News

Annabhagya ಅನ್ನಭಾಗ್ಯ ಯೋಜನೆ: ನಿಲ್ಲದ ಬಿಜೆಪಿ – ಕಾಂಗ್ರೆಸ್‌ ವಾಕ್ಸಮರ!

11 July, 2023 4:52 PM IST By: Hitesh
Annabhagya Yojana: Unstoppable BJP - Congress Vaksamara!

ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ.

ಅನ್ನಭಾಗ್ಯ ಯೋಜನೆಯಡಿ ಸೋಮವಾರದಿಂದ ಫಲಾನುಭವಿಗಳ ಖಾತೆಗೆ ಹಣದ ನೇರ ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ

Siddaramaiah ಅವರು ಸೋಮವಾರ ಚಾಲನೆ ನೀಡಿದ್ದಾರೆ.

ಇದರ ಬೆನ್ನಲ್ಲೇ ಕಾಂಗ್ರೆಸ್‌ ಹಾಗೂ ಬಿಜೆಪಿಯ ನಡುವೆ ಈ ಯೋಜನೆಗೆ ಸಂಬಂಧಿಸಿದಂತೆ ವಾಕ್ಸಮರ ಮುಂದುವರಿದಿದೆ.  

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ಕರ್ನಾಟಕ ಸರ್ಕಾರಕ್ಕೆ ಅಕ್ಕಿ ನೀಡಲು ನಿರಾಕರಿಸಿ, ಖಾಸಗಿ ಮಾರಾಟಕ್ಕೆ ಮುಂದಾಗಿತ್ತು ಕೇಂದ್ರ ಸರ್ಕಾರ.

ಆಹಾರ ನಿಗಮದಲ್ಲಿ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮಾರಾಟಕ್ಕಿದ್ದರೂ ಬಿಡ್ ಆಗಿದ್ದು ಕೇವಲ 170 ಮೆಟ್ರಿಕ್ ಟನ್‌ಗೆ ಮಾತ್ರ ಎಂದಿದೆ.

ಉಳಿದ ಅಕ್ಕಿ ಗೋದಾಮಿನಲ್ಲಿ ಕೊಳೆತು ಹೋಗಬೇಕೆ? ಅಕ್ಕಿ ಕೊಳೆತು ಹೋದರೂ ಸರಿ ಬಡವರ ಹಸಿವಿಗೆ ಅನ್ನವಾಗಬಾರದು ಎಂಬ

ಮೋದಿಯ ಜನವಿರೋಧಿ ಧೋರಣೆಯಂತಹ ಕ್ರೌರ್ಯ ಇನ್ನೊಂದಿಲ್ಲ.

ಹರಾಜು ಪ್ರಕ್ರಿಯೆಯಲ್ಲಿ ಅಕ್ಕಿ ಖರೀದಿಗೆ ಖಾಸಗಿ ಕಂಪೆನಿಗಳು ಆಸಕ್ತಿಯೇ ತೋರುತ್ತಿಲ್ಲ ಎಂದು ಹೇಳಿದೆ.

ನಮ್ಮ ಸರ್ಕಾರ 34 ರೂಪಾಯಿಗಳ ಖರೀದಿ ದರಕ್ಕೆ ಕೇಳಿದರೂ ನಿರಾಕರಿಸಿದ ಕೇಂದ್ರ ಸರ್ಕಾರ ಖಾಸಗಿಯವರಿಗೆ 31 ರೂಪಾಯಿಗಳಿಗೆ

ನೀಡಲು ಸಿದ್ಧವಾದರೂ ಖರೀದಿದಾರರು ಮುಂದೆ ಬರುತ್ತಿಲ್ಲ.

ಹುಳು ಹಿಡಿದು ಅಕ್ಕಿ ವ್ಯರ್ಥವಾದರೂ ಸರಿ ಜನರ ಹಸಿವು ನೀಗಿಸಬಾರದು ಎನ್ನುವ ಧೋರಣೆ ಬಿಜೆಪಿಯದ್ದು.

