1. ಸುದ್ದಿಗಳು

ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ / ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

Application

ಪ್ರಸಕ್ತ 2020ನೇ ಸಾಲಿಗೆ ಕೇಂದ್ರ ಸರ್ಕಾರದಿಂದ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ (Achievers) ಮಾಡಿದ ವ್ಯಕ್ತಿ / ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಜಿ (Application invited) ಆಹ್ವಾನಿಸಲಾಗಿದೆ ಎಂದು ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಆಸಕ್ತಿಯುಳ್ಳವರು ಪ್ರಸ್ತಾವನೆಯನ್ನು ಆಂಗ್ಲ ಭಾಷೆಯಲ್ಲಿ ದ್ವಿಪ್ರತಿಯಲ್ಲಿ 2020ರ ಆಗಸ್ಟ್ 18 ರೊಳಗಾಗಿ ಕಲಬುರಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಚೇರಿಯಲ್ಲಿ ಸಲ್ಲಿಸಬೇಕು. ಅದೇ ರೀತಿ ಅರ್ಜಿಯೊಂದಿಗೆ ಎರಡು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳು (ವೈಯಕ್ತಿಕ ವಿಭಾಗ), ಅರ್ಜಿದಾರ ವ್ಯಕ್ತಿಗಳ/ಸಂಸ್ಥೆಗಳ ಸ್ವವಿವರ ಹಾಗೂ ಸಾಧನೆಗಳ ಸಾರಾಂಶ ಪೂರಕ ದಾಖಲೆ ಹಾಗೂ ಡ್ರಾಫ್ಟ್ ಸೈಟೇಶನ್ (1 ಪುಟಕ್ಕೆ ಮೀರದಂತೆ) ಸಲ್ಲಿಸಬೇಕು.

ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ www.disablilityaffairs.gov.in ವೆಬ್‍ಸೈಟ್‍ಗೆ ಸಂಪರ್ಕಿಸಲು ಕೋರಲಾಗಿದೆ.

Share your comments

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.