News

ನಂದಿನಿ ಹಾಲಿನ ಮುಂದೆ ಅಮೂಲ್‌ಗೆ ಯಾವುದೇ ಜಾಗವಿಲ್ಲ: ಸಿಎಂ ಬೊಮ್ಮಾಯಿ

23 April, 2023 1:46 PM IST By: Kalmesh T
Amul has no place in front of Nandini milk: CM Bommai

ನಂದಿನಿ ಹಾಲಿನ ಮುಂದೆ ಅಮೂಲ್‌ಗೆ ಯಾವುದೇ ಜಾಗವಿಲ್ಲ. ನಂದಿನಿ ಅಮುಲ್‌ನ್ನು ಮೀರಿಸುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಿದ್ದರಾಮಯ್ಯ ಅವರ ಕಾಲದಲ್ಲಿ 65 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿತ್ತು, ನಮ್ಮ ಅವಧಿಯಲ್ಲಿ 85 ಲಕ್ಷ  ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗಿದೆ.

ಅಮುಲ್ ಗೆ ವಿರೋಧ ಮಾಡಿದವರು ಸಿದ್ದರಾಮಯ್ಯ. ಅವರ ಅವಧಿಯಲ್ಲಿ ಅಮುಲ್ ಇದ್ದಾಗ ಯಾವುದೇ ವಿರೋಧ ಮಾಡಲಿಲ್ಲ.

ಕೆಲವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಅವರು ನೀರು, ಹಾಲು ಸೇರಿದಂತೆ ಎಲ್ಲದರಲ್ಲೂ  ರಾಜಕಾರಣ ಮಾಡುತ್ತಿದ್ದು ಎಂದರು.

ನಂದಿನಿ ಅಮುಲ್ ಗೆ ಸವಾಲಾಗಲಿದೆ!

ರಾಜ್ಯದಲ್ಲಿ ನಾನು ಬಂದ ಮೇಲೆ ಎರಡು ಮೆಗಾ ಡೈರಿ ಸ್ಥಾಪನೆ ಮಾದಿದ್ದು, ನಂದಿನಿ ಅಮುಲ್ ಗೆ ಸವಾಲಾಗಲಿದೆ. ವಿರೋಧ ಪಕ್ಷ ಜನರಿಗೆ ಬೇಡದ ವಿಷಯಗಳನ್ನು ಮುಂದಿಟ್ಟುಕೊಂಡು ವಾದ ಮಾಡುತ್ತಿದ್ದಾರೆ.

ನಾವು ಸಾಮಾಜಿಕ ಆರ್ಥಿಕ ಬದಲಾವಣೆ ತರುವ ಪ್ರಯತ್ನ ಮಾಡುತ್ತಿದ್ದೇವೆ. ಕರ್ನಾಟಕಕ್ಕೆ ನವ ರೂಪ ನೀಡಲು ಪ್ರಯತ್ನ ನಡೆಸಿದ್ದೇನೆ.

ಥೀಮ್ ಸಿಟಿಗಳು, ಮಾದರಿ ಗ್ರಾಮಗಳು, ಡಿಜಿಟಲೈಸೇಷನ್, ಜನರ ಸುತ್ತ ಅಭಿವೃದ್ಧಿ ಆಗುತ್ತಿದೆ ಹಾಗೂ ಜನರು ಖುಷಿಯಾಗಿರುವಂತೆ ನೋಡಿಕೊಳ್ಳಲಾಗುವುದು ಎಂದರು.

ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು  ಬದಲಾವಣೆ ತರಲಾಗಿದೆ.

ನಾವು ಟೆಂಡರ್ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ತಂದಿದ್ದೇವೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಶೇ 60% ಕಾಮಗಾರಿಗೆ ಒಪ್ಪಿಗೆ ನೀಡುತ್ತಿದ್ದರು. ಅದರ ಅರ್ಥ ಏನು ? ಸಿದ್ದರಾಮಯ್ಯ ಅವರ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ಪ್ರಕರಣಗಳು ನಡೆದವು.

ಆದರೆ, ಅದನ್ನು ಎಸಿಬಿಯಲ್ಲಿ ಹಾಕಿ ಎಲ್ಲದಕ್ಕೂ ಬಿ ರಿಪೋರ್ಟ್ ಪಡೆದರು. ಆಗ ಲೊಕಾಯುಕ್ತ ಇದ್ದಿದ್ದರೆ, ಅವಾಗಲೇ ಪ್ರಕರಣಗಳು ಅವರ ವಿರುದ್ದ ದಾಖಲಾಗುತ್ತಿದ್ದವು ಎಂದರು.

ಚುನಾವಣಾ ವಿಷಯವೇ ಅಲ್ಲ

ಹಲಾಲ್, ಹಿಜಾಬ್, ಈಗ ಚುನಾವಣಾ ವಿಷಯವೇ ಅಲ್ಲ. ಈಗ ಎಲ್ಲವೂ ಮುಗಿದು ಹೊಗಿದೆ ರಾಜ್ಯದ ಜನರೇ ಅದನ್ನು ಮರೆತಿದ್ದಾರೆ. ‌ಕರ್ನಾಟಕದಲ್ಲಿ ಎಲ್ಲ ಸಮುದಾಯಗಳು ಸೌಹಾರ್ದತೆಯಿಂದ‌ ಇವೆ.

ನಾವು ರಾಜ್ಯದಲ್ಲಿ ಆರು ಹೊಸ ನಗರಗಳ ನಿರ್ಮಾಣ ಮಾಡಲು ತೀರ್ಮಾನಿಸಿದ್ದೇವೆ. ಏಳು ಎಂಜನೀಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿ ಮಾಡಲು ತೀರ್ಮಾನ ಮಾಡಿದ್ದೇನೆ. ನಾಲ್ಕು ಬಂದರು ನಿರ್ಮಾಣ ಮಾಡಲು ತೀರ್ಮಾನವಾಗಿದೆ.

ಬೆಂಗಳೂರು ಅಭಿವೃದ್ಧಿ ಗೆ ಆದ್ಯತೆ‌ ನೀಡಿದ್ದೇವೆ. ಮೆಟ್ರೊ 3 ನೇ ಹಂತ ವಿಸ್ತರಣೆ ಮಾಡುತ್ತಿದ್ದೇವೆ. ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕೆ ಹಾಗು ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ವಿವರಿಸಿದರು.