ಅಮರನಾಥ ಯಾತ್ರೆ ಗುಹೆ ಬಳಿ ಮೇಘಸ್ಫೋಟ ಸಂಭವಿಸಿದೆ. ದಕ್ಷಿಣ ಕಾಶ್ಮೀರದ ಹಿಮಾಲಯ ವರದಲ್ಲಿ ಏಕಾಏಕಿ ಭಾರಿ ಮಳೆಗೆ ಕಣಿವೆ ತಟದಲ್ಲಿದ್ದ ಬೇಸ್ ಕ್ಯಾಂಪ್ ಬಳಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ.
ಇದೇ ತಟದಲ್ಲಿನ ಶಿಬಿರಗಳಲ್ಲಿದ್ದ ಭಕ್ತರು ಕೊಚ್ಚಿ ಹೋಗಿದ್ದಾರೆ. 15 ಮಂದಿ ಸಾವನ್ನಪ್ಪಿದ್ದಾರೆ. 40 ಮಂದಿ ಕಣ್ಣರೆಯಾಗಿದ್ದಾರೆ. 13 ಮೃತದೇಹ ಹೊರಗೆ ತೆಗೆಯಲಾಗಿದೆ ಎಂದು ವರದಿಯಾಗಿದೆ.
ದುರಂತದ ನಂತರ ಜೂನ್ 30 ರಂದು ಆರಂಭವಾದ ಅಮರನಾಥ ಯಾತ್ರೆಯನ್ನು ಮುಂದೂಡಲಾಗಿದೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಗಿದ ನಂತರ ಅದನ್ನು ಪುನರಾರಂಭಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ಕಳೆದ ಸಂಜೆ ಪ್ರವಾಹದಿಂದಾಗಿ ಪವಿತ್ರ ಗುಹೆ ಪ್ರದೇಶದ ಬಳಿ ಸಿಲುಕಿಕೊಂಡಿದ್ದ ಹೆಚ್ಚಿನ ಯಾತ್ರಾರ್ಥಿಗಳನ್ನು ಪಂಜತರ್ನಿಗೆ ಸ್ಥಳಾಂತರಿಸಲಾಗಿದೆ. ತೆರವು ಕಾರ್ಯಾಚರಣೆಯು ಮುಂಜಾನೆ 3.38 ರವರೆಗೆ ನಡೆಯಿತು" ಎಂದು ಅವರು ಹೇಳಿದರು.
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ವಕ್ತಾರರು, "ಮಾರ್ಗದಲ್ಲಿ ಯಾವುದೇ ಪ್ರಯಾಣಿಕರಿಲ್ಲ, ಇದುವರೆಗೆ ಸುಮಾರು 15,000 ಜನರನ್ನು ಸ್ಥಳಾಂತರಿಸಲಾಗಿದೆ" ಎಂದು ಹೇಳಿದರು.Rain Update: ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ..!
ಅರೆಸೇನಾ ಪಡೆಯ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಪ್ರವಾಹದಲ್ಲಿ ಗಂಭೀರವಾಗಿ ಗಾಯಗೊಂಡ ಒಂಬತ್ತು ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ವಕ್ತಾರರು ತಿಳಿಸಿದ್ದಾರೆ. "ಅವರನ್ನು ಕಡಿಮೆ ಎತ್ತರದ ನೀಲ್‌ಗ್ರಾತ್ ಬೇಸ್ ಕ್ಯಾಂಪ್‌ಗೆ ಸ್ಥಳಾಂತರಿಸಲಾಗಿದೆ" ಎಂದು ಅವರು ಹೇಳಿದರು.
ಪವಿತ್ರ ಗುಹೆಯಿಂದ ಬರುವ ಯಾತ್ರಾರ್ಥಿಗಳಿಗೆ ಸಹಾಯ ಮಾಡಲು ನೀಲ್‌ಗ್ರಾತ್ ಹೆಲಿಪ್ಯಾಡ್‌ನಲ್ಲಿ ಸಣ್ಣ ಬಿಎಸ್‌ಎಫ್ ತಂಡವನ್ನು ಸಹ ನಿಯೋಜಿಸಲಾಗಿದೆ. ಶುಕ್ರವಾರ ರಾತ್ರಿ ಸುಮಾರು 150 ಪ್ರಯಾಣಿಕರು ಪಂಜತರ್ನಿಯಲ್ಲಿ ಸ್ಥಾಪಿಸಲಾದ ಬಿಎಸ್‌ಎಫ್ ಶಿಬಿರದಲ್ಲಿ ತಂಗಿದ್ದರು ಮತ್ತು ಶನಿವಾರ ಬೆಳಿಗ್ಗೆ 15 ರೋಗಿಗಳನ್ನು ಬಾಲ್ಟಾಲ್‌ಗೆ ವಿಮಾನದ ಮೂಲಕ ಕಳುಹಿಸಲಾಗಿದೆ ಎಂದು ಅವರು ಹೇಳಿದರು
ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಭೂ ಕುಸಿತ
ಆಯಕಟ್ಟಿನ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಹಲವೆಡೆ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ಹಲವೆಡೆ ಭೂಕುಸಿತ ಮತ್ತು ಕೆಸರಿನಿಂದಾಗಿ ಶ್ರೀನಗರ-ಜಮ್ಮು ಹೆದ್ದಾರಿಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಈ ಹೆದ್ದಾರಿಯನ್ನು ಅಮರನಾಥ ಯಾತ್ರಿಗಳು ಉತ್ತರ ಕಾಶ್ಮೀರ ಮತ್ತು ದಕ್ಷಿಣ ಕಾಶ್ಮೀರ ಮೂಲ ಶಿಬಿರಗಳನ್ನು ತಲುಪಲು ಬಳಸುತ್ತಾರೆ. ಇದೀಗ ಆ ರಸ್ತೆಯೂ ಮುಚ್ಚಿದೆ. ಎರಡೂ ಮಾರ್ಗಗಳಲ್ಲಿ ಹವಾಮಾನ ಪರಿಸ್ಥಿತಿಯಲ್ಲಿ ಸ್ವಲ್ಪ ಸುಧಾರಿಸಿದರೆ ಅಮರನಾಥ ಯಾತ್ರೆಯನ್ನು ಮತ್ತೆ ಪುನರಾರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಎಂ ಸಂತಾಪ ಇನ್ನು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಸಹ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಇನ್ನು ಈ ದುರಂತದ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
"ಪವಿತ್ರ ಅಮರನಾಥ ಯಾತ್ರೆಯಲ್ಲಿದ್ದ ಯಾತ್ರಿಕರು ಮೇಘಸ್ಪೋಟದಿಂದಾಗಿ ಸಾವನ್ನಪ್ಪಿದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ, ಮೃತರ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.ಇದನ್ನೂ ಓದಿರಿ: ನಬಾರ್ಡ್ ನೇಮಕಾತಿ: ಪದವೀಧರರಿಗೆ ಇಲ್ಲಿದೆ ಉತ್ತಮ ಅವಕಾಶ; ತಿಂಗಳಿಗೆ 1,45,000 ಸಂಬಳ!