ಬಳ್ಳಾರಿ: 2023- 24 ನೇ ಸಾಲಿನ ಶೈಕ್ಷಣಿಕ ಅವಧಿಗೆ ಅನ್ವಯವಾಗುವಂತೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ Diploma Course ನಲ್ಲಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಕೋರಲಾಗಿದೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್‍ನ್ನು( English) ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ, ಪ್ರತಿ ತಿಂಗಳು ರೂ.2,500 ರಂತೆ ಶಿಷ್ಯವೇತನ( Education) ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಸಾಮಾನ್ಯ ವರ್ಗದ ಅಭ್ಯರ್ಥಿಗಳು ಜುಲೈ 01 ಕ್ಕೆ ಅನ್ವಯವಾಗುವಂತೆ 15 ರಿಂದ 23 ವರ್ಷ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ವರ್ಗದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಅರ್ಜಿಗಳನ್ನು https//khtigadag.ac.in/Admissionform.pdf ಲಿಂಕ್‍ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು.
ಡಿಪ್ಲೋಮಾ ಕೋರ್ಸ್‍ಗಾಗಿ ಲಭ್ಯವಿರುವ ಸಂಸ್ಥೆಗಳ ವಿವರ
ಕರ್ನಾಟಕದ ಗದಗ ಜಿಲ್ಲೆಯ ಬೆಟಗೇರಿಯ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ- 22 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂನ ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ- 17 ಅಭ್ಯರ್ಥಿಗಳು, ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ವೆಂಕಟಗಿರಿಯಎಸ್.ಪಿ.ಕೆ.ಎಂ ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ- 03 ಅಭ್ಯರ್ಥಿಗಳು, ಕೇರಳದ ಕಣ್ಣೂರಿನ ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ- 02 ಅಭ್ಯರ್ಥಿಗಳು ಸೇರಿದಂತೆ ಒಟ್ಟು 44 ಅಭ್ಯರ್ಥಿಗಳ ಸೀಟ್‍ಗಳನ್ನು ಕಾಯ್ದಿರಿಸಲಾಗಿದೆ.
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಲಿಂಗ್‍ಗಾಗಿ ಕರೆಯಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ನಗರದ ಅನಂತಪುರ ರಸ್ತೆಯ ಹೊಸ ಜಿಲ್ಲಾಡಳಿತ ಭವನದ ‘ ಎ ’ ಬ್ಲಾಕ್, ರೂ ನಂ. ’ ಎಫ್- 22 ’ ಒಂದನೇ ಮಹಡಿಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರವರ ಕಚೇರಿ ಸಂಪರ್ಕಿಸಬಹುದು.