1. ಸುದ್ದಿಗಳು

ಡಿ. 21 ರಿಂದ ಎರಡು ದಿನಗಳ ಕಾಲ ಹೈನುಗಾರಿಕೆಗೆ ತರಬೇತಿ ನೀಡಲು ರೈತರಿಂದ ಅರ್ಜಿ ಆಹ್ವಾನ

ಹೈನುಗಾರಿಕೆ ಮಾಡಲಿಚ್ಚಿಸುವ ರೈತರಿಗಿಲ್ಲಿದೆ ಸಂತಸದ ಸುದ್ದಿ. ಹೈನುಗಾರಿಕೆಯನ್ನು ವೈಜ್ಞಾನಿಕ ರೀತಿಯಲ್ಲಿ ತರಬೈತಿ ನೀಡಲು ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುಬ್ಬಳ್ಳಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಹನುಮನಮಟ್ಟಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಡಿ.21ರಿಂದ 22ರ ವರೆಗೆ ವೈಜ್ಞಾನಿಕ ಹೈನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ಬೆಳಗ್ಗೆ 10ಕ್ಕೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಭಾಗವಹಿಸುವರಿಗೆ ಪ್ರವೇಶ ಶುಲ್ಕವಿದ್ದು, ಕೇವಲ 25 ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ. ಆಸಕ್ತರು ಹನುಮನಮಟ್ಟಿಯ ಕೃಷಿ ವಿಜ್ಞಾನಕೇಂದ್ರದಕ್ಕೆ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಬೇಕು.

ತರಬೇತಿಯ ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 08373-253524 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Published On: 10 December 2020, 08:04 PM English Summary: animal husbandry training

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.