ಪಾಟೀಲ್ ಚಿಂತನೆ

06 September, 2020 12:54 PM IST By:

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸುತ್ತಿ ರೈತರ ಮನೆಯಲ್ಲಿ ಉಳಿದುಕೊಂಡು ಗ್ರಾಮ ವಾಸ್ತವ್ಯ ಮಾಡಲು ಕೃಷಿ ಸಚಿವ ಬಿ.ಸಿ. ಪಾಟೀಲ್ ಚಿಂತನೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.‌ಡಿ ಕುಮಾರಸ್ವಾಮಿಯವರು ಮಾಡಿದ ಗ್ರಾಮ ವಾಸ್ತವ್ಯ ಮಾದರಿಯಲ್ಲಿಯ ಕೃಷಿ ಸಚಿವರು ರೈತರ ಮನೆಯಲ್ಲಿ ವಾಸ್ತವ್ಯ ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಕೊರೋನಾ ಲಾಕ್ಡೌನ್ ದಿಂದಾಗಿ ರೈತರ ವಿವಿಧ ರೀತಿಯಲ್ಲಿ ಸಂಕಷ್ಟದಲ್ಲಿದ್ದಾರೆ. ಮಳೆ ಬಂದರೂ ಕಷ್ಟ, ಬರದಿದ್ದರೂ ಕಷ್ಟ, ಗಾಳಿ ಹೆಚ್ಚು ಬೀಸಿದರೂ ಕಷ್ಟ, ಬೀಸದಿದ್ದರೂ ಕಷ್ಟ ಎಂಬಂತಹ ಸ್ಥಿತಿ ಇದೆ. ಇಂತಹ ಸ್ಥಿತಿಯಲ್ಲಿ ರಾಜ್ಯದಲ್ಲಿ ಓಡಾಡಿ ರೈತರ ಬವಣೆ ನೀಗಿಸಬೇಕು ಎಂಬ ಉದ್ದೇಶದಿಂದ ರೈತರ ಮನೆಯಲ್ಲಿ ಕಾಲಕಳೆಯಲು ನಿರ್ಧರಿಸಿದ್ದಾರೆ.

ಕೋವಿಡ್‌ , ಲಾಕ್‌ಡೌನ್ ಹಿನ್ನೆಲೆಯಲ್ಲಿ ರೈತ ಸಮುದಾಯದ ಕಷ್ಟ ನಷ್ಟಗಳ ಕುರಿತಾಗಿ ತಿಳಿದುಕೊಳ್ಳುವ ನಿಟ್ಟಿನಲ್ಲಿ ರೈತರ ಜೊತೆಗೆ ವಾಸ್ತವ್ಯ ಮಾಡಲಿದ್ದಾರೆ. ಕೋವಿಡ್ ಮುಗಿದ ಬಳಿಕ ಬಿ.ಸಿ.ಪಾಟೀಲರು ಕೃಷಿ ಅಧಿಕಾರಿಗಳ ಜೊತೆ ಪ್ರಗತಿಪರ ರೈತರನ್ನು ಭೇಟಿಮಾಡಿ ರೈತರ ನಿವಾಸದಲ್ಲಿ ವಾಸ್ತವ್ಯ ಹೂಡುವುದು, ರೈತ,ರ ಜೊತೆಗೆ ಚರ್ಚೆ, ಪ್ರಗತಿಪರ ರೈತರ ಸಾಧನೆಗಳನ್ನು ಇತರ ರೈತರಿಗೂ ಪ್ರೇರಣೆಯಾಗಿಸುವುದು ಸೇರಿದಂತರ ರೈತರ ಸಮಸ್ಯೆಗಳನ್ನು ಆಲಿಸಲು ಮುಂದಾಗಲಿದ್ದಾರೆ ಎಂದು ತಿಳಿದುಬಂದಿದೆ.

 ಸದ್ಯ ಕೋವಿಡ್‌ ಇರುವುದರಿಂದ ರೈತ ವಾಸ್ತವ್ಯದ ದಿನ ಇನ್ನೂ ಅಧಿಕೃತಗೊಂಡಿಲ್ಲ. ಕೊರೋನಾ ಸೋಂಕು ಕಡಿಮೆಯಾದ ಬಳಿಕ ರೈತ ವಾಸ್ತವ್ಯಕ್ಕೆ ರೂಪುರೇಷೆ ಸ್ಥಳ ಮತ್ತು ದಿನಾಂಕದ ಆಯ್ಕೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.