1. ಸುದ್ದಿಗಳು

ವಿಕಲಚೇತನರ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ

ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಚೇರಿಯಿಂದ 2020-21ನೇ ಸಾಲಿಗಾಗಿ ವಿಕಲಚೇತನರ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಹಾಗೂ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಹ ವಿಕಲಚೇತನರ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2021ರ ಮಾರ್ಚ್ 5 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಯುವ ಸಬಲೀಕರಣ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 2021ರ ಫೆಬ್ರವರಿ 19 ರಂದು ನಿಗದಿಪಡಿಸಲಾಗಿತ್ತು, ಆದರೆ ಈಗ ಶಾಲಾ-ಕಾಲೇಜುಗಳು ತಡವಾಗಿ ಪ್ರಾರಂಭಿಸಿರುವ ಹಿನ್ನೆಲೆ ಹಾಗೂ ಈ ಯೋಜನೆಯಡಿ ಹೆಚ್ಚಿನ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಈ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

  ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಅಥವಾ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಕಲಬುರಗಿ ಜಿಲ್ಲಾ ವಿಕಲಚೇತನರ ಹಾಗೂ ಸಬಲೀಕರಣ ಕಚೇರಿಯಲ್ಲಿ ಸಲ್ಲಿಸಬೇಕು.  

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08472-235222, ಕಲಬುರಗಿ ತಾಲೂಕು ಪಂಚಾಯತ ಕಚೇರಿಯ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು (ಎಮ್.ಆರ್.ಡಬ್ಲ್ಯೂ) ಮೊಬೈಲ್ ಸಂಖ್ಯೆ 9972079714, ಅಫಜಲಪೂರ-9448808141, ಆಳಂದ-9483054495, ಜೇವರ್ಗಿ-9741875881, ಚಿತ್ತಾಪೂರ-9845204328, ಚಿಂಚೋಳಿ-9880671171, ಸೇಡಂ-9902417925 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Published On: 24 February 2021, 05:46 PM English Summary: Application for scholarship extended till March 5

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.