News

ನಿರುದ್ಯೋಗ ಯುವಕರಿಗಾಗಿ ಉಚಿತ ಹೊಲಿಗೆ ತರಬೇತಿ ನೀಡಲು ಅರ್ಜಿ ಆಹ್ವಾನ

16 March, 2021 9:55 AM IST By:

ಕೊಪ್ಪಳ: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದಡಿ, ಕೆನರಾ ಬ್ಯಾಂಕಿನ ಸಹಭಾಗಿತ್ವದಲ್ಲಿ ಗ್ರಾಮೀಣ ಭಾಗದ ಅರ್ಹ ಬಿ.ಪಿ.ಎಲ್ ಕುಟುಂಬದ 18 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕರಿಗಾಗಿ ಕೌಶಲ್ಯ ಆಧಾರಿತ 30 ದಿನಗಳ ಪುರುಷರ ಹೊಲಿಗೆ ತರಬೇತಿ ಹಮ್ಮಿಕೊಳ್ಳಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿದ್ದು, ನಿರುದ್ಯೋಗಿ ಯುವಕರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಅನುಕೂಲವಾಗಲಿದೆ. ಗ್ರಾಮೀಣ ಭಾಗದ ಬಿ.ಪಿ.ಎಲ್. ಕುಟುಂಬದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ತರಬೇತಿಯಲ್ಲಿ ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗೆಗಿನ ಉದ್ಯಮಶೀಲತಾ ಅಭಿವೃದ್ಧಿಯ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸುವವರಿಗೆ ಕನ್ನಡ ಓದಲು ಮತ್ತು ಬರೆಯಲು ಬರುತ್ತಿರಬೇಕು.

ತರಬೇತಿಯಲ್ಲಿ ಭಾಗವಹಿಸಲು ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಅಥವಾ ಸಂಸ್ಥೆಯ ದೂ.ಸಂ. 9483485489, 9482188780, 08284-295307 ಗೆ ಮಾರ್ಚ್.20 ರೊಳಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.