ಬಿಜೆಪಿಯ ರಾಜಕೀಯ ದುರುದ್ದೇಶವು ಜನತೆಯನ್ನು ಬಲಿಪಶು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. 

ಪಡಿತರ ವಿತರಣಾ ಯೋಜನೆಯನ್ನು ಜಾರಿಗೆ ತಂದಿದ್ದು ನಾವು, ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದಿದ್ದು ಸಹ ಕಾಂಗ್ರೆಸ್‌,

ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು ಸಹ ಕಾಂಗ್ರೆಸ್. ಅಲ್ಲದೇ ರಾಜ್ಯದಲ್ಲಿ ಅನ್ನಭಾಗ್ಯ ಜಾರಿಗೆ ಬರುವಾಗ ಕೇಂದ್ರದಲ್ಲಿದ್ದಿದ್ದು ಸಹ ಕಾಂಗ್ರೆಸ್.

ಆದರೆ BJP Karnataka ನಾಯಕರು ಮೋದಿ ಅಕ್ಕಿ ಎಂದು ಬೊಬ್ಬೆ ಹೊಡೆಯುತ್ತಿರುವುದು ನೋಡಿದರೆ ಮೋದಿಯೇ ತಮ್ಮ ಜಮೀನಿನಲ್ಲಿ

ಉತ್ತಿ, ಬಿತ್ತಿ, ಬೆಳೆದು ಅಕ್ಕಿ ತಂದುಕೊಡುತ್ತಿರುವಂತೆ ಭಾಸವಾಗುತ್ತಿದೆ ಎಂದು ವ್ಯಂಗ್ಯವಾಡಿದೆ. 

ಅನ್ನಭಾಗ್ಯ | ಬಿಜೆಪಿಯಿಂದ ಡರ್ಟಿ ಪಾಲಿಟಿಕ್ಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ

ಗರೀಬ್ ಕಲ್ಯಾಣ್ ಯೋಜನೆ ಡಿಸೆಂಬರ್ ನಂತರ ಸ್ಥಗಿತಗೊಳ್ಳಲಿದೆ, ಆಗ ಯಾರ ಅಕ್ಕಿ ಎಂದು ಬೊಬ್ಬೆ ಹೊಡೆಯುತ್ತಾರೆ ಎಂದು ಪ್ರಶ್ನೆ ಮಾಡಿದೆ. 

ನಾವು ಭರವಸೆ ನೀಡಿದ್ದ ಮೂರನೇ ಗ್ಯಾರಂಟಿಯಾದ ಅನ್ನಭಾಗ್ಯ ಯೋಜನೆ ಇಂದಿನಿಂದ ಜಾರಿಗೆ ಬರುತ್ತಿದೆ.

ಅನ್ನಕ್ಕೆ ಕಲ್ಲು ಹಾಕುವ ಕೇಂದ್ರ ಸರ್ಕಾರದ ಕುತಂತ್ರವನ್ನೂ ಮೀರಿ ಹಣ ನೀಡುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುನ್ನೆಡೆಯುತ್ತಿದ್ದೇವೆ.

ಈಗಾಗಲೇ ನಾವು 3 ಗ್ಯಾರಂಟಿಗಳನ್ನು ನೀಡಿದರೂ ಬಿಜೆಪಿಗೆ ವಿಪಕ್ಷ ನಾಯಕ ಸಿಗುವ ಗ್ಯಾರಂಟಿ ಇಲ್ಲ!

ಗೌರವಾನ್ವಿತ ಸದನವನ್ನು, ಕನ್ನಡಿಗರನ್ನು ಕುಚೋದ್ಯ ಮಾಡುತ್ತಿದೆಯೇ ಬಿಜೆಪಿ? ಎಂದು ಮತ್ತೊಂದು ಸಂದೇಶವನ್ನು ಹಂಚಿಕೊಂಡಿದೆ. 

ಅನ್ನಭಾಗ್ಯ ಯೋಜನೆ ಬಿಜೆಪಿ ಹೇಳುವುದೇನು ?

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರವು ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಸಮಗ್ರವಾಗಿ ಅನುಷ್ಠಾನಗೊಳಿಸಿ,

ಪ್ರತಿಯೊಬ್ಬರಿಗೂ ಉಚಿತವಾಗಿ ಅಕ್ಕಿ ದೊರೆಯುವಂತೆ ಮಾಡಿ, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಗೆ ಪುಷ್ಠಿ ನೀಡಿತು.

ಆದರೆ, ಆ ಅಕ್ಕಿಯನ್ನು ತಮ್ಮದೆಂದು ಲೇಬಲ್ ಹಚ್ಚಿಕೊಂಡಿದ್ದು ಮಾತ್ರ ಸಿದ್ದರಾಮಯ್ಯರವರ ಸರ್ಕಾರ.

ಈ ಚುನಾವಣೆ ಪೂರ್ವದಲ್ಲಿ ಜನತೆಗೆ 10 ಕೆಜಿ ಅಕ್ಕಿ ನೀಡುತ್ತೇವೆಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿತ್ತು.

ಕೇಂದ್ರ ಸರ್ಕಾರದ 05 ಕೆಜಿ ಅಕ್ಕಿ ಜೊತೆ ರಾಜ್ಯ ಸರ್ಕಾರ 10 ಕೆಜಿ ಅಕ್ಕಿ ಸೇರಿ, ಒಟ್ಟು 15 ಕೆಜಿ ಅಕ್ಕಿ ರಾಜ್ಯದ ಜನತೆಗೆ ತಲುಪಬೇಕಾಗಿತ್ತು.

ಆದರೆ, ಈಗ ರಾಜ್ಯದ ಜನತೆಗೆ  ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಮಾತ್ರ ತಲುಪುತ್ತಿದೆ. 10 ಕೆಜಿ ಅಕ್ಕಿ ನೀಡಬೇಕಾಗಿದ್ದ ರಾಜ್ಯ ಸರ್ಕಾರ,

ಕೇವಲ ₹170 ನೀಡಿ "ಕೈ" ತೊಳೆದುಕೊಳ್ಳುತ್ತಿದೆ.

Annabhagya Yojana ಅನ್ನಭಾಗ್ಯ ಯೋಜನೆಯ ಬಗ್ಗೆ ಕಾಂಗ್ರೆಸ್‌ ಹೇಳಿದ್ದೇನು, ಆಗಿದ್ದೇನು, ಇದಕ್ಕೆಲ್ಲ ಕಾರಣವೇನು?

ಅಂದರೇ, ₹17ಕ್ಕೆ ಕೆಜಿ ಅಕ್ಕಿ, ಖರೀದಿಸುವ ಸಂದಿಗ್ಧ ಸ್ಥಿತಿ ಫಲಾನುಭವಿಗಳದ್ದಾಗಿದೆ.

₹17ಕ್ಕೆ ಕೆಜಿ ಅಕ್ಕಿ ಎಲ್ಲಿ ಸಿಗುತ್ತದೆ ಎಂಬುದನ್ನು ಸಿದ್ದರಾಮಯ್ಯ ಅವರು ಸ್ವಲ್ಪ ರಿಸರ್ಚ್ ಮಾಡಿ ತಿಳಿಸಬೇಕು ಎಂದು ಹೇಳಿದೆ.

ಅನ್ನಭಾಗ್ಯದ ಅಕ್ಕಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂಬ ವರದಿಗಳು ದಿನನಿತ್ಯ ಮಾಧ್ಯಮಗಳಲ್ಲಿ ಬರುತ್ತಿವೆ.

ಆದರೇ, ಅಕ್ಕಿ ಕಳ್ಳಸಾಗಾಣಿಕೆಯನ್ನು ತಡೆಯಲು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಗಮನಿಸಿದರೇ,

ಅನ್ನಭಾಗ್ಯದ ಅಕ್ಕಿಯ ಅಕ್ರಮ ಸಾಗಣೆಯಲ್ಲಿಯೂ ಸಹ ಸರ್ಕಾರ ಕಮಿಷನ್ ಹೊಡೆಯುತ್ತಿದೆ ಎಂಬ ಅನುಮಾನ ದಟ್ಟವಾಗಿದೆ ಎಂದು ಆರೋಪಿಸಿದೆ.

ಅನ್ನಭಾಗ್ಯ ಯೋಜನೆಯ ಅಕ್ಕಿ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಅನಾವಶ್ಯಕವಾಗಿ ಬೊಬ್ಬೆ ಹೊಡೆದಿದ್ದ ಸರ್ಕಾರ,

ರಾಜ್ಯದಲ್ಲಿಯೇ ರೈತರಿಂದ ಅಕ್ಕಿ ಖರೀದಿಸಿ ಎಂದರೆ ಮೀನಾಮೇಷ ಎಣಿಸಿತ್ತು‌.

ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸಿದರೇ, ಪ್ರತಿ ಕೆಜಿ ಅಕ್ಕಿಗೆ ಕಮಿಷನ್ ಹೊಡೆಯಬಹುದೆಂಬ ದುರಾಲೋಚನೆ ಸಿದ್ದರಾಮಯ್ಯ ಅವರ ಸರ್ಕಾರದ್ದಾಗಿತ್ತು.

ಆದರೇ ಅದಕ್ಕೆ ಅವಕಾಶ ಸಿಗಲಿಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರವನ್ನು ಬಾಯಿಗೆ ಬಂದಂತೆ ರಾಜ್ಯದ #ATMSarkara ಟೀಕಿಸುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದೆ.  
ಫಲಾನುಭವಿಗಳ ಖಾತೆಗೆ ಹಣ!

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ  ಅನ್ನಭಾಗ್ಯ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಿದ್ದಾರೆ.

ಇನ್ನು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹೆಚ್ಚುವರಿಯಾಗಿ ತಲಾ 5 ಕೆ.ಜಿ. ಅಕ್ಕಿಯನ್ನು ನೀಡುವ ಬದಲು ಪ್ರತಿ ಕೆ.ಜಿ.ಗೆ 34 ರೂಪಾಯಿಯಂತೆ

ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ಹಣ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ. 

ಐದು ಕೆ.ಜಿ. ಅಕ್ಕಿಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಮತ್ತು ಇನ್ನೈದು ಕೆ.ಜಿ. ಅಕ್ಕಿಯನ್ನು ರಾಜ್ಯ ಸರ್ಕಾರ ವಿತರಿಸಲಿದೆ.

ಆದರೆ, ಸಕಾಲದಲ್ಲಿ ಅಕ್ಕಿ ಹೊಂದಿಸಲು ಸಾಧ್ಯವಾಗದೆ ಇರುವುದರಿಂದ ಫಲಾನುಭವಿಗಳ ಖಾತೆಗೆ ತಾತ್ಕಾಲಿಕವಾಗಿ ಹಣ ವರ್ಗಾಯಿಸಲು ಸರ್ಕಾರ ಮುಂದಾಗಿದೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, 5 ಕೆ.ಜೆ ಹೆಚ್ಚುವರಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್‌ ಹೇಳಿತ್ತು. ಇದೀಗ ಜುಲೈ ತಿಂಗಳಿನಿಂದಲೇ ಮನೆಯ

ಯಜಮಾನ ಅಥವಾ ಯಜಮಾನಿಗೆ ಪ್ರತಿ ಫಲಾನುಭವಿಗೆ 170ರೂಪಾಯಿ ಮೊತ್ತದಂತೆ ಮನೆಯ ಯಜಮಾನ ಅಥವಾ ಯಜಮಾನಿಯ ಖಾತೆಗೆ ಹಣ ಸಂದಾಯವಾಗಲಿದೆ.