ಕೊರೊನಾ ಸೋಂಕಿನಿAದಾಗಿ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿರುವ ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯಯ ಸರ್ಕಾರವು ‘ಬಾಲ ಹಿತೈಷಿ’ ಯೋಜನೆಯನ್ನು ಜಾರಿಗೆ ತಂದಿದೆ.
ಕೋವಿಡ್-19 ಸಾಂಕ್ರಾಮಿಕ ಸಸೋಂಕಿನಿAದಾಗಿ ಪೋಷಕರನ್ನು ಕಳೆದುಕೊಂಡ 18 ವರ್ಷದೊಳಗಿನ ಮಕ್ಕಳಿಗೆÀ ನೈತಿಕ, ಭಾವನಾತ್ಮಕ ಹಾಗೂ ಸಾಮಾಜಿಕ ನೆರವನ್ನು ಒದಗಿಸಿ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಬೆಂಬಲ ನೀಡುವ ಉದ್ದೇಶದಿಂದ ಮಕ್ಕಳ ರಕ್ಷಣಾ ನಿರ್ದೇಶನಾಲಯವು ‘ಬಾಲ ಹಿತೈಷಿ’ (ಮಾರ್ಗದರ್ಶಕತ್ವ / ಮೆಂಟರ್ಶಿಪ್) ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆ ಅಡಿಯಲ್ಲಿ ಮಕ್ಕಳನ್ನು ಬೆಳೆಸಲು ಉತ್ಸುಕರಾಗಿರುವ ಆಸಕ್ತ ಹಾಗೂ ಜವಾಬ್ದಾರಿಯುತ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇಬ್ಬರೂ ಪೋಷಕರು ಅಥವಾ ಪೋಷಕರಲ್ಲಿ ಒಬ್ಬರನ್ನು ಕಳೆದುಕೊಂಡು ಆಘಾತಕ್ಕೆ ಒಳಾಗಾಗಿರುವ ಮತ್ತು ವಿಸೃತ ಕುಟುಂಬ/ಏಕ ಪೋಷಕರಿರುವ ಮಗುವನ್ನು ಪೋಷಕರ ಅಗಲಿಕೆ ಆಘಾತದಿಂದ ಹೊರತರುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಅರ್ಜಿದಾರರು ಈ ಮಕ್ಕಳಿಗೆ ದೀರ್ಘಕಾಲಿಕವಾಗಿ ಶೈಕ್ಷಣಿಕ ಹಾಗೂ ಸಂಬAಧಿತ ಸೌಲಭ್ಯಗಳನ್ನು ಒದಗಿಸಬೇಕು. ಜೊತೆಗೆ, ಸಾಮಾಜಿಕವಾಗಿ ಮಕ್ಕಳು ಸಮರ್ಥವಾಗಿ ಬೆಳೆಯಲು ಅಥವಾ ಸಾಮಾಜಿಕ ಅಭಿವೃದ್ಧಿ ಸಾಧಿಸಲು ಸಹಾಯ ಮಾಡಲು ಮತ್ತು ಮಾರ್ಗದರ್ಶನ ನೀಡಲು ಆಸಕ್ತಿ ಹೊಂದಿರಬೇಕು.
ಮಗುವಿಗೆ ಮಾರ್ಗದರ್ಶನ ನೀಡಲು ಉತ್ಸುಕರಾಗಿರುವ ಯಾವುದೇ ವ್ಯಕ್ತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ಮೊದಲು ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು. ಮಾರ್ಗದರ್ಶಕರಾಗಿ ನೋಂದಣಿ ಮಾಡಿಕೊಳ್ಳಲು ಇಚ್ಛಿಸುವವರು ಅರ್ಜಿ ನಮೂನೆಗಾಗಿ (ಅನುಬಂಧ1) ನಿರ್ದೇಶನಾಲಯದ ವೆಬ್‌ಸೈಟ್ https:/icps.karnataka.gov.in ಗೆ ಭೇಟಿ ನೀಡಬೇಕು. ಈ ವೆಬ್‌ಸೈಟ್‌ನಲ್ಲಿ ಡಿಜಿಟಲ್ ಅಪ್ಲಿಕೇಷನ್ ಫಾರ್ಮ್ ಲಭ್ಯವಿದ್ದು, ಈ ಲಿಂಕ್ ಮೂಲಕ ಹೆಸರು ನೋಂದಣಿ ಮಾಡಿಕೊಳ್ಳಬಹುದು ಎಂದು ನಿರ್ದೇಶನಾಲಯವು ಮಾಹಿತಿ ನೀಡಿದೆ.
ಕೋವಿಡ್‌ನಿಂದ ತಂದೆ-ತಾಯಿ ಕಳೆದುಕೊಂಡ ಅಥವಾ ಏಕ ಪೋಷಕ ಹೊಂದಿರುವ ಮಕ್ಕಳಿಗೆ ನೈತಿಕ, ಭಾವನಾತ್ಮಕ ಹಾಗೂ ಸಾಮಾಜಿಕ ನೆರವನ್ನು ಒದಗಿಸಿ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಬಾಲ ಹಿತೈಷಿ ಯೋಜನೆಯಡಿ ಬೆಂಬಲ ನೀಡಲು ಮುಂದಾದರೆ, ಮಗು ಮತ್ತು ದಾನಿಗಳ ನಡುವೆ ಸರ್ಕಾರವು ಸಂಪರ್ಕ ಕೊಂಡಿಯAತೆ ಕಾರ್ಯ ನಿರ್ವಹಿಸಲಿದೆ. ಹಾಗೇ, ಮಕ್ಕಳಿರದ ದಂಪತಿ, ದತ್ತು ಸ್ವೀಕಾರ ಕಾರ್ಯಕ್ರಮದಡಿ ನಿಯಮಾನುಸಾರ ದತ್ತು ಪಡೆಯಲು ಅವಕಾಶ ಕಲ್ಪಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಬಾಲಭವನವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಖಿ ಒನ್ ಸ್ಟಾಪ್ ಸೆಂಟರ್ ಕಟ್ಟಡ ಉದ್ಘಾಟನೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಸಖಿ ಒನ್ ಸ್ಟಾಪ್ ಸೆಂಟರ್’ ಕಟ್ಟಡವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಅ. ಜೊಲ್ಲೆ ಅವರು ಉದ್ಘಾಟಿಸಿದರು.
ಮಹಿಳೆಯರಿಗೆ ಸಂಬAಧಿಸಿದ ಯಾವುದೇ ಸಮಸ್ಯೆ, ಅಹವಾಲುಗಳನ್ನು ಸ್ವೀಕರಿಸಿ ಅವುಗಳಿಗೆ ಸಂಬAಧಿಸಿದAತೆ ತ್ವರಿತಗತಿಯಲ್ಲಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸಖಿ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಈ ವೇಳೆ ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ. ಸಿಇಒ ಡಾ.ವಿಜಯ ಮಹಾಂತೇಶ ಬಿ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ಡಿ.ಹೆಚ್.ಒ ಡಾ.ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಅಧಿಕಾರಿ ವಿಜಯ ಕುಮಾರ್ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ಸಮಗ್ರ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂಧ ಸಖಿ ಒನ್ ಸ್ಟಾಪ್ ಸೆಂಟರ್‌ಗಳನ್ನು ಆರಂಭಿಸಲಾಗಿದೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಿಸಿ, ಅದಕ್ಕೆ ಬೇಕಾದ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಸಖಿ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ದಾವಣಗೆರೆಯಲ್ಲಿ ನಿರ್ಮಿಸಿರುವ ನೂತನ ಕಟ್ಟಡವನ್ನು ಸಚಿವೆ ಶಶಿಕಲಾಜೊಲ್ಲೆ ಅವರು ಉದ್ಘಾಟಿಸಿದ್ದಾರೆ. ಈ ಯೋಜನೆಗಾಗಿ ಕೇಂದ್ರ ಸರಕಾರ ಈಗಾಗಲೇ ಪ್ರತಿ ಜಿಲ್ಲೆಗೂ ತಲಾ 48 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ.