1. ಸುದ್ದಿಗಳು

ಟೈಪ್ ರೈಟರ್, ಶೀಘ್ರ ಲಿಪಿಗಾರ, ಆದೇಶ ಜಾರಿಕಾರ, ಜವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು  ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51 ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ವಿವಿಧ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನಿಷ್ಠ ವಯೋಮಿತಿ 18 ವರ್ಷ ಹೊಂದಿರಬೇಕು.  ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದವರಿಗೆ 35 ವರ್ಷ ಹಾಗೂ ಪ್ರವರ್ಗ-2(ಎ), 2(ಬಿ), 3(ಎ), 3(ಬಿ) ವರ್ಗದವರಿಗೆ ಗರಿಷ್ಠ ವಯೋಮಿತಿ 38 ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷದೊಳಗಿರಬೇಕು. 

ಅರ್ಹ ಅಭ್ಯರ್ಥಿಗಳು ಕಲಬುರಗಿ ಜಿಲ್ಲಾ ನ್ಯಾಯಾಲಯದ https://districts.ecourts.gov.in/kalaburagi ವೆಬ್‍ಸೈಟ್‍ದಲ್ಲಿ 2020ರ ಡಿಸೆಂಬರ್ 31 ರ (ರಾತ್ರಿ 11.59) ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗ ಕಾಯದೆ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ 200 ರೂ. ಇರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ. ಆನ್‍ಲೈನ್ ಮೂಲಕ ಎಸ್.ಬಿ.ಐ. ಬ್ಯಾಂಕಿನಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಲು 2021ರ ಜನವರಿ 2 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ನ್ಯಾಯಾಲಯದ ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.

Published On: 03 December 2020, 12:21 AM English Summary: Application are invited for various vacancies in District Court

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.