ಅನ್ನಭಾಗ್ಯ ಯೋಜನೆಗೆ ಸರ್ಕಾರ ಸೋಮವಾರ ಚಾಲನೆ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಸಂದೇಶ ನೀಡಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ ಸೋಮವಾರದಿಂದ ಫಲಾನುಭವಿಗಳ ಖಾತೆಗೆ ಹಣದ ನೇರ ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ
Siddaramaiah ಅವರು ಸೋಮವಾರ ಚಾಲನೆ ನೀಡಿದ್ದಾರೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ವಿಧಾನಸೌಧದಲ್ಲಿ ಸೋಮವಾರ ಹಮ್ಮಿಕೊಂಡಿದ್ದ
ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ Siddaramaiah ಅವರು ಚಾಲನೆ ನೀಡಿ, ಮಾತನಾಡಿದರು.
ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ
ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ.
ಅವರೇನು ಪುಕ್ಕಟ್ಟೆಯಾಗಿ ಕೊಡುತ್ತಿರಲಿಲ್ಲ. ಕೆ.ಜಿ ಗೆ 34 ರೂ. ನಮ್ಮಿಂದ ತೆಗೆದುಕೊಳ್ಳುತ್ತಿದ್ದರು. ಕನ್ನಡ ನಾಡಿನ ಜನರಿಗೆ ಅಕ್ಕಿ ಕೊಡುವುದನ್ನು
ಬಂದ್ ಮಾಡಿದ ಕೇಂದ್ರ ಸರ್ಕಾರ ಬಳಿಕ ಇ-ಹರಾಜು ಮೂಲಕ ಆ ಅಕ್ಕಿಯನ್ನು ಹರಾಜು ಹಾಕಲು ಮುಂದಾಯಿತು.
ಆದರೆ, ಈಗ ಇ-ಹರಾಜು ಮೂಲಕ ಅಕ್ಕಿ ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇದನ್ನು ನಾವು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ? ಇದನ್ನು ಕರ್ನಾಟಕದ ಜನತೆಯ ವಿರುದ್ಧದ ದ್ವೇಷದ
ರಾಜಕಾರಣ ಎಂದು ಕರೆಯಬೇಕೋ ಬೇಡವೋ?
4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170 ರೂ. ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು, ಮಧ್ಯಮ ವರ್ಗದವರು
ಎರಡು ಹೊತ್ತು ಅನ್ನ ತಿಂದರೆ ಬಿಜೆಪಿಗೆ ಯಾಕೆ ಹೊಟ್ಟೆಯುರಿ? ಎಂದು ಪ್ರಶ್ನಿಸಿದರು.
ನಾಡಿನ ಜನತೆ ತಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ ನೆಮ್ಮದಿಯ ಬದುಕು ನಡೆಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.
ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಇಂದಿನಿಂದ 'ಅನ್ನಭಾಗ್ಯ'
ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ರೂ. 170 ನೀಡಲಿದ್ದೇವೆ.
ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು ನಾಡ ಬಾಂಧವರಲ್ಲಿ ಮನವಿ ಮಾಡುತ್ತೇನೆ.
ಹಸಿವಿನ ಸಂಕಟ ಅನುಭವಿಸಿದವರಿಗೆ ಮಾತ್ರ ಅರಿವಿರಲು ಸಾಧ್ಯ.
ಹಸಿವುಮುಕ್ತ ಕರ್ನಾಟಕ ನಿರ್ಮಾಣದ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ ಎಂದು ಅವರು ಮನವಿ ಮಾಡಿದ್ದಾರೆ.
ಫಲಾನುಭವಿಗಳ ಖಾತೆಗೆ ಹಣ!
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಿದ್ದಾರೆ.
ಇನ್ನು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹೆಚ್ಚುವರಿಯಾಗಿ ತಲಾ 5 ಕೆ.ಜಿ. ಅಕ್ಕಿಯನ್ನು ನೀಡುವ ಬದಲು ಪ್ರತಿ ಕೆ.ಜಿ.ಗೆ 34 ರೂಪಾಯಿಯಂತೆ
ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ಹಣ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ.
ಐದು ಕೆ.ಜಿ. ಅಕ್ಕಿಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಮತ್ತು ಇನ್ನೈದು ಕೆ.ಜಿ. ಅಕ್ಕಿಯನ್ನು ರಾಜ್ಯ ಸರ್ಕಾರ ವಿತರಿಸಲಿದೆ.
ಆದರೆ, ಸಕಾಲದಲ್ಲಿ ಅಕ್ಕಿ ಹೊಂದಿಸಲು ಸಾಧ್ಯವಾಗದೆ ಇರುವುದರಿಂದ ಫಲಾನುಭವಿಗಳ ಖಾತೆಗೆ ತಾತ್ಕಾಲಿಕವಾಗಿ ಹಣ ವರ್ಗಾಯಿಸಲು ಸರ್ಕಾರ ಮುಂದಾಗಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, 5 ಕೆ.ಜೆ ಹೆಚ್ಚುವರಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಹೇಳಿತ್ತು. ಇದೀಗ ಜುಲೈ ತಿಂಗಳಿನಿಂದಲೇ ಮನೆಯ
ಯಜಮಾನ ಅಥವಾ ಯಜಮಾನಿಗೆ ಪ್ರತಿ ಫಲಾನುಭವಿಗೆ 170ರೂಪಾಯಿ ಮೊತ್ತದಂತೆ ಮನೆಯ ಯಜಮಾನ ಅಥವಾ ಯಜಮಾನಿಯ ಖಾತೆಗೆ ಹಣ ಸಂದಾಯವಾಗಲಿದೆ.
Photo Source: CMofKarnataka
Share your comments