News

weather ರಾಜ್ಯದಲ್ಲಿ ಬಹುತೇಕ ಚಳಿ ಚಳಿ ವಾತಾವರಣ!

26 December, 2023 9:52 AM IST By: Hitesh
AddThis Website Tools
ರಾಜ್ಯದಲ್ಲಿನ ವಾತಾವರಣ
ರಾಜ್ಯದಲ್ಲಿನ ವಾತಾವರಣ

ರಾಜ್ಯದಲ್ಲಿ ಮಂಗಳವಾರ ಹಾಗೂ ಬುಧವಾರ ಸಾಮಾನ್ಯವಾದ ಹವಾಮಾನವಿದೆ. ಚಳಿಯೂ ಹೆಚ್ಚಾಗುತ್ತಿದೆ. ಮುಂದಿನ 2 ದಿನಗಳಲ್ಲಿ ಚಳಿ ಪ್ರಮಾಣ ಹೆಚ್ಚಳವಾಗಲಿದೆ.

ಉಳಿದಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ.

ಇನ್ನು ಸೋಮವಾರ ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 10.5 ಡಿಗ್ರಿ ಸೆಲ್ಸಿಯಸ್‌ ವಿಜಯಪುರದಲ್ಲಿ ದಾಖಲಾಗಿದೆ.

ಮುಂದಿನ 24 ಗಂಟೆಯ ಅವಧಿ: ಮುಂದಿನ 24 ಗಂಟೆಯ ಅವಧಿಯಲ್ಲಿ ರಾಜ್ಯದಾದ್ಯಂತ ಒಣಹವೆ ಇರಲಿದೆ.

ಮುಂದಿನ 48 ಗಂಟೆ ಅವಧಿ: ಮುಂದಿನ 48 ಗಂಟೆಯ ಅವಧಿಯಲ್ಲಿಯೂ ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದೆ.

ಗುಡುಗು ಮುನ್ನೆಚ್ಚರಿಕೆ: ರಾಜ್ಯದಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಗುಡುಗು ಇರುವುದಿಲ್ಲ

ಎಂದು ಭಾರತೀಯ ಹವಾಮಾನ ಇಲಾಖೆ ರಿಪೋರ್ಟ್‌ ತಿಳಿಸಿದೆ.

ಮುಂದಿನ 48 ಗಂಟೆ ತಾಪಮಾನದ ಎಚ್ಚರಿಕೆ

ಮುಂದಿನ 48 ಗಂಟೆಯ ಅವಧಿಯಲ್ಲಿ ಚಳಿ ಪ್ರಮಾಣ ಹೆಚ್ಚಳವಾಗಲಿದೆ ಎಂದು ಭಾರತೀಯ ವೆದರ್‌ ರಿಪೋರ್ಟ್‌ ಹೇಳಿದೆ.

ಇನ್ನು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗುವ ಸಾಧ್ಯತೆ ಇದೆ

ಎಂದು ಭಾರತೀಯ ಹವಾಮಾನ ರಿಪೋರ್ಟ್‌ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಹೇಗಿರಲಿದೆ ವೆದರ್‌ ?

ಬೆಂಗಳೂರಿನಲ್ಲಿ ವೆದರ್‌ ಮೋಡ ಕವಿದಿರಲಿದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ.

ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ದಟ್ಟ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶವು 29 ಮತ್ತು ಕನಿಷ್ಠ ಉಷ್ಣಾಂಶವು 18 ಡಿಗ್ರಿ ಸೆಲ್ಸಿಯಸ್‌ ಇರುವ ಬಹಳಷ್ಟು

ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. 

ಮುಂದಿನ 48 ಗಂಟೆಯ ಅವಧಿ: ಮುಂದಿನ 48 ಗಂಟೆಯ ಅವಧಿಯಲ್ಲೂ

ಇದೇ ವಾತಾವರಣವಿರುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶವು 29 ಮತ್ತು ಕನಿಷ್ಠ ಉಷ್ಣಾಂಶವು 18 ಡಿಗ್ರಿ ಸೆಲ್ಸಿಯಸ್‌ ಇರುವ ಬಹಳಷ್ಟು ಸಾಧ್ಯತೆ ಇದೆ.