1. ಸುದ್ದಿಗಳು

ಅಕ್ರಮ ಸಕ್ರಮ ಯೋಜನೆ: ಮೇ 31 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ

Maltesh
Maltesh
Akrama Sakrama Scheme: Deadline to apply till May 31

ಮಡಿಕೇರಿ:-ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ 57 ಮಂದಿಗೆ ‘ಸಾಗುವಳಿ ಚೀಟಿ’ಯನ್ನು ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಂಗಳವಾರ ವಿತರಿಸಿದರು.

ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸಾಗುವಳಿ ಚೀಟಿ ವಿತರಿಸಿ ಮಾತನಾಡಿದ ಶಾಸಕರು ಮಡಿಕೇರಿ ತಾಲ್ಲೂಕಿನ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 705 ಅರ್ಜಿಗಳಲ್ಲಿ 545 ಮಂದಿಗೆ ಸಾಗುವಳಿ ಚೀಟಿ ವಿತರಿಸಲಾಗಿದೆ.

ಇನ್ನೂ ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಮೇ, 31 ರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಇದ್ದು, ಈ ಅವಕಾಶವನ್ನು ಅರ್ಹರು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಈ ದಿನದ ಅಚ್ಚರಿ: ಅಬ್ಬಬ್ಬಾ! 37 ವರ್ಷದ ಹಿಂದೆ ರಾಯಲ್‌ ಎನ್‌ಫಿಲ್ಡ್‌ ರೇಟ್‌ ಎಷ್ಟಿತ್ತು ಗೊತ್ತಾ..?

ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರಿಗೆ ಸಾಗುವಳಿ ಚೀಟಿ ವಿತರಿಸಲಾಗುತ್ತಿದೆ. ಇದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಶಾಸಕರು ಹೇಳಿದರು. ಹಕ್ಕು ಪತ್ರ ಪಡೆದವರು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ಉಲ್ಲಂಘಿಸಿದಂತಾಗುತ್ತದೆ ಎಂದು ಎಚ್ಚರಿಸಿದರು.

ಸರ್ಕಾರ ರೈತರ ಪರವಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಬೆಳೆ ಹಾನಿ ಪರಿಹಾರ, ಕೃಷಿಕರ ಖಾತೆಗೆ 10 ಸಾವಿರ ರೂ. ಸಹಾಯಧನ, ಟಾರ್ಪಲ್ ವಿತರಣೆ, ಕೃಷಿ ಪಂಪ್‍ಸೆಟ್ ಅಳವಡಿಕೆ, ಸಹಾಯಧನದಡಿ ಬಿತ್ತನೆ ಬೀಜ, ಕೃಷಿಕರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು.

ಕೃಷಿಕರು ಸ್ವಾವಲಂಬನೆಯಿಂದ ಬದುಕುವಂತಾಗಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದು ಎಲ್ಲರೂ ಆರ್ಥಿಕವಾಗಿ ಸದೃಢರಾಗಬೇಕು ಎಂದು ಕೆ.ಜಿ.ಬೋಪಯ್ಯ ಅವರು ಕರೆ ನೀಡಿದರು.

ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಅವರು ಮಾತನಾಡಿ ಈಗಾಗಲೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ 705 ಅರ್ಜಿಗಳಲ್ಲಿ 545 ಅರ್ಜಿಗಳಿಗೆ ಸಾಗುವಳಿ ಚೀಟಿ ನೀಡಲಾಗಿದೆ. 5 ಅರ್ಜಿಗಳಿಗೆ ಆಕ್ಷೇಪವಿತ್ತು, ಅದರಲ್ಲಿ ನಾಲ್ಕನ್ನು ಇತ್ಯರ್ಥಪಡಿಸಲಾಗಿದೆ ಎಂದು ತಿಳಿಸಿದರು.

ಲಂಚಕ್ಕೆ ಬೇಡಿಕೆಯಿಟ್ಟ ಜೆ.ಈ : ಎತ್ತುಗಳು ನೀಡಲು ಮುಂದಾದ ರೈತ

ಅಕ್ರಮ ಸಕ್ರಮದಡಿ ಅರ್ಜಿ ಸಲ್ಲಿಸಿದ ಅರ್ಹರೆಲ್ಲರಿಗೂ ನ್ಯಾಯ ಒದಗಿಸಲು ಪ್ರಯತ್ನಿಸಲಾಗಿದ್ದು, ಸಾಗುವಳಿ ಚೀಟಿ ಪಡೆದವರು ಸಹಕಾರ ಸಂಘದ ಮೂಲಕ ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯಬಹುದಾಗಿದೆ ಎಂದರು.

Published On: 30 March 2023, 11:10 AM English Summary: Akrama Sakrama Scheme: Deadline to apply till May 31

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